ಹಿರಿಯ ನಟಿ ಲೀಲಾವತಿ ಅವರ ಮದುವೆ ಬಗ್ಗೆ ಮೊದಲ ಬಾರಿಗೆ ದಾಖಲೆ ಸಮೇತ ಮಾತಾಡಿದ್ದು ನಿರ್ದೇಶಕ ಪ್ರಕಾಶ್‌ರಾಜ್ ಮೆಹು. ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡ ಮಾಹಿತಿ ಇಲ್ಲಿದೆ.
ಮೊದಲನೆಯ ವಿಷಯ: ಲೀಲಾವತಿಯವರ ಗಂಡ ಮಹಾಲಿಂಗ ಭಾಗವತರ್ ಅನ್ನುವುದು.ಇದು ಈ ಕೆಳಗೆ ಕೊಟ್ಟಿರುವ ಲೀಲಾವತಿಯವರ ಚನ್ನೈ ಆಸ್ತಿಯ ಪತ್ರ ತಮಿಳು ಭಾಷೆಯಲ್ಲಿದೆ ಅದರಲ್ಲಿ ಮಹಾಲಿಂಗ ಭಾಗವತರ್ ಅವರ ಪತ್ನಿ ಲೀಲಾವತಿ ಅಮ್ಮಾಳ್ (ಲೀಲಾವತಿಯಮ್ಮ) ಅನ್ನುವುದು ಸ್ಪಷ್ಟವಾಗಿದೆ.
ಎರಡನೆಯ ವಿಷಯ: ವಿನೋದ್ ರಾಜ್ ಮದುವೆಯನ್ನೇ ಆಗದೆ ತಾಯಿಯ ಸೇವೆಯಲ್ಲಿ ನಿರತರಾಗಿದ್ದಾರೆ ಅನ್ನುವವರಿಗೆ ಮಾಹಿತಿ. ಈ ಕೆಳಗಿನ ಫೋಟೋದಲ್ಲಿ ಸೋಫಾಮೇಲೆ ಕುಳಿತಿರುವವರು ವಿನೋದ್ ರಾಜ್ ಹೆಂಡತಿ ಮತ್ತು ಮಗ, ಚನ್ನೈನಲ್ಲಿದ್ದಾರೆ ಮಗ ಇಂಜಿನಿಯರಿಂಗ್ ಓದುತ್ತಿದ್ದಾನೆ.
ಈ ಫ್ಯಾಮಿಲಿ ಫೋಟೋ ನನಗೆ ಸಿಕ್ಕಿ ಆರು ತಿಂಗಳ ಮೇಲಾಯ್ತು, ಆಗೇನಾದರೂ ಈ ಫೋಟೋ ಪ್ರಕಟಿಸಿದ್ದರೆ ಅವರು ಖಂಡಿತ “ಅವರು ಯಾರೋ ಅಭಿಮಾನಿಗಳು” ಅಂದು ಬಿಡುತ್ತಿದ್ದರು ಅದಕ್ಕಾಗಿ ಸೂಕ್ತ ದಾಖಲೆಗಾಗಿ ಕಾಯುತ್ತಿದ್ದೆ ಇಂದು ಗೆಳೆಯರೊಬ್ಬರು ಚನ್ನೈನಿಂದ ಈ ಮಾರ್ಕ್ಸ್ ಕಾರ್ಡ್ ಮತ್ತು ಆಸ್ತಿ ದಾಖಲೆ ಪತ್ರ ಕಳುಹಿಸಿ ಕೊಟ್ಟರು. ಆದ್ದರಿಂದ ಇಂದು ಇವನ್ನು ಬಹಿರಂಗ ಪಡಿಸಿದ್ದೇನೆ ಎಂದು ಇದೇ ವರ್ಷದ ಏಪ್ರಿಲ್‌ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.