
ಮಡಿಕೇರಿ ಹೋಬಳಿಯ ಎಸ್. ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಅಹಿತಕರ ಘಟನೆಯ ವಿಚಾರವಾಗಿ ಸದರಿ ಸ್ಥಳದಲ್ಲಿ ಪ್ರಸ್ತುತ ಉಂಟಾಗಿರುವ ಬೆಳವಣಿಗೆಗಳ ಸಂಬಂಧ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆರಕ್ಷಕ ಅಧೀಕ್ಷಕರ ಕೋರಿಕೆಯನ್ನು ಪರಿಗಣಿಸಿ ಕಾನೂನು ಸುವ್ಯವಸ್ಥೆ ಮತ್ತು ಆಂತರಿಕಾ ಭದ್ರತೆ ದೃಷ್ಟಿಯಿಂದ ಭಾರತೀಯ.

ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ನರ್ವಡೆ ವಿನಾಯಕ್ ಕಾರ್ಭಾರಿ, ಭಾ.ಆ.ಸೇ., ಉಪವಿಭಾಗಾಧಿಕಾರಿ ಹಾಗೂ ಉಪವಿಭಾಗೀಯ ದಂಡಾಧಿಕಾರಿ, ಮಡಿಕೇರಿ ಉಪವಿಭಾಗ, ಕೊಡಗು ಜಿಲ್ಲೆ ಆದ ನಾನು ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮಡಿಕೇರಿ ಹೋಬಳಿಯ, ಎಸ್.ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ಸುತ್ತಮುತ್ತಲಿನ 05 ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ದಿನಾಂಕ 30.12.2024 ರಂದು ಸಮಯ ಬೆಳಿಗ್ಗೆ 06.00 ಗಂಟೆಯಿಂದ ದಿನಾಂಕ 02-01-2025 ರ ಬೆಳಿಗ್ಗೆ 06.00 ಗಂಟೆಯವರೆಗೆ 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಪ್ರತಿಭಟನೆ, ಮೆರವಣಿಗೆ, ಕ್ಯಾಲಿ, ಜಾತಾ ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆದೇಶಿಸಿರುತ್ತೇನೆ.