• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಹೀನ್‌ ಶಾಲೆ ಪ್ರಕರಣ ; ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ – ಹೈಕೋರ್ಟ್‌ಗೆ ಸರ್ಕಾರ ವಿವರಣೆ

ನೀಲಿ by ನೀಲಿ
October 23, 2021
in ಕರ್ನಾಟಕ
0
ಶಾಹೀನ್‌ ಶಾಲೆ ಪ್ರಕರಣ ; ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ – ಹೈಕೋರ್ಟ್‌ಗೆ ಸರ್ಕಾರ ವಿವರಣೆ
Share on WhatsAppShare on FacebookShare on Telegram

ಬೀದರ್‌ನ ಶಾಹೀನ್‌ ಶಾಲೆಯಲ್ಲಿ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು 4, 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವು ಶುಕ್ರವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ADVERTISEMENT

ಶಾಹೀನ್‌ ಶಾಲೆಯಲ್ಲಿ ಸಿಎಎ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿಗೆ (ಎನ್‌ಆರ್‌ಸಿ) ಸಂಬಂಧಿಸಿದಂತೆ 4, 5 ಮತ್ತು ಆರನೇ ತರಗತಿ ವಿದ್ಯಾರ್ಥಿಗಳಿಂದ ಪ್ರಸ್ತುತಪಡಿಸಲಾದ ನಾಟಕದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ನಿಂದಿಸುವ ಸಂಭಾಷಣೆ ಇತ್ತು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸದಸ್ಯರೊಬ್ಬರು ದೂರು ದಾಖಲಿಸಿದ್ದರು. ಸಂಸತ್‌ನಲ್ಲಿ ಒಪ್ಪಿಗೆ ಪಡೆದ ಸಿಎಎ ವಿರುದ್ಧ ಮಕ್ಕಳಲ್ಲಿ ತಪ್ಪು ಮಾಹಿತಿ ಬಿತ್ತಲು ಶಾಲಾ ಆಡಳಿತ ಪ್ರಯತ್ನಿಸಿದ್ದು, ಈ ಮೂಲಕ ಕೋಮು ಪ್ರಚೋದನೆಗೆ ನಾಂದಿ ಹಾಡಿದೆ ಎಂದು ದೂರಿನಲ್ಲಿ ಪ್ರಮುಖವಾಗಿ ಆರೋಪಿಸಲಾಗಿತ್ತು. ಇದನ್ನು ಆಧರಿಸಿ ಪೊಲೀಸರು ಮಕ್ಕಳ ವಿಚಾರಣೆ ನಡೆಸಿದ್ದರು. ರಾಷ್ಟ್ರದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಕ್ಕಳನ್ನು ವಿಚಾರಣೆ ನಡೆಸಿದ್ದರು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತು ರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್‌ ಮಗದುಮ್ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ನಿನ್ನೆ (ಶುಕ್ರವಾರ) ವಿಚಾರಣೆ ಆರಂಭದಮುಖ್ಯ ನ್ಯಾಯಮೂರ್ತಿ ರಿತು ರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್‌ ಮಗದುಮ್ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು ಪೀಠ ಹಿಂದೆ ಹೊರಡಿಸಿದ್ದ ವಿಸ್ತೃತ ಆದೇಶವನ್ನು ನೆನಪಿಸಿದರು. “ನ್ಯಾಯಾಲಯದ ಹಿಂದಿನ ಆದೇಶಕ್ಕೆ ಸಂಬಂಧಿಸಿದಂತೆ ಯಾವುದೇ ಅಫಿಡವಿಟ್‌ ಸಲ್ಲಿಸಲಾಗಿಲ್ಲ. ಯಾವುದೇ ಹೇಳಿಕೆಯನ್ನೂ ನಮಗೆ ನೀಡಲಾಗಿಲ್ಲ” ಎಂದರು.

“ಪೊಲೀಸ್ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದು ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ದಿನದಂತ್ಯಕ್ಕೆ ಮೆಮೊ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರದ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದರು.

ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಮಾದರಿ ನಿಯಮಗಳು 2016 ಅನ್ನು ಕಡ್ಡಾಯವಾಗಿ ಪಾಲಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳಿಗೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸುತ್ತೋಲೆ ಕಳುಹಿಸಿದ್ದಾರೆ ಎಂದು ತಿಳಿಸಲಾಗಿದೆ… ಈ ಸಂಬಂಧ ಮೂರು ವಾರಗಳಲ್ಲಿ ಅನುಪಾಲನಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕು” ಎಂದು ಪೀಠ ಆದೇಶದಲ್ಲಿ ಹೇಳಿದೆ. ಅಲ್ಲದೇ ವಿಚಾರಣೆಯನ್ನು ಡಿಸೆಂಬರ್‌ 1ಕ್ಕೆ ಮುಂದೂಡಿದೆ.

ವಿಚಾರಣೆಯ ಹಂತದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ವಿದ್ಯಾರ್ಥಿಯೊಬ್ಬರ ತಾಯಿಯನ್ನು ಬಂಧಿಸಲಾಗಿತ್ತು. ಆನಂತರ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಬೀದರ್‌ನ ಜಿಲ್ಲಾ ನ್ಯಾಯಾಲಯವು ಶಾಹೀನ್‌ ಶಾಲೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Tags: BJPCovid 19ಕರ್ನಾಟಕ ಸರ್ಕಾರಕರ್ನಾಟಕ ಹೈಕೋರ್ಟ್‌ನರೇಂದ್ರ ಮೋದಿಬಸವರಾಜ ಬೊಮ್ಮಾಯಿಬಿಜೆಪಿವಿದ್ಯಾರ್ಥಿಗಳುಶಾಹೀನ್‌ ಶಾಲೆ
Previous Post

ಕುತ್ಲೂರೆಂಬ ಕರ್ನಾಟಕ ಕಯ್ಯೂರು, ವಿಠಲ ಮಲೆಕುಡಿಯನೆಂಬ ಅಪ್ಪು!

Next Post

ಮಂಗಳೂರಿನ ಸಿಎಎ ವಿರೋಧಿ ಗಲಭೆಯಲ್ಲಿ ಪೋಲಿಸರ ತಪ್ಪಿಲ್ಲ – ಹೈಕೊರ್ಟ್‌ಗೆ ಸರ್ಕಾರ ವಿವರಣೆ

Related Posts

Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ
Top Story

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

by ಪ್ರತಿಧ್ವನಿ
June 13, 2026
0

ಬೆಂಗಳೂರು: ರಾಜ್ಯದ ಟಿಯರ್-2 ಹಾಗೂ ಟಿಯರ್-3 ನಗರಗಳು ಮತ್ತು ಪಟ್ಟಣಗಳ ಯುವಕರಿಗೆ ಉದಯೋನ್ಮುಖ ತಂತ್ರಜ್ಞಾನಗಳ ಪ್ರವೇಶವನ್ನು ವಿಸ್ತರಿಸುವ ಹಾಗೂ ಅವರ ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ, ಕರ್ನಾಟಕ ಸರ್ಕಾರವು...

Read moreDetails
ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

June 13, 2026
Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

June 13, 2026
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಇದು ಸಾಮಾನ್ಯ ಮನುಷ್ಯನ ಬಜೆಟ್ ಉಳಿವಿನ ಹೋರಾಟ: ಬಿಜೆಪಿ ವಿರುದ್ಧ ಸುರ್ಜೆವಾಲ ಕಿಡಿ

June 13, 2026
ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

June 13, 2026
Next Post
ಮಂಗಳೂರಿನ ಸಿಎಎ ವಿರೋಧಿ ಗಲಭೆಯಲ್ಲಿ ಪೋಲಿಸರ ತಪ್ಪಿಲ್ಲ – ಹೈಕೊರ್ಟ್‌ಗೆ ಸರ್ಕಾರ ವಿವರಣೆ

ಮಂಗಳೂರಿನ ಸಿಎಎ ವಿರೋಧಿ ಗಲಭೆಯಲ್ಲಿ ಪೋಲಿಸರ ತಪ್ಪಿಲ್ಲ - ಹೈಕೊರ್ಟ್‌ಗೆ ಸರ್ಕಾರ ವಿವರಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada