• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೇಶದ್ರೋಹ ಕಾನೂನು ಮರುಪರಿಶೀಲನೆ: ಉಲ್ವಾ ಹೊಡೆದ ಕೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
May 9, 2022
in ದೇಶ
0
ದೇಶದ್ರೋಹ ಕಾನೂನು ಮರುಪರಿಶೀಲನೆ:  ಉಲ್ವಾ ಹೊಡೆದ ಕೇಂದ್ರ
Share on WhatsAppShare on FacebookShare on Telegram

ಭಾರತೀಯ ದಂಡ ಸಂಹಿತೆ ಸೆಕ್ಷನ್ 124A ಯನ್ನು (ದೇಶದ್ರೋಹ ಕಾನೂನನ್ನು) ಮರುಪರಿಶೀಲಿಸುವುದಾಗಿ ಕೇಂದ್ರ ಸರ್ಕಾರ ಸೋಮವಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ADVERTISEMENT

ಮಾನವ ಹಕ್ಕುಗಳ ಕಾಳಜಿ ಸೇರಿದಂತೆ (ದೇಶದ್ರೋಹ) ಕಾನೂನಿಗೆ ಸಂಬಂಧಿಸಿ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳ ಬಗ್ಗೆ ಸರ್ಕಾರವು ತಿಳಿದಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಸರ್ಕಾರ ಹೇಳಿದೆ. ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಮತ್ತು ಕಾನೂನನ್ನು ಮರುಪರಿಶೀಲಿಸಲು ನಿರ್ಧರಿಸಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

“ಭಾರತದಲ್ಲಿ ಕಾನೂನಿನ ಮೂಲಕ ಸ್ಥಾಪಿಸಲಾದ ಸರ್ಕಾರದ ಬಗ್ಗೆ ದ್ವೇಷ ಅಥವಾ ತಿರಸ್ಕಾರವನ್ನು ತರಲು ಪ್ರಯತ್ನಿಸುವ ಅಥವಾ ಪ್ರಚೋದಿಸುವ ಅಥವಾ (ಸರ್ಕಾರದ ವಿರುದ್ಧ) ಅಸಮಾಧಾನವನ್ನು ಪ್ರಚೋದಿಸಲು ಪ್ರಯತ್ನಿಸುವುದನ್ನು ʼದೇಶದ್ರೋಹದ ಅಪರಾಧʼವನ್ನು ಎಸಗಿದ್ದಾರೆ ಎಂದು ಪರಿಗಣಿಸಬಹುದು” ಎಂದು ಸೆಕ್ಷನ್‌ 124ಎ ಹೇಳುತ್ತದೆ.

ಆದರೆ, ಈ ಕಾನೂನು ದುರುಪಯೋಗವಾಗಿರುವುದರಿಂದ ಅದನ್ನು ತೆಗೆದು ಹಾಕಬೇಕು ಎಂದು ವಾದಿಸಿ ಪತ್ರಕರ್ತರು, ಕಾರ್ಯಕರ್ತರು ಮತ್ತು ರಾಜಕೀಯ ಮುಖಂಡರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಶನಿವಾರ, ಕೇಂದ್ರವು ದೇಶದ್ರೋಹ ಕಾನೂನನ್ನು ಮರುಪರಿಶೀಲಿಸುವ ಅಗತ್ಯವಿಲ್ಲ ಎಂದು ಪ್ರತಿಪಾದಿಸಿತ್ತು.

ಸುಪ್ರೀಂ ಕೋರ್ಟ್‌ಗೆ ಲಿಖಿತ ಸಲ್ಲಿಕೆ ನೀಡಿದ್ದ ಸರ್ಕಾರವು, ಸೆಕ್ಷನ್ 124 ಎ ಅನ್ನು ಪರಿಶೀಲಿಸಲು ಸಾಧ್ಯವಿಲ್ಲ, ಏಕೆಂದರೆ ಈಗಾಗಲೇ 1962 ರ ತೀರ್ಪಿನಲ್ಲಿ ಅದನ್ನು ಸಮರ್ಥಿಸಿದೆ ಎಂದು ಕೇದಾರನಾಥ್ ಸಿಂಗ್ ಮತ್ತು ಬಿಹಾರ ರಾಜ್ಯ ನಡುವಿನ ಪ್ರಕರಣದಲ್ಲಿ ನ್ಯಾಯಾಲಯವು ದೇಶದ್ರೋಹ ಕಾನೂನನ್ನು ಎತ್ತಿಹಿಡಿಯುವ ತೀರ್ಪು ನೀಡಿದ್ದನ್ನು ಕೇಂದ್ರ ಉಲ್ಲೇಖಿಸಿ ಸೆಕ್ಷನ್ 124 ಎ ಮರುಪರಿಶೀಲಿಸುವ ಅಗತ್ಯವಿಲ್ಲ ಎಂದು ಹೇಳಿತ್ತು.

“ನಿಬಂಧನೆಗಳ ದುರುಪಯೋಗದ ನಿದರ್ಶನಗಳು ಸಂವಿಧಾನ ಪೀಠದ ಬದ್ಧ ತೀರ್ಪನ್ನು ಮರುಪರಿಶೀಲಿಸಲು ಎಂದಿಗೂ ಸಮರ್ಥನೆಯಾಗುವುದಿಲ್ಲ” ಎಂದು ಕೇಂದ್ರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಾಡಿದ್ದರು.

ದೇಶದ್ರೋಹ ಕಾನೂನನ್ನು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠವು ಕೈಗೆತ್ತಿಕೊಂಡಿದೆ.

ಇದಕ್ಕೂ ಮುನ್ನ ಈ ಅರ್ಜಿಗಳನ್ನೇ ವಜಾ ಮಾಡಬೇಕು ಎಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ವಾದಿಸಿದ್ದರು.

ಈ ಕಾನೂನು ಸಂವಿಧಾನಬದ್ಧವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಭದ್ರತೆಯನ್ನು ಕೇದಾರನಾಥ್ ಪ್ರಕರಣದಲ್ಲೇ ಸ್ಪಷ್ಟಪಡಿಸಲಾಗಿದೆ. ಈ ಕಾನೂನಿನ ದುರ್ಬಳಕೆಯನ್ನು ತಡೆಯಲು ನ್ಯಾಯಾಲಯವು ಮಾರ್ಗಸೂಚಿಗಳನ್ನು ಹೊರಡಿಸಬಹುದು ಎಂದು ಸರ್ಕಾರದ ಪರವಾಗಿ ಅವರು ಪ್ರತಿಪಾದಿಸಿದ್ದರು. ಅಲ್ಲದೆ, ಅರ್ಜಿಗಳನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವುದನ್ನು ವಿರೋಧಿಸಿದ್ದರು.

ಅರ್ಜಿದಾರರ ಪರವಾಗಿ ಕಪಿಲ್ ಸಿಬಲ್ ವಾದ ಮಂಡಿಸಿದ್ದು, ‘ಈ ಕಾನೂನಿನ ಹಲವು ಅಂಶಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿರ್ಬಂಧಿಸುತ್ತವೆ. ಕೇದಾರನಾಥ್ ಪ್ರಕರಣದ ತೀರ್ಪಿನ ನಂತರ ಹಲವು ದಶಕಗಳು ಕಳೆದಿವೆ, ಸಾಕಷ್ಟು ಬದಲಾವಣೆಯಾಗಿದೆ’ ಎಂದು ಹೇಳಿದ್ದರು.

Tags: BJPCongress PartyCovid 19ಕೇಂದ್ರ ಸರ್ಕಾರದೇಶದ್ರೋಹ ಕಾನೂನುನರೇಂದ್ರ ಮೋದಿಬಿಜೆಪಿ
Previous Post

ರಾಜ್ಯದಲ್ಲಿ ನಾಳೆಯೂ ಮಳೆ ಮುಂದುವರಿಕೆ: ಹವಾಮಾನ ಇಲಾಖೆ ಮುನ್ಸೂಚನೆ

Next Post

ಶಾಹೀನ್ ಬಾಗ್ ತೆರವು ಕಾರ್ಯಾಚರಣೆ : ಸುಪ್ರೀಂ ಕೋರ್ಟ್‌ಗೆ ಬರಬೇಡಿ ಹೈಕೋರ್ಟಿಗೆ ಹೋಗಿ ಎಂದ ಸುಪ್ರೀಂ!

Related Posts

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?
Top Story

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

by ಪ್ರತಿಧ್ವನಿ
May 1, 2026
0

ಹಾವೇರಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮೆ ಮಾಡಲಾಗುತ್ತಿದೆ. ಕೆಲವರಿಗೆ ಅದರ ಲಾಭ...

Read moreDetails
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಶಾಹೀನ್ ಬಾಗ್ ತೆರವು ಕಾರ್ಯಾಚರಣೆ : ಸುಪ್ರೀಂ ಕೋರ್ಟ್‌ಗೆ ಬರಬೇಡಿ ಹೈಕೋರ್ಟಿಗೆ ಹೋಗಿ ಎಂದ ಸುಪ್ರೀಂ!

ಶಾಹೀನ್ ಬಾಗ್ ತೆರವು ಕಾರ್ಯಾಚರಣೆ : ಸುಪ್ರೀಂ ಕೋರ್ಟ್‌ಗೆ ಬರಬೇಡಿ ಹೈಕೋರ್ಟಿಗೆ ಹೋಗಿ ಎಂದ ಸುಪ್ರೀಂ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada