ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ನಂಜನಗೂಡು ನಗರದಲ್ಲಿ ರೈತರು ಕಪಿಲಾ ನದಿಗಳಿದು ಅರೆ ಬೆತ್ತಲೆ ಮತ್ತು ಕಲ್ಲು ಹೊತ್ತು ಪ್ರತಿಭಟನೆ ನಡೆಸುವ ಮೂಲಕ ಮೈಸೂರು ಊಟಿ ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದರು. ಇದರಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು ನಂಜನಗೂಡಿನ ಡಿ ದೇವರಾಜ ಅರಸು ಸೇತುವೆಯ ಕೆಳಗೆ ಹರಿಯುತ್ತಿರುವ ಕಪಿಲಾ ನದಿಗೆ ಇಳಿದು ಅರೆ ಬೆತ್ತಲೆಯಲ್ಲಿ ತಲೆ ಮೇಲೆ ಕಲ್ಲನ್ನು ಹೊತ್ತುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ನಂಜನಗೂಡು ಸಂಘಟನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಹಾಗು ಪ್ರಧಾನ ಕಾರ್ಯದರ್ಶಿ ಹಿಮ್ಮಾವು ರಘು ಮಾತನಾಡಿ, ನಮ್ಮ ರೈತರಿಗೇ ಬೆಳೆ ಬೆಳೆಯಲು ನೀರಿಲ್ಲದೆ ಕಂಗಾಲಾಗಿದ್ದಾರೆ.
ನಮ್ಮ ನಾಲೆಗಳಿಗೆ ಹಾಗು ಕೆರೆಗಳಿಗೆ ನೀರು ಬಿಡದೆ ತಮಿಳುನಾಡಿಗೆ ನೀರು ಬಿಟ್ಟಿರುವುದು ಖಂಡನೀಯ.
ರಾಜ್ಯದಲ್ಲಿರುವ ಸಂಸದರು ಸತ್ತು ಹೋಗಿದ್ದಾರೆ. ನಮ್ಮ ರಾಜ್ಯದಲ್ಲಿರುವ ಜಲಾಶಯಗಳು ಹಾಗೂ ನದಿಗಳನ್ನು ತಮಿಳು ನಾಡಿನವರಿಗೆ ಬರೆದುಕೊಟ್ಟುಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು
ನಮ್ಮ ಕೆರೆ ಕಟ್ಟೆಗಳಿಗೆ ಹಾಗೂ ನಾಲೆಗಳಿಗೆ ಕೂಡಲೇ ನೀರು ಬಿಡಬೇಕು ಎಂದು ಒತ್ತಾಯ ಮಾಡಿದರು.