ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ (86) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.
ರಾಜೇಶ್ ಅವರು ಏಪ್ರಿಲ್ 15, 1935 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಚಿತ್ರರಂಗದ ಬದುಕಿನಲ್ಲಿ ರಾಜೇಶ್ ಅವರು 150ಕ್ಕೂ ಹೆಚ್ಚು ನಾಯಕ ಪ್ರದಾನ ಪಾತ್ರಗಳು ಮತ್ತು ವೈವಿಧ್ಯಮಯ ಪೋಷಕ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ.
‘ನಮ್ಮ ಊರು’, ‘ಗಂಗೆ ಗೌರಿ’, ‘ಸತೀ ಸುಕನ್ಯ’, ಬೆಳುವಲದ ಮಡಿಲಲ್ಲಿ’, ‘ಕಪ್ಪು ಬಿಳುಪು’, ‘ಬೃಂದಾವನ’, ‘ಬೋರೆ ಗೌಡ ಬೆಂಗಳೂರಿಗೆ ಬಂದ’, ‘ಮರೆಯದ ದೀಪಾವಳಿ’, ‘ಪ್ರತಿಧ್ವನಿ’, ‘ಕಾವೇರಿ’, ‘ದೇವರ ಗುಡಿ’, ‘ಬದುಕು ಬಂಗಾರವಾಯ್ತು’, ‘ಸೊಸೆ ತಂದ ಸೌಭಾಗ್ಯ’, ‘ಮುಗಿಯದ ಕಥೆ’, ‘ಬಿಡುಗಡೆ’, ‘ದೇವರದುಡ್ಡು’, ‘ಕಲಿಯುಗ’, ‘ಪಿತಾಮಹ’ ಮುಂತಾದ ಚಿತ್ರಗಳಲ್ಲಿ ರಾಜೇಶರು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.