ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ರಾಜ್ಯ ಕಾಂಗ್ರೆಸ್ (Congress) ನಾಯಕರು ತೀವ್ರ ಕಸರತ್ತು ನಡೆಸುತ್ತಿದ್ದು ಈ ಮಧ್ಯೆಯೇ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (Shamanuru shivashankarppa) ಅವರು ಬಿಜೆಪಿ ಸಂಸದ ಬಿವೈ ರಾಘವೇಂದ್ರ (BY Raghavendra) ಅವರನ್ನ ಮತ್ತೊಮ್ಮೆ ಗೆಲ್ಲಿಸಿ ಎಂದು ಕರೆ ನೀಡಿ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ
![](https://pratidhvani.com/wp-content/uploads/2024/01/congress-mla-shamanur-shivashankarappa-261702569-16x9_0-jpg.webp)
ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರು ಗೆಲ್ಲಬೇಕು. ಅವರನ್ನು ಆಯ್ಕೆ ಮಾಡುವುದು ಜನರ ಕರ್ತವ್ಯ. ಬಿವೈ ರಾಘವೇಂದ್ರ ಉತ್ತಮ ಕೆಲಸ ಮಾಡಿದ್ದಾರ. ಜಿಲ್ಲೆ ಅಭಿವೃದ್ದಿ ಕೆಲಸ ಗಮನಿಸಿ ಮುಂದಿನ ಚುನಾವಣೆಯಲ್ಲಿ ಬಿವೈ ರಾಘವೇಂದ್ರ ಗೆಲ್ಲಿಸುವಂತೆ ಕರೆ ನೀಡಿದ್ದಾರೆ.
![](https://pratidhvani.com/wp-content/uploads/2024/01/BY-Raghavendra-1-jpg.webp)
ಜಿಲ್ಲೆಯ ಜನರು ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿದೆ. ಜನರ ಅಭಿಲಾಷೆಯಂತೆ ರಾಘವೇಂದ್ರ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಮುಂದಿನ 2-3 ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಮುಂದೆಯೂ ರಾಘವೇಂದ್ರರನ್ನು ಆಯ್ಕೆ ಮಾಡಬೇಕಿರುವುದು ಜನರ ಕರ್ತವ್ಯ ಎಂದಿದ್ದಾರೆ.
ಶಾಮನೂರು ಶಿವಂಕರಪ್ಪ ಅವರ ಈ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ. ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಆದ ಬಳಿಕ ಶಿವಶಂಕರಪ್ಪ ಅವರ ಈ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಹೊಸ ಮತ್ತೊಂದು ಹೊಡೆತ ಎನ್ನಬಹುದು. ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಲೋಕಸಭೆಯಲ್ಲಿ 25 ಸ್ಥಾನಗಳನ್ನು ಗೆಲ್ಲಬೇಕು ಎಂದು ತಂತ್ರಗಳನ್ನು ರೂಪಿಸುತ್ತಿದ್ದು ತಮ್ಮದೇ ಪಕ್ಷದ ಹಿರಿಯ ನಾಯಕರ ಈ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಕೊಡುವುದಲ್ಲಿ ಡೌಟ್ ಇಲ್ಲ ಎನ್ನುವಂತಾಗಿದೆ.