
ಬೆಂಗಳೂರು: ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತರಾದ ಎಂ.ಎನ್. ಅಹೋಬಲಪತಿ, ಕೆ.ನಿಂಗಪ್ಪ, ಛಾಯಾಗ್ರಾಹಕ ಕೆ.ವೆಂಕಟೇಶ್ ಅವರು ನೇಮಕವಾಗಿದ್ದಾರೆ.ಅಧ್ಯಕ್ಷರು, ಸದಸ್ಯರ ನೇಮಕದಲ್ಲಿ ಸಾಮಾಜಿಕ ನ್ಯಾಯದ ಜತೆಗೆ ಸೇವಾ ಹಿರಿತನ, ಅರ್ಹತೆ, ಸಾಮರ್ಥ್ಯಕ್ಕೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಪತ್ರಿಕಾ ಛಾಯಾಗ್ರಾಹಕರನ್ನೂ ಮಾಧ್ಯಮ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಪರಿಗಣಿಸಿರುವುದೂ ಕೂಡ ಇದೇ ಮೊದಲಾಗಿದೆ.

ಈವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿರಲಿಲ್ಲ. ಈ ಕೊರತೆಯನ್ನು ಸಿಎಂ ಸಿದ್ದರಾಮಯ್ಯ ನೀಗಿಸಿದಂತಾಗಿದೆ.ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಆಯೇಷಾ ಖಾನಂ ಅವರಿಗೆ ಹಾಗೂ ಎಲ್ಲಾ ನೂತನ ಸದಸ್ಯರುಗಳಿಗೆ ಅಭಿನಂದನೆಗಳು.
— CM of Karnataka (@CMofKarnataka) July 10, 2024
ತಮ್ಮ ಮುಂದಾಳತ್ವದಲ್ಲಿ ಪತ್ರಕರ್ತರಲ್ಲಿ ವೃತ್ತಿಪರತೆ ಮತ್ತು ವೃತ್ತಿ ಕೌಶಲದ ಸುಧಾರಣೆಗೆ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಾಧ್ಯಮ ಅಕಾಡೆಮಿ ಅರ್ಥಪೂರ್ಣವಾಗಿ ಕಾರ್ಯನಿರ್ವಹಿಸಲಿ ಎಂದು ಈ… pic.twitter.com/R7adxvWnL6
ಹಾಗೆಯೇ ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿ ಸಾಮಾಜಿಕ ಕಾಳಜಿಗಳನ್ನಿಟ್ಟುಕೊಂಡು ವೃತ್ತಿಯಲ್ಲಿ ತೊಡಗಿರುವ ಚಿತ್ರದುರ್ಗದ ಅಹೋಬಲಪತಿ ಅವರ ಜೊತೆಗೆ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದ್ದು. ಇಲ್ಲೂ ಕೂಡ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯಕ್ಕೆ ಮನ್ನಣೆ ನೀಡಲಾಗಿದೆ.ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದರು. ಈ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡಿದ ಮುಖ್ಯಮಂತ್ರಿಗಳು ಇತರೆ ಹಲವು ಅರ್ಹರ ಹೆಸರುಗಳ ನಡುವೆ ಆಯೇಷಾ ಅವರ ಹೆಸರನ್ನು ಅಂತಿಮ ಮಾಡಿ ಆದೇಶ ಹೊರಡಿಸಿದ್ದಾರೆ.