ದೇಶದಲ್ಲಿ ಮಂಗನ ಖಾಯಿಲೆ ತನ್ನ ಸೋಂಕಿನ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದು ದೆಹಲಿಯ ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಯಲ್ಲಿ(LNJP) ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್ ಸ್ಥಾಪಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಜನರು ಯಾರು ಹೆದರುವ ಅವಶ್ಯಕತೆಯಿಲ್ಲ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆದಷ್ಟು ಬೇಗ ಗುಣಮುಖರಾಗುತ್ತಾರೆ, ನಾವು ಸೋಂಕನ್ನು ತಡೆಗಟ್ಟಲು ಅತ್ಯತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಟ್ವೀಟ್ ಮಾಡಿ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಮೊದಲ ಮೂರು ಪ್ರಕರಣಗಳು ಕೇರಳದಲ್ಲಿ ಪತ್ತೆಯಾಗಿದ್ದವು. ನಾಲ್ಕನೇ ಪ್ರಕರಣವು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪತ್ತೆಯಾಗಿದೆ.