ಚಾಮರಾಜನಗರ ಹಾಲಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಪ್ರಸಾದ್ಗೆ ಚಿಕಿತ್ಸೆ ಕೊಡಿಸಲಾಗ್ತಿದೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಸದ್ಯ ಶ್ರೀನಿವಾಸ್ ಪ್ರಸಾದ್ ಸ್ಥಿತಿ ಗಂಭೀರ ಎಂದೇ ಹೇಳಲಾಗ್ತಿದೆ. ಚಾಮರಾಜನಗರ ಬಿಜೆಪಿ ಸಂಸದರಾಗಿದ್ದ ಶ್ರೀನಿವಾಸ್ ಪ್ರಸಾದ್, ಮಾರ್ಚ್ 17 ರಂದು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರು.