ಲೈಮ್ಸ್ಟೋನ್ ಗಣಿಗಾರಿಕೆ ವೇಳೆ ಭೂ ಕುಸಿತ ಉಂಟಾಗಿ 7 ಮಂದಿ ಮೃತಪಟ್ಟಿರುವ ಘಟನೆ ಛತ್ತೀಸ್ಗಢದ ಬಸ್ತಾರ್ ಜಿಲ್ಲೆಯ ಮಾಲ್ಗಾಂವ್ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಆರು ಮಹಿಳೆಯರು ಸೇರಿದಂತೆ ಓರ್ವ ಪುರುಷ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತರು ಗಣಿಯಲ್ಲಿ ಮಣ್ಣು ಹಗೆಯುವಾಗ ಭೂಕುಸಿತ ಸಂಭವಿಸಿದ್ದು ಅವಶೇಷಗಳಡಿ ಸಿಲುಕಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂಎತ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಮತು ಸಂತ್ರಸ್ತರ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದರು ಮತ್ತು ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದರು ಎಂದು ತಿಳಿಸಿದ್ದಾರೆ.