ರಾಮನಗರ: ಕ್ರಷರ್ ಕೆಲಸದ ವೇಳೆ ಸಂಭವಿಸಿದ ಭೀಕರ ದುರಂತದಲ್ಲಿ ಏಳು ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕರೆ ಮಾದಪಟ್ಟಣ ಗ್ರಾಮದಲ್ಲಿ ನಡೆದಿದೆ.

ಕಾವೇರಿ ಕಂಪನಿಗೆ ಸೇರಿದ ಕ್ರಷರ್‌ನಲ್ಲಿ ದುರಂತ ಸಂಭವಿಸಿದೆ. ಇಂದು ಬೆಳಗ್ಗೆ 7.30ರ ಸುಮಾರಿಗೆ ಕ್ರಷರ್ ಬಂಡೆ ಮೇಲೆ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬಂಡೆ ಕುಸಿದು ಏಳು ಮಂದಿ ಕಾರ್ಮಿಕರು ಮೇಲಿನಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಹಲವು ಕಾರ್ಮಿಕರು ಬಂಡೆ ಕೆಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ತಾವರೆಕರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ಗ್ರಾಮದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.






