ಬೆಂಗಳೂರು: ವಿಳಂಬವಾಗಿ ಕೇಸ್ ದಾಖಲಿಸಿದ ಕಾರಣಕ್ಕೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ತಮ್ಮ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.

ಈ ಪ್ರಕರಣದ ಎರಡು ಸೆಕ್ಷನ್ ಗಳಲ್ಲಿ ಹೈಕೋರ್ಟ್ ಸೆಕ್ಷನ್ 354 ಅಡಿಯ ಕೇಸ್(ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡುವುದು) ರದ್ದುಪಡಿಸಿತ್ತು. ಈಗ ಸೆಕ್ಷನ್ 354 ಎ ಅಡಿಯ ಕೇಸ್ ಕಾಗ್ನಿಜೆನ್ಸ್ ಪಡೆಯಲು 42 ನೇ ಎಸಿಜೆಎಂ ಕೋರ್ಟ್ ನಿರಾಕರಿಸಿದ್ದು, 354 A ಅಡಿಯ ಕೇಸ್ ಕೈಬಿಟ್ಟಿದ್ದು, ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ದೂರನ್ನು ರದ್ದುಪಡಿಸಿದಂತಾಗಿದೆ.

ಹೊಳೆನರಸಿಪುರದ ಮಹಿಳೆ ಹೆಚ್ ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಈ ಹಿಂದೆ ಇದೇ ಪ್ರಕರಣದಲ್ಲಿ ಹೆಚ್ ಡಿ ರೇವಣ್ಣ ಬಂಧನವಾಗಿ ಜಾಮೀನು ಪಡೆದಿದ್ದರು.











