ನ್ಯೂಯಾರ್ಕ್: ಶಾಲಾ ಶಿಕ್ಷಕಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.
ಅಮೆರಿಕದ ನ್ಯೂಯಾರ್ಕ್ ನಲ್ಲಿರುವ ಪ್ರತಿಷ್ಠಿತ ಡಾಲ್ಟನ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಇಂಗ್ಲೀಷ್ ಭಾಷೆ ಬೋಧನೆ ಮಾಡುತ್ತಿದ್ದ ಶಿಕ್ಷಕಿ, ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಹೀಗಾಗಿ ಶಿಕ್ಷಕಿಯನ್ನು ವಜಾಗೊಳಿಸಲಾಗಿದೆ ಎನ್ನಲಾಗಿದೆ.
ಅಲ್ಲದೇ, ಶಿಕ್ಷಕಿ ಮಾರಾ ನಾಮನ್ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ. ಈ ಶಾಲೆ ಕೂಡ ವರ್ಷಕ್ಕೆ 61 ಸಾವಿರ ಅಮೆರಿಕನ್ ಡಾಲರ್ ಟ್ಯೂಷನ್ ಶುಲ್ಕವನ್ನು ಈ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳ ಪೋಷಕರು ಭರಿಸುತ್ತಾರೆ. ಇಂಥಾ ಪ್ರತಿಷ್ಠಿತ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕಿ ಲೈಂಗಿಕ ದೌರ್ಜನ್ಯ ಕೊಡುತ್ತಿದ್ಧಾಳೆ ಎಂಬ ಆರೋಪ ಪೋಷಕರ ಆತಂಕಕ್ಕೆ ಕಾರಣವಾಗಿದೆ.