ಬಹುನಿರೀಕ್ಷಿತ ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಕ್ರಿಕೆಟ್ ಟೂರ್ನಿಯ(Cricket League) ಉದ್ಘಾಟನಾ ಸಮಾರಂಭಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭಕ್ಕೆ(opening ceremony) ಬಾಲಿವುಡ್ ತಾರೆ(Bollywood Stars)ಗಳ ದಂಡೇ ಹರಿದು ಬರುತ್ತಿದೆ.
ಬಾಲಿವುಡ್(Bollywood) ಸೂಪರ್ಸ್ಟಾರ್(Super Star) ಶಾರುಖ್ ಖಾನ್(Shah Rukh Khan) ಅವರು ಪಂದ್ಯಾವಳಿಗೆ ವಿದ್ಯುಕ್ತ ಚಾಲನೆ ನೀಡಲಿದ್ದರೆ. ಇವರೊಂದಿಗೆ ಟೈಗರ್ ಶ್ರಾಫ್, ಶಾಹಿದ್ ಕಪೂರ್, ವರುಣ್ ಧವನ್, ಕಾರ್ತಿಕ್ ಆರ್ಯನ್ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಸೇರಿದಂತೆ ಇನ್ನೂ ಹಲವು ತಾರೆಯರು ಉದ್ಘಾಟನಾ ಸಮಾರಂಭದ ಅಂಗವಾಗಿ ನಡೆಯುವ ಮನರಂಜನಾ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲಿದ್ದಾರೆ.
ಬಾಲಿವುಡ್ ನಟ-ನಟಿಯರು ನಡೆಸಿಕೊಡುವ ಮನರಂಜನಾ ಕಾರ್ಯಕ್ರಮದ ಬಳಿಕ ಮುಂಬೈ ಇಂಡಿಯನ್ಸ್ (MI) ಮತ್ತು ಡೆಲಿ ಕ್ಯಾಪಿಟಲ್ಸ್ (DC) ತಂಡಗಳು ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
#WPL2024 #WomenCricket #T20League #Bangaluru #ShahRukhKhan