ಬಾಲವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ವಿರುದ್ಧದ ಡ್ರಗ್ಸ್ ಪ್ರಕರಣದಿಂದ ಎನ್ ಸಿಬಿ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ಆರ್ಯನ್ ಖಾನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ಮುಂಬೈ ಮತ್ತು ಗೋವಾ ನಡುವಣ ಐಷರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ಮತ್ತು ೬ ಮಂದಿಯ ವಿರುದ್ಧ ಎಫ್ ಐಆರ್ ದಾಖಲಿಸಿತ್ತು.
ಆರ್ಯನ್ ಖಾನ್ ಮತ್ತು ಸ್ನೇಹಿತರು ಡ್ರಗ್ಸ್ ಬಳಸಿದ್ದಾರೆ ಆರೋಪದ ಮೇಲೆ 26 ದಿನಗಳ ಕಾಲ ಜೈಲಿನಲ್ಲಿ ಕಳೆಯುವಂತಾಗಿತ್ತು. ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಸ್ಪಷ್ಟ ಸಾಕ್ಷ್ಯ ಇಲ್ಲದೇ ಬಂಧಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು.
ಇದೀಗ ಆರ್ಯನ್ ಖಾನ್ ಮತ್ತು ಸ್ನೇಹಿತರು ಸೇರಿದಂತೆ 6 ಮಂದಿ ವಿರುದ್ಧದ ಆರೋಪವನ್ನು ಕೈಬಿಟ್ಟ ಎನ್ ಸಿಬಿ ಕ್ಲೀನ್ ಚಿಟ್ ನೀಡಿದೆ.