ಬೆಂಗಳೂರು: ರಾಜ್ಯದಲ್ಲಿ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮೊಟ್ಟ ಮೊದಲನೆಯದಾಗಿ ಶಕ್ತಿ ಯೋಜನೆ ಜಾರಿಗೊಳಿಸಿದ್ದು, ಈಗ 100 ದಿನಗಳನ್ನು ಪೂರೈಸಿದೆ. ಈ ಶಕ್ತಿ ಯೋಜನೆಯಡಿ 100 ದಿನದಲ್ಲಿ 62,55 ಕೋಟಿ ಮಹಿಳೆಯರು ಬಸ್‌ನಲ್ಲಿ ಪ್ರಯಾಣ ಮಾಡಿದ್ದು, ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ 1,456 ಕೋಟಿ ರೂ.ಗೆ ತಲುಪಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನತೆ 135 ಸ್ಥಾನಗಳನ್ನು ಕೊಡುವ ಮೂಲಕ ಅಧಿಕಾರಕ್ಕೆ ತಂದಿದ್ದಾರೆ. ಇನ್ನು ನುಡಿದಂತೆ ನಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ಗ್ಯಾರಂಟಿ ಯೋಜನೆಯಾಗಿ ಜೂನ್ 11ರಂದು ‘ಶಕ್ತಿ ಯೋಜನೆ’ ಜಾರಿಗೆ ತರಲಾಗಿತ್ತು. ಈಗ ಶಕ್ತಿ ಯೋಜನೆ 100 ದಿನಗಳ ಸಂಭ್ರಮವನ್ನು ಆಚರಣೆ ಮಾಡುತ್ತಿದೆ. ಮೊದಲೆರಡು ತಿಂಗಳು ಹೆಚ್ಚಿನ ಪ್ರಮಾಣದಲ್ಲಿ ಸಂಚಾರ ಮಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಆಗಸ್ಟ್‌ನಲ್ಲಿ ಕೊಂಚ ಕಡಿಮೆಯಾಗಿದೆ.