ಬೆಂಗಳೂರು: ಮುತ್ಸದಿ ರಾಜಕಾರಣಿ ಶಾಮನೂರು ಶಿವಶಂಕರಪ್ಪ(94) ವಯೋಸಹಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿದ್ದ ಶಿವಶಂಕರಪ್ಪ ಈ ಹಿಂದೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು ಆಗಿದ್ದ ಶಿವಶಂಕರಪ್ಪ ಕಳೆದ 1 ತಿಂಗಳಿನಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಸಂಜೆ 6.45ಕ್ಕೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.







