ಕೇತಗಾನಹಳ್ಳಿ ಒತ್ತುವರಿ ಪ್ರಕರಣ (Ketaganahalli encroachment case), ರಾಮನಗರ ಜಿಲ್ಲೆ (Ramnagar district) ಮರುನಾಮಕರಣ ವಿಚಾರಗಳಿಗೆ ಸಂಬಂಧಪಟ್ಟಂತೆ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ನಿನ್ನೆ (ಮಾ.೨೦) ಡಿಕೆ ಶಿವಕುಮಾರ್ (Dk Shivakumar) ವಾಗ್ದಾಳಿ ನಡೆಸಿದ್ದರು.ಈ ದ್ವೇಷದ ರಾಜಕಾರಣ ಕುಮಾರಸ್ವಾಮಿ DNA ಯಲ್ಲಿದೆ ಎಂದು ಕಿಡಿಕಾರಿದ್ದರು.

ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಹೆಚ್.ಡಿ ಕುಮಾರಸ್ವಾಮಿ ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ!
ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್’ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು.. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ.

ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು? ಎಂದು ಅಕ್ಷರಶಃ ವಾಗ್ದಾಳಿ ನಡೆಸಿದ್ದಾರೆ.