• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶರಣ್ ಅಭಿನಯದ “ಛೂಮಂತರ್” ಜನವರಿ 10ರಂದು ಬಿಡುಗಡೆ..!!

ಪ್ರತಿಧ್ವನಿ by ಪ್ರತಿಧ್ವನಿ
December 10, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಡಿಯೋ, ವಿಶೇಷ, ಸಿನಿಮಾ, ಸೌಂದರ್ಯ
0
Share on WhatsAppShare on FacebookShare on Telegram

ಸಂಕ್ರಾಂತಿ ಸಮಯಕ್ಕೆ ಬಹಳ ವರ್ಷಗಳ ನಂತರ ಕನ್ನಡ ಚಿತ್ರವೊಂದರ ಬಿಡುಗಡೆ

ADVERTISEMENT

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, “ಕರ್ವ”‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಹೊಸವರ್ಷದ ಆರಂಭದಲ್ಲಿ ಹಾಗೂ ಸಂಕ್ರಾಂತಿ ಸಮೀಪದಲ್ಲಿ ಅಂದರೆ ಜನವರಿ 10 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಂಕ್ರಾಂತಿ ಸಮಯದಲ್ಲಿ ತೆಲುಗು, ತಮಿಳಿನ‌ ದೊಡ್ಡದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿದ್ದವು. ಆದರೆ ಕನ್ನಡದಲ್ಲಿ ಯಾವುದೇ ಚಿತ್ರಗಳು ಸಂಕ್ರಾಂತಿ ಸಮಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಬಿಡುಗಡೆಯಾಗಿಲ್ಲ. ಬಹಳ ವರ್ಷಗಳ ನಂತರ ಕನ್ನಡದ “ಛೂ ಮಂತರ್” ಚಿತ್ರವನ್ನು ಸಂಕ್ರಾಂತಿ ಸಮಯಕ್ಕೆ ನಿರ್ಮಾಪಕ ತರುಣ್ ಶಿವಪ್ಪ ಬಿಡುಗಡೆ ಮಾಡುತ್ತಿದ್ದಾರೆ.

ಟೀಸರ್ ಬಿಡುಗಡೆ ಹಾಗೂ ಚಿತ್ರದ ದಿನಾಂಕ ಘೋಷಣೆ ಮಾಡಲು ಆಯೋಜಿಸಲಾಗಿದ್ದ ಸಮಾರಂಭಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್‌ ಎಂ ಸುರೇಶ್, ನಿರ್ಮಾಪಕ ಕೆ.ಮಂಜು ಸೇರಿದಂತೆ ಅನೇಕ ಗಣ್ಯರು ಆಗಮಿಸಿ ಶುಭ ಕೋರಿದರು. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Siddaramaiah: ಎಸ್ ಎಂ ಕೃಷ್ಣ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..! #smkrishna #siddaramaiah

ಇಡೀ ಚಿತ್ರತಂಡದ ಪರಿಶ್ರಮದಿಂದ “ಛೂ ಮಂತರ್” ಉತ್ತಮವಾಗಿ ಬಂದಿದೆ. ಬಹು ನಿರೀಕ್ಷಿತ ಈ ಚಿತ್ರ ಜನವರಿ 10 ರಂದು ಬಿಡುಗಡೆಯಾಗಲಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದರು.

ಇದೊಂದು ಡಾರ್ಕ್ ಹ್ಯೂಮರ್ ಜಾನರ್ ನ ಹಾರಾರ್ ಚಿತ್ರ. ಉತ್ತರ ಕಾಂಡ, ಶ್ರೀಲಂಕ, ಮೈಸೂರು, ಬೆಂಗಳೂರು ಮುಂತಾದ ಕಡೆ ಅರವತ್ತು ದಿನಗಳ ಚಿತ್ರೀಕರಣ ಮಾಡಿದ್ದೇವೆ. ಬೆಂಗಳೂರಿನಲ್ಲಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಹಾಕಲಾಗಿದ್ದ ಅದ್ದೂರಿ ಸೆಟ್ ನಲ್ಲೇ ಹೆಚ್ಚಿನ ಚಿತ್ರೀಕರಣ ನಡೆದಿದೆ. ರವಿವರ್ಮ ಸಾಹಸ ನಿರ್ದೇಶನ‌ ಮಾಡಿದ್ದಾರೆ. ಅನೂಪ್ ಅವರ ಛಾಯಾಗ್ರಹಣ ಹಾಗೂ ಶರಣ್ ಅವರು ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಅದ್ಭುತವಾಗಿದೆ ಎಂದರು ನಿರ್ದೇಶಕ ನವನೀತ್.

ತರುಣ್ ಸುಧೀರ್ ಈ ಚಿತ್ರಕ್ಕೆ ಓಂಕಾರ ಹಾಕಿದರು. ದರ್ಶನ್ ಅವರು ಶೀರ್ಷಿಕೆ ನೀಡಿದರು. ಅಲ್ಲಿಂದ ಚಿತ್ರದ ಜರ್ನಿ ಆರಂಭವಾಯಿತು. ನವನೀತ್ ಅವರ ನಿರ್ದೇಶನದ ಈ ಚಿತ್ರವನ್ನು ತರುಣ್ ಹಾಗೂ ಮಾನಸ ತರುಣ್ ಅವರು ಅದ್ದೂರಿಯಾಗಿ‌ ನಿರ್ಮಾಣ‌ ಮಾಡಿದ್ದಾರೆ.‌ ಸುಮಾರು ವರ್ಷಗಳಿಂದ ಸಾಮಾನ್ಯವಾಗಿ ಸಂಕ್ರಾಂತಿ ಸಮಯಕ್ಕೆ ಕನ್ನಡ ಚಿತ್ರಗಳನ್ನು ಬಿಡುಗಡೆ‌ ಮಾಡುತ್ತಿರಲಿಲ್ಲ. ಆದರೆ ತರುಣ್ ಅವರು ಸಂಕ್ರಾಂತಿ ಸಮಯಕ್ಕೆ ಚಿತ್ರ ಬಿಡುಗಡೆ‌ ಮಾಡುತ್ತಿದ್ದಾರೆ. ಉತ್ತಮ‌ ಕಥಾಹಂದರ ಹೊಂದಿರುವ ಈ ಚಿತ್ರ ಗೆದ್ದೇ ಗೆಲ್ಲುತ್ತದೆ ಎಂಬ ನಂಬಿಕೆ ನನ್ನದು ಹಾಗೂ ಚಿತ್ರತಂಡದು. ಮುಂದೆ ಇದೇ ದಿನಾಂಕದಲ್ಲಿ ತಮ್ಮ ಚಿತ್ರವನ್ನು ಬಿಡುಗಡೆ ಮಾಡೋಣ ಎನ್ನುವಷ್ಟು ಈ ಚಿತ್ರ ಯಶಸ್ವಿಯಾಗಲಿ ಎಂದರು ನಾಯಕ ಶರಣ್.

ನಾನು ನಾಯಕನಾಗಿ ನಟಿಸಿದ್ದ‌ ಹಾಗೂ ನನ್ನ ಮತ್ತು ಶರಣ್ ಅವರ ಕಾಂಬಿನೇಶನ್ ನಲ್ಲಿ ಮೂಡಿ ಬಂದಿದ್ದ “ಉಪಾಧ್ಯಕ್ಷ” ಕಳೆದ ಜನವರಿಯಲ್ಲಿ ಬಿಡುಗಡೆಯಾಗಿತ್ತು. ಈ ಜನವರಿಯಲ್ಲಿ ನಮ್ಮಿಬ್ಬರ ಕಾಂಬಿನೇಶ್ ನಲ್ಲಿ ಬಂದಿರುವ ಈ ಚಿತ್ರ ಬಿಡುಗಡೆಯಾಗುತ್ತಿದೆ. ಆದರೆ ಈ ಚಿತ್ರ ನಮ್ಮಿಬ್ಬರ ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಎಂದು ನಟ ಚಿಕ್ಕಣ್ಣ ತಿಳಿಸಿದರು.

ಶರಣ್ ಅವರ ಜೊತೆಗೆ ನಟಿಸಬೇಕೆಂಬ ಆಸೆ ಈ ಚಿತ್ರದ ಮೂಲಕ‌ ಈಡೇರಿದೆ ಎಂದು ನಟಿ ಮೇಘನಾ‌ ಗಾಂವ್ಕರ್ ತಿಳಿಸಿದರು. ಉತ್ತಮ ತಂಡದೊಂದಿಗೆ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದು ನಟಿ ಅದಿತಿ ಪ್ರಭುದೇವ ಹೇಳಿದರು. ಚಿತ್ರದಲ್ಲಿ ಅಭಿನಯಿಸಿರುವ ಪ್ರಭು ಮುಂಡ್ಕರ್, ದಿಲೀಪ್‌ ರಾಜ್, ಧರ್ಮ, ನರಸಿಂಹ ಜಾಲಹಳ್ಳಿ, ರಂಜನಿ ರಾಘವನ್ ಸಹ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನಿರಂಜನ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: aditi prabhudevChoomanthar Kannada MoiveK Manjukannada cinemaMeghana GaovnkarN M SureshRanjani RaghavanRavivarmasandalwoodsharanTarun ShivappaTarun Sudhiruttara kanda
Previous Post

IGNITE ಸೂಪರ್ ಕ್ಲಬ್ ನ ಡಿಜೆ ಪಾರ್ಟಿಯಲ್ಲಿ ಬೆಂಗಳೂರಿಗರನ್ನು ಕುಣಿಸಿದ ಸನ್ನಿ ಲಿಯೋನ್

Next Post

ಚಾಮರಾಜಪೇಟೆಯಲ್ಲಿ ಕಣಕ್ಕಿಳಿದು ಅಚ್ಚರಿ ಮೂಡಿಸಿದ್ದ ಎಸ್‌. ಎಂ. ಕೃಷ್ಣ

Related Posts

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!
Top Story

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 11, 2026
0

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ...

Read moreDetails
ದೇಶಾದ್ಯಂತ ‘ಎಸ್‌ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ! ಈ ತಪ್ಪು ಮಾಡಿದರೆ ಜೈಲು ಗ್ಯಾರಂಟಿ

ದೇಶಾದ್ಯಂತ ‘ಎಸ್‌ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ! ಈ ತಪ್ಪು ಮಾಡಿದರೆ ಜೈಲು ಗ್ಯಾರಂಟಿ

March 11, 2026
ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

March 11, 2026
ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

March 10, 2026
ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

March 10, 2026
Next Post

ಚಾಮರಾಜಪೇಟೆಯಲ್ಲಿ ಕಣಕ್ಕಿಳಿದು ಅಚ್ಚರಿ ಮೂಡಿಸಿದ್ದ ಎಸ್‌. ಎಂ. ಕೃಷ್ಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada