• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮ ರಾಷ್ಟ್ರೀಯ ಭದ್ರತೆ ಸಾಕ್ಷ್ಯಚಿತ್ರದಿಂದ ಧಕ್ಕೆಯಾಗುವಷ್ಟು ದುರ್ಬಲವಾಗಿದೆಯೇ? ತರೂರ್‌ ಪ್ರಶ್ನೆ

Any Mind by Any Mind
January 26, 2023
in Top Story, ದೇಶ
0
ನಮ್ಮ ರಾಷ್ಟ್ರೀಯ ಭದ್ರತೆ ಸಾಕ್ಷ್ಯಚಿತ್ರದಿಂದ ಧಕ್ಕೆಯಾಗುವಷ್ಟು ದುರ್ಬಲವಾಗಿದೆಯೇ? ತರೂರ್‌ ಪ್ರಶ್ನೆ
Share on WhatsAppShare on FacebookShare on Telegram

ಗುಜರಾತ್‌ ಹತ್ಯಾಕಾಂಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವನ್ನು ವಿವರಿಸುವ ಬಿಬಿಸಿ ಸಾಕ್ಷ್ಯಚಿತ್ರವನ್ನು ವಿರೋಧ ಪಕ್ಷಗಳು, ವಿವಿಧ ಹೋರಾಟಗಾರರು ದೇಶದ ಹಲವೆಡೆ ಪ್ರದರ್ಶಿಸಿದ್ದಾರೆ. ಕೇಂದ್ರ ಸರ್ಕಾರವು ಬಿಬಿಸಿ ಸಾಕ್ಷ್ಯಚಿತ್ರವನ್ನು ಸುಳ್ಳು ಮತ್ತು ಅಜೆಂಡಾ ಎಂದು ಹೇಳಿ ನಿಷೇಧಿಸಿದೆಯಾದರೂ, ವಿರೋಧ ಪಕ್ಷಗಳು ದೇಶದ ಹಲವೆಡೆ ಅದನ್ನು ಪ್ರದರ್ಶಿಸಿದೆ.  

ADVERTISEMENT

ಇದೇ ಹಿನ್ನೆಲೆಯಲ್ಲಿ  ಕೇರಳದ ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಪುತ್ರ ಅನಿಲ್ ಕೆ ಆಂಟನಿ ಅವರು ಪಕ್ಷದ ನಿಲುವನ್ನು ಧಿಕ್ಕರಿಸಿ ರಾಜಿನಾಮೆ ಕೊಟ್ಟಿದ್ದಾರೆ. ಬಿಬಿಸಿ ಸಾಕ್ಷ್ಯಚಿತ್ರ ದೇಶದ ಸಂಸ್ಥೆಗಳ ಬಗ್ಗೆ ಅತ್ಯಂತ ಅಪಾಯಕಾರಿ ಅಭಿಪ್ರಾಯ ಮೂಡಿಸುತ್ತದೆ ಹಾಗೂ ಸಾರ್ವಭೌಮತೆಗೆ ಧಕ್ಕೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.

 ಬಿಬಿಸಿ ಸಾಕ್ಷ್ಯಚಿತ್ರವನ್ನು ಅಪಾಯಕಾರಿ, ಇದು ಭಾರತದ ಸಾರ್ವಭೌಮತೆಗೆ ಧಕ್ಕೆ ತರುತ್ತದೆ ಎಂಬ ಅನಿಲ್ ಆಂಟೋನಿ ಅವರ ವಾದಕ್ಕೆ ಪ್ರತಿಕ್ರಿಯಿಸಿದ ತಿರುವನಂತಪುರಂನ ಲೋಕಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್, ಅನಿಲ್‌ ಅವರ ವಾದವು “ಅಪ್ರಬುದ್ಧ” ಎಂದು ಹೇಳಿದ್ದಾರೆ.

ಬಿಬಿಸಿಯ ಡಾಕ್ಯುಮೆಂಟರಿಯನ್ನು ನೋಡಬೇಕೋ ನೋಡಬಾರದೋ ಎಂಬ ಆಯ್ಕೆಯ ಸ್ವಾತಂತ್ರ್ಯ ದೇಶದ ಜನಕ್ಕೆ ಇದೆ. ಯಾವುದೇ ವಿಷಯದ ಬಗ್ಗೆ ಡಾಕ್ಯುಮೆಂಟರಿ ಮಾಡುವ ಹಕ್ಕು ಬ್ರಿಟೀಶ್ ಪ್ರಸಾರ ಸಂಸ್ಥೆಗೆ ಇಲ್ಲ ಎಂದು ಯಾರು ಹೇಳಲು ಸಾಧ್ಯ? ಡಾಕ್ಯುಮೆಂಟರಿ ವೀಕ್ಷಿಸುವುದಕ್ಕೆ ದೇಶದ ಸಂವಿಧಾನ ಎಲ್ಲಾ ರೀತಿಯ ಹಕ್ಕನ್ನು ನೀಡಿದೆ ಎಂದು ಶಶಿ ತರೂರ್ ಹೇಳಿದ್ದಾರೆ. 

“ಅನಿಲ್ ದೃಷ್ಟಿಕೋನವನ್ನು ನಾನು ಒಪ್ಪುವುದಿಲ್ಲ. ಅವರದು ಅಪಕ್ವ ನಿಲುವು. ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವವು ಸಾಕ್ಷ್ಯಚಿತ್ರದಿಂದ ಧಕ್ಕೆಯಾಗುವಷ್ಟು ದುರ್ಬಲವಾಗಿದೆಯೇ?” ಎಂದು ತರೂರ್ ಪ್ರಶ್ನಿಸಿದ್ದಾರೆ.

Tags: BJPCongress Partyಅನಿಲ್ ಕೆ ಆಂಟನಿಗುಜರಾತ್‌ ಹತ್ಯಾಕಾಂಡಪ್ರಧಾನಿ ನರೇಂದ್ರ ಮೋದಿಬಿಜೆಪಿಬಿಬಿಸಿ ಸಾಕ್ಷ್ಯಚಿತ್ರಶಶಿ ತರೂರ್
Previous Post

ಅದಾನಿ ಬೆದರಿಕೆಗೆ ಬಗ್ಗಲ್ಲ, ನಮ್ಮ ವಿರುದ್ಧ ಮೊಕದ್ದಮೆ ಹೂಡಲಿ: ಹಿಂಡೆನ್‌ಬರ್ಗ್ ರಿಸರ್ಚ್ ಸವಾಲು

Next Post

ಬಾಲ ಪ್ರಶಸ್ತಿ ಪಡೆದ ಬೆಂಗಳೂರಿನ ಈ ಪೋರನ ಐಕ್ಯೂ ಐನ್‌ಸ್ಟೈನ್‌ಗಿಂತಲೂ ಹೆಚ್ಚು.!

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಬಾಲ ಪ್ರಶಸ್ತಿ ಪಡೆದ ಬೆಂಗಳೂರಿನ ಈ ಪೋರನ ಐಕ್ಯೂ ಐನ್‌ಸ್ಟೈನ್‌ಗಿಂತಲೂ ಹೆಚ್ಚು.!

ಬಾಲ ಪ್ರಶಸ್ತಿ ಪಡೆದ ಬೆಂಗಳೂರಿನ ಈ ಪೋರನ ಐಕ್ಯೂ ಐನ್‌ಸ್ಟೈನ್‌ಗಿಂತಲೂ ಹೆಚ್ಚು.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!