
ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ದಂಪತಿಗೆ ED ದೊಡ್ಡ ಶಾಕ್ ಕೊಟ್ಟಿದೆ. ಜಾರಿ ನಿರ್ದೇಶನಾಲಯ ಬರೋಬ್ಬರಿ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹಾಗೂ ಶಿಲ್ಪಾ ಶೆಟ್ಟಿ ಅವರು ಫ್ಲಾಟ್ ಅನ್ನು ವಶಕ್ಕೆ ಪಡೆದಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ತನಿಖೆ ನಡೆಸುತ್ತಿರುವ ED ಇಂದು ರಾಜ್ ಕುಂದ್ರಾ ಅವರಿಗೆ ಸಂಬಂಧ ಪಟ್ಟ 97.79 ಕೋಟಿ ರೂಪಾಯಿ ಆಸ್ತಿಯನ್ನು ವಶಕ್ಕೆ ಪಡೆದಿದೆ. ಇದರ ಜೊತೆಗೆ ಮುಂಬೈನ ಜುಹುನಲ್ಲಿರುವ ಫ್ಲಾಟ್ ಅನ್ನು ತನ್ನ ಸುಪರ್ದಿಗೆ ಪಡೆದುಕೊಂಡಿದೆ. ಜುಹುನಲ್ಲಿರುವ ಫ್ಲಾಟ್ ನಟಿ ಶಿಲ್ಪಾ ಶೆಟ್ಟಿ ಅವರ ಹೆಸರಿನಲ್ಲಿತ್ತು. ಉದ್ಯಮಿ ಹಾಗೂ ಬಾಲಿವುಡ್ ನಟ ರಾಜ್ ಕುಂದ್ರಾ ಅವರನ್ನು ಬಿಟ್ಕಾಯಿನ್ ಸೇರಿದಂತೆ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗಿತ್ತು. ರಾಜ್ ಕುಂದ್ರಾ ಅವರಿಗೆ ಸಂಬಂಧಪಟ್ಟ ಸ್ಥಿರ ಮತ್ತು ಚರ ಆಸ್ತಿಯ ಜೊತೆಗೆ ಪುಣೆಯಲ್ಲಿರುವ ಬಂಗ್ಲೆ ಮತ್ತು ಷೇರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 2017ರಲ್ಲೇ ಇ.ಡಿ ಅಧಿಕಾರಿಗಳು ಬಿಟ್ ಕಾಯಿನ್ ಅಲ್ಲಿ 6,600 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ತನಿಖೆ ನಡೆಸಿತ್ತು.

ಈ ಪ್ರಕರಣದಲ್ಲಿ ಬಿಟ್ಕಾಯಿನ್ ಮೂಲಕ ಹಲವರಿಗೆ ಶೇಕಡಾ 10 ರಷ್ಟು ಹಣ ರಿಟರ್ನ್ ಮಾಡುವ ಭರವಸೆ ನೀಡಿ ಮೋಸ ಮಾಡಿದ ಆರೋಪ ಕೇಳಿ ಬಂದಿತ್ತು. ಇದೇ ಹಗರಣದಲ್ಲಿ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಇದೀಗ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದೆ