ಶಿರಾ: ಕೆಎಸ್’ಆರ್’ಟಿಸಿ ಬಸ್ ಪಲ್ಟಿಯಾದ ಪರಿಣಾಮ 25 ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಅರೇಹಳ್ಳಿ ಗ್ರಾಮದ ಸಮೀಪ ಶುಕ್ರವಾರ ಸಂಭವಿಸಿದೆ.
ತಾಲ್ಲೂಕಿನ ತಾಳಗುಂದ ಗ್ರಾಮದಿಂದ ಶಿರಾಗೆ ಬರುತ್ತಿದ್ದ ಬಸ್ ಅರೇಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ತೀವ್ರವಾಗಿ ಗಾಯಗೊಂಡಿದ್ದ ಚಿಕ್ಕಗೂಳ ಗ್ರಾಮದ ನಾಗಮ್ಮ, ಸಿದ್ದಗಂಗಪ್ಪ ಹಾಗೂ ಬಡವನಹಳ್ಳಿ ಗ್ರಾಮದ ಹೊನ್ನಪ್ಪ ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಉಳಿದವರನ್ನು ಶಿರಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.