ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ದಿಢೀರನೆ ರಾಜ್ಯಪಾಲರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬೆನ್ನಲ್ಲೇ ಶಿವಸೇನೆಯ ಬಂಡಾಯ ಶಾಸಕರು ಮುಂಬೈಗೆ ಮರಳಿದ್ದಾರೆ.
ಅಸ್ಸಾಂನ ಗುವಾಹಟಿಯಲ್ಲಿ ಕಳೆದ ಕೆಲವು ದಿನಗಳಿಂದ ತಂಗಿದ್ದ ಏಕನಾಥ್ ಶಿಂಧೆ ನೇತೃತ್ವದ ಬಂಡಾಯದ ಶಾಸಕರು ಮಂಗಳವಾರ ರಾತ್ರಿ ದಿಢೀರನೆ ಮುಂಬೈಗೆ ಮರಳಿದ್ದಾರೆ.
ಇದಕ್ಕೂ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ದೇವೇಂದ್ರ ಫಡ್ನವೀಸ್ ರಾಜ್ಯಪಾಲರನ್ನು ಭೇಟಿ ಮಾತುಕತೆ ನಡೆಸಿದ್ದಾರೆ. ಆದರೆ ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆಯೇ ಎಂಬುದು ಇನ್ನೂ ಗೊಂದಲವಿದೆ.