ಉತ್ತರಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗವಿದೆ ಎನ್ನವುದು 2024 ರ ಲೋಕಸಭೆ ಚುನಾವಣೆಯ ಗಿಮಿಕ್ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಸಂಸದ ಶಫೀಕರ್ ರಹಮಾನ್ ಬಾರ್ಕ್ ಭಾನುವಾರ ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಶಫೀಕರ್, “2024 ರ ಚುನಾವಣೆಯ ಕಾರಣದಿಂದ ಈತರ ವಿವಾದಗಳು ಸೃಷ್ಟಿಯಾಗುತ್ತಿವೆ. ಜ್ಞಾನವಾಪಿ ಮಸೀದಿಯಲ್ಲಿ ‘ಶಿವಲಿಂಗ’ ಇಲ್ಲ. ಆದರೆ ಅಯೋಧ್ಯೆಯಲ್ಲಿ “ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದ್ದರೂ, ಅಲ್ಲಿ ಮಸೀದಿ ಇದೆ ಎಂದು ನಾನು ಈಗಲೂ ಹೇಳುತ್ತೇನೆ ಎಂದು ಹೇಳಿದ್ದಾರೆ.

“ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಮಸೀದಿಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಸರ್ಕಾರ ಈ ರೀತಿ ನಡೆದುಕೊಳ್ಳಬಾರದು. ಸರ್ಕಾರ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮದಿಂದ ನಡೆಯಬೇಕು. ಇಲ್ಲಿ ಕಾನೂನಿನ ಬದಲಿಗೆ ಬುಲ್ಡೋಜರ್ ನಿಯಮವಿದೆ” ಎಂದು ಅವರು ಆರೋಪಿಸಿದರು.