• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ “ಶಿವಮ್ಮ” ಚಿತ್ರ ಜೂನ್ 14 ರಂದು ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
June 3, 2024
in ಸಿನಿಮಾ
0
ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ “ಶಿವಮ್ಮ” ಚಿತ್ರ ಜೂನ್ 14 ರಂದು ಬಿಡುಗಡೆ
Share on WhatsAppShare on FacebookShare on Telegram

ಇದು ರಿಷಭ್ ಶೆಟ್ಟಿ ನಿರ್ಮಾಣದ ಚಿತ್ರ

ADVERTISEMENT

ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಅವರು ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಮೂಲಕ ನಿರ್ಮಾಣ ಮಾಡಿರುವ ಚಿತ್ರ “ಶಿವಮ್ಮ”. ಗ್ರಾಮೀಣ ಸೊಗಡಿನ ಈ ಚಿತ್ರ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿಶ್ವದ ಹದಿನೇಳಕ್ಕೂ ಹೆಚ್ಚಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಹಲವು ಪ್ರಶಸ್ತಿಗಳು ಈ ಚಿತ್ರಕ್ಕೆ ದೊರಕಿದೆ. “ಶಿವಮ್ಮ” ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಭ್ ಶೆಟ್ಟಿ ತೀರ್ಮಾನಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು.

ನಾನು ವಿಜಯ ಕರ್ನಾಟಕ ಪತ್ರಿಕೆ ನಡೆಸುವ ಕಿರು ಚಿತ್ರೋತ್ಸವಕ್ಕೆ ಹೋದಾಗ ನಿರ್ದೇಶಕ ಜೈಶಂಕರ್ ಆರ್ಯರ್ ಅವರ ಪರಿಚಯವಾಯಿತು. ಆನಂತರ ನಮ್ಮ “ಕಥಾ ಸಂಗಮ” ಚಿತ್ರದ ನಿರ್ದೇಶಕರಲ್ಲಿ ಅವರು ಒಬ್ಬರಾದರು‌‌‌. ಆನಂತರ ಜೈಶಂಕರ್ ಅವರು “ಶಿವಮ್ಮ” ಚಿತ್ರದ ಕಥೆ ಕುರಿತಾಗಿ ಹೇಳಿದರು. ಕಥೆ ಇಷ್ಟವಾಯಿತು. ನಿರ್ಮಾಣ ಆರಂಭಿಸಿದ್ದೆವು. ಕೋವಿಡ್ ಗೂ ಮುನ್ನ ಆರಂಭವಾದ ಚಿತ್ರವಿದು. ಉತ್ತರ ಕರ್ನಾಟಕದ ಯರೇಹಂಚಿನಾಳ ನಿರ್ದೇಶಕರ ಊರು. ಈ ಚಿತ್ರದಲ್ಲಿ ನಟಿಸಿರುವ “ಶಿವಮ್ಮ” ಪಾತ್ರಧಾರಿ ಶರಣಮ್ಮ ಚಟ್ಟಿ ಅವರ ಊರು ಕೂಡ ಅದೆ. ಆ ಊರಿನ ಪ್ರತಿಭೆಗಳನ್ನು ಬಳಸಿಕೊಂಡು ನಿರ್ದೇಶಕರು ಈ ಸಿನಿಮಾ ಮಾಡಿದ್ದಾರೆ‌. ಈವರೆಗೂ ಹದಿನೇಳು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ “ಶಿವಮ್ಮ” ಪ್ರದರ್ಶನವಾಗಿ ಪ್ರಶಂಸೆ ಪಡೆದುಕೊಂಡಿದೆ. ಜನರಿಗೂ ಈ ಚಿತ್ರ ಇಷ್ಟವಾಗಲಿದೆ. ಏಕೆಂದರೆ ನಾನು ಈ ಚಿತ್ರ ನೋಡಿದ್ದೇನೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾಗೆ ಸಿಕ್ಕ ಮೆಚ್ಚುಗೆ ನೋಡಿ ಖುಷಿಯಾಯಿತು. ಈಗ ಈ ಚಿತ್ರವನ್ನು ಜನರ ಮುಂದೆ ತರುತ್ತಿದ್ದೇನೆ. ಇದೇ ಜೂನ್ 14 ಚಿತ್ರ ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ. ಬೆಂಗಳೂರಿನಲ್ಲಿ ಮಲ್ಟಿಪ್ಲೆಕ್ಸ್ ಗಳಲ್ಲಿ ಬಿಡುಗಡೆಯಾದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ‌. “ಶಿವಮ್ಮ” ಎಂಬ ಹೊಸ ನಾಯಕಿಯನ್ನು ಈ ಚಿತ್ರದ ಮೂಲಕ ಪರಿಚಯ ಮಾಡುತ್ತಿದ್ದೇವೆ.‌ ನಿಮ್ಮೆಲ್ಲರ ಪ್ರೋತ್ಸಾಹ ನಮ್ಮ ಚಿತ್ರಕ್ಕಿರಲಿ ಎಂದರು ನಿರ್ಮಾಪಕ ರಿಷಭ್ ಶೆಟ್ಟಿ.

ನಾನು ಮೂಲತಃ ಐಟಿ ಉದ್ಯೋಗಿ. ಬೆಳೆದಿದ್ದು ಬೆಂಗಳೂರಿನಲ್ಲೇ. ಆದರೆ ಯರೇಹಂಚಿನಾಳ ನನ್ನ ತಂದೆಯ ಊರು. ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸುತ್ತಿದ್ದ ನನಗೆ ನನ್ನ ಊರಿನ ಬಗ್ಗೆ ಸಿನಿಮಾ ಮಾಡುವ ಆಸೆಯಾಯಿತು. ಹಾಗಾಗಿ ನಮ್ಮ ಊರಿಗೆ ಹೋದೆ. ಕೋವಿಡ್ ನಿಂದಾಗಿ ಒಂದು ವರ್ಷ ಅಲ್ಲೇ ಇರಬೇಕಾಯಿತು. ಅದು ನನಗೆ ಅನುಕೂಲವಾಯಿತು. ಅಲ್ಲಿನ ಜನರ ಹಾಗೂ ಅಲ್ಲಿನ ಸಂಸ್ಕೃತಿ ಬಗ್ಗೆ ತಿಳಿದುಕೊಳ್ಳಲು ಹೆಚ್ಚು ಸಮಯ ಸಿಕ್ಕಿತ್ತು. ರಿಷಭ್ ಶೆಟ್ಟಿ ಅವರು ನಿರ್ಮಾಣಕ್ಕೆ ಮುಂದಾದರು. ನಮ್ಮ ಊರಿನವರಾದ ಶರಣಮ್ಮ ಚಟ್ಟಿ “ಶಿವಮ್ಮ”ನ ಪಾತ್ರಕ್ಕೆ ಆಯ್ಕೆಯಾದರು. ಅದೇ ಊರಿನ ಹೆಚ್ಚಿನ ಜನರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆನಂತರ ಚಿತ್ರೀಕರಣ ಪೂರ್ಣವಾಗಿ “ಶಿವಮ್ಮ” ಚಿತ್ರ ತೆರೆಗೆ ಬರಲು ಸಿದ್ದವಾಯಿತು. ಬಿಡುಗಡೆಗೂ ಮುನ್ನ ಒಂದುವರ್ಷದಿಂದ ಸಾಕಷ್ಟು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಈ ಚಿತ್ರ ಪ್ರದರ್ಶನವಾಗಿದೆ. ಜೂನ್ 14 ಚಿತ್ರ ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ ಜೈಶಂಕರ್ ಆರ್ಯರ್ ತಿಳಿಸಿದರು.

ನಿರ್ದೇಶಕ ಜೈಶಂಕರ್ ಅವರ ತಾಯಿಯನ್ನು ಮಾತನಾಡಿಸಲು ಹೋದಾಗ, ನನ್ನನ್ನು ನೋಡಿದ ಜೈಶಂಕರ್ ಅವರು ಸಿನಿಮಾದಲ್ಲಿ ಮಾಡುತ್ತೀರಾ ಎಂದರು. ನಮಗೆ ಇದೆಲ್ಲಾ ಹೊಸತು. ಯಾವಾಗಲಾದರು ಒಮ್ಮೆ ಸಿನಿಮಾ ನೋಡಿ ಗೊತ್ತಿದೆ‌ ಅಷ್ಟೇ. ಆನಂತರ ನಮ್ಮ ಮನೆಯವರ ಹಾಗು ಊರಿನ ಹಿರಿಯರ ಅನುಮತಿ ಪಡೆದು ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡೆ. ಚಿತ್ರತಂಡದವರು ನಮ್ಮನೆಲ್ಲಾ ಚೆನ್ನಾಗಿ ನೊಡಿಕೊಂಡಿದ್ದಾರೆ. ನಿರ್ದೇಶಕರು ಹಾಗು ತಂಡದವರು ನಟನೆ ಗೊತ್ತಿಲ್ಲದ ನಮಗೆ ನಟಿಸುವುದನ್ನು ಕಲಿಸಿದ್ದಾರೆ ಎಂದು “ಶಿವಮ್ಮ” ಪಾತ್ರಧಾರಿ ಶರಣಮ್ಮ ಚಟ್ಟಿ ಹೇಳಿದರು.

ಚಿತ್ರದಲ್ಲಿ ನಟಿಸಿರುವ ಚೆನ್ನಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ ಹಾಗೂ ಶೃತಿ ಕೊಂಡೇನಹಳ್ಳಿ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ನಟ ಪ್ರಮೋದ್ ಶೆಟ್ಟಿ ಚಿತ್ರಕ್ಕೆ ಶುಭ ಕೋರಿದರು.

Tags: ChalanachitrotsavaMovieRishabha ShettyShivamma
Previous Post

ವಾಲ್ಮೀಕಿ ನಿಗಮ ಹಗರಣ ಪ್ರಕರಣದ ತನಿಖೆ ಚುರುಕು ! ಡಿಜಿಟಲ್ ಎವಿಡೆನ್ಸ್ ಕಲೆಹಾಕಲು ಮುಂದಾದ SIT ! 

Next Post

ಬೆಂಗಳೂರು ಗ್ರಾಮಾಂತರ ಲೋಕಸಭೆ ಗೆಲುವು ಯಾರಿಗೆ

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post

ಬೆಂಗಳೂರು ಗ್ರಾಮಾಂತರ ಲೋಕಸಭೆ ಗೆಲುವು ಯಾರಿಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada