• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಖ್ಯಾತ ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಪ್ರತಿಧ್ವನಿ by ಪ್ರತಿಧ್ವನಿ
August 12, 2022
in ಸಿನಿಮಾ
0
ಖ್ಯಾತ ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ
Share on WhatsAppShare on FacebookShare on Telegram

ADVERTISEMENT

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಾಯಕ ಶಿವಮೊಗ್ಗ ಸುಬ್ಬಣ್ಣ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

83 ವರ್ಷ ವಯಸ್ಸಿನ ಶಿವಮೊಗ್ಗ ಸುಬ್ಬಣ್ಣಗೆ ಹೃದಯಾಘಾತವಾಗಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

1979ರಲ್ಲಿ ‘ಕಾಡು ಕುದುರೆ’ ಚಲನಚಿತ್ರಕ್ಕೆ ಕಾಡು ಕುದುರೆ ಓಡಿ ಬಂದಿತ್ತಾ ಹಾಡನ್ನು ಸುಬ್ಬಣ್ಣ ಹಾಡಿದ್ದರು. ಈ ಹಾಡಿಗೆ ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ ರಜತ ಕಮಲ ರಾಷ್ಟ್ರ ಪ್ರಶಸ್ತಿ ಅವರಿಗೆ ಒಲಿದಿತ್ತು. ರಜತ ಕಮಲ ರಾಷ್ಟ್ರ ಪ್ರಶಸ್ತಿಗೆ ಭಾಜನರಾದ ಮೊದಲ ಕನ್ನಡಿಗ ಸುಬ್ಬಣ್ಣರಾಗಿದ್ದರು.

1985ರಲ್ಲಿ ರಾಜ್ಯೋತ್ಸವ ಪುರಸ್ಕಾರ, 1988ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪುರಸ್ಕಾರ, 1999ರಲ್ಲಿ ಸಂತ ಶಿಶುನಾಳ ಷರೀಫ ಪ್ರಶಸ್ತಿ ಲಭಿಸಿದ್ದು, 2008ರಲ್ಲಿ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಸುಬ್ಬಣ್ಣ ಪಡೆದಿದ್ದರು.

ಸುಬ್ಬಣ್ಣ ಅವರು ಶಿವಮೊಗ್ಗ ಜಿಲ್ಲೆಯ ನಗರ ಎಂಬ ಸಣ್ಣ ಊರಿನಲ್ಲಿ 1938ರ ಡಿಸೆಂಬರ್ 14ರಂದು ಜನಿಸಿದರು. ತಂದೆ ಗಣೇಶರಾಯರು, ತಾಯಿ ರಂಗನಾಯಕಿ. ತಾತ ಶಾಮಣ್ಣ, ನಂತರ ಎಂ. ಪ್ರಭಾಕರ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿದರು. ಕವಿಗೀತೆಗಳನ್ನು ಹಾಡುವುದರಲ್ಲಿ ಆಕರ್ಷಿತರಾದ ಸುಬ್ಬಣ್ಣ ಅವರು, ಕುವೆಂಪು, ಬೇಂದ್ರೆ ಹಾಗೂ ನಾಡಿನ ಇನ್ನಿತರ ಶ್ರೇಷ್ಠ ಕವಿಗಳ ಕವಿತೆಗಳನ್ನು ರಾಗ ಸಂಯೋಜಿಸಿ ಹಾಡುವುದರ ಮೂಲಕ ಮನೆ ಮಾತಾದರು.

ಬಿ.ಎ, ಬಿ.ಕಾಂ ಮತ್ತು ಎಲ್‌ಎಲ್‌ಬಿ ಪದವೀಧರಾದ ಶಿವಮೊಗ್ಗ ಸುಬ್ಬಣ್ಣ ಅವರು 1982ರಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಬಂದು ನೆಲೆಸಿದರು.

ಆಕಾಶವಾಣಿ ಎಂ.ಎಸ್.ಐ.ಎಲ್. ಪ್ರಾಯೋಜಕತ್ವದಲ್ಲಿ ಪ್ರಸಾರ ಮಾಡಿದ ಜನಪ್ರಿಯ ಕರ‍್ಯಕ್ರಮದಲ್ಲಿ ‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ…’ ‘ಬಿದ್ದೀಯಬ್ಬೇ ಮುದುಕಿ..’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿದ ಸುಬ್ಬಣ್ಣ ಮನೆ ಮಾತಾದರು.

Tags: BJPCongress Partyಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ನಾನು ಉಪ ರಾಷ್ಟ್ರಪತಿ ಆಕಾಂಕ್ಷಿ ಆಗಿರಲಿಲ್ಲ: ನಿತೀಶ್‌ ಕುಮಾರ್‌

Next Post

ಅಗ್ನಿಪಥ್ ಯೋಜನೆಯು ಭಾರತೀಯ ಪ್ರಜಾಪ್ರಭುತ್ವದ ಶವಪೆಟ್ಟಿಗೆಗೆ ಹೊಡೆಯಲಿರುವ ಕೊನೆಯ ಮೊಳೆ? ಭಾಗ-೧

Related Posts

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?
ಸಿನಿಮಾ

ಕೊನೆಯ ಉಸಿರಿಗಾಗಿ ಜೀವದ ಓಟ!; ದಿಲೀಪ್ ರಾಜ್ ಉಳಿಸಿಕೊಳ್ಳಲು ಪತ್ನಿ ನಡೆಸಿದ ಕಣ್ಣೀರಿನ ಹೋರಾಟ ಹೀಗಿತ್ತು!

by ಪ್ರತಿಧ್ವನಿ
May 14, 2026
0

ಬೆಂಗಳೂರು: ಜನಪ್ರಿಯ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಮೇ 13ರ ಮುಂಜಾನೆ ಹೃದಯಾಘಾತದಿಂದ ಅವರು...

Read moreDetails
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

May 5, 2026
ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

May 5, 2026
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

May 2, 2026
Next Post
ಅಗ್ನಿಪಥ್ ಯೋಜನೆಯು ಭಾರತೀಯ ಪ್ರಜಾಪ್ರಭುತ್ವದ ಶವಪೆಟ್ಟಿಗೆಗೆ ಹೊಡೆಯಲಿರುವ ಕೊನೆಯ ಮೊಳೆ? ಭಾಗ-೧

ಅಗ್ನಿಪಥ್ ಯೋಜನೆಯು ಭಾರತೀಯ ಪ್ರಜಾಪ್ರಭುತ್ವದ ಶವಪೆಟ್ಟಿಗೆಗೆ ಹೊಡೆಯಲಿರುವ ಕೊನೆಯ ಮೊಳೆ? ಭಾಗ-೧

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada