ಈಗಾಗಲೇ ಟೈಟಲ್, ಟೀಸರ್ ಹಾಗೂ ಹಾಡುಗಳ ಮೂಲಕ ಸಿನಿರಸಿಕರ ಗಮನ ಸೆಳೆದಿರುವ ಬಹು ನಿರೀಕ್ಷಿತ ಧರಣಿ ಮಂಡಲ ಮಧ್ಯದೊಳಗೆ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್‌ಅನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಾಯಕ ನಟ ವಸಿಷ್ಠ ಸಿಂಹ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ.
ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಟ ವಸಿಷ್ಠ ಸಿಂಹ ಚಿತ್ರದಲ್ಲಿ ಪ್ರತಿಯೊಂದು ಅಂಶಗಳು ಕೂಡ ಗಮನ ಸೆಳೆಯುತ್ತಿದೆ. ಯಂಗ್ ಟೀಂ ಸೇರಿಕೊಂಡು ಇಷ್ಟು ಒಳ್ಳೆಯ ಸಿನಿಮಾವನ್ನು ಕಟ್ಟಿಕೊಟ್ಟಿದೆ ಅಂದ್ರೆ ತುಂಬಾ ಖುಷಿಯ ವಿಚಾರ. ಟ್ರೇಲರ್ ಬಹಳಾನೇ ಖುಷಿ ಕೊಡ್ತು. ಮ್ಯೂಸಿಕ್, ಡೈಲಾಗ್, ಕ್ಯಾಮೆರಾ ವರ್ಕ್ ತುಂಬಾನೇ ಚೆನ್ನಾಗಿ ಮೂಡಿ ಬಂದಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಶುಭಹಾರೈಸಿದ್ದಾರೆ.
ನಿರ್ದೇಶಕ ಶ್ರೀಧರ್ ಶಿಕಾರಿಪುರ ಮಾತನಾಡಿ ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ನಮ್ಮ ಸುತ್ತಮುತ್ತ ಇರುವವರ ಕಥೆಯೇ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ. ಹೈಪರ್ ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಕಥಾಹಂದರದ ಸಿನಿಮಾವಿದು. ಬಾಕ್ಸಿಂಗ್ ನಲ್ಲಿ ಅಪಾರ ಆಸಕ್ತಿ ಇರುವ ಹುಡುಗನ ಬದುಕಿನಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆಯಲಾದ ಕಥೆ ಚಿತ್ರದಲ್ಲಿದೆ. ಪ್ರೀತಿ, ಸೆಂಟಿಮೆಂಟ್ ಎಳೆಯನ್ನೂ ಹೊತ್ತ ಈ ಚಿತ್ರ ಖಂಡಿತ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ ಎಂದು ತಿಳಿಸಿದ್ದಾರೆ.
ನಾಯಕ ನಟ ನವೀನ್ ಶಂಕರ್ ಮಾತನಾಡಿ ಗುಳ್ಟು ನಂತರ ಕೇಳಿದ ಇಂಟ್ರಸ್ಟಿಂಗ್ ಸಬ್ಜೆಕ್ಟ್ ಇರುವ ಕಥೆ ಇದಾಗಿದೆ. ಚಿತ್ರದಲ್ಲಿ ಆದಿ ಪಾತ್ರವನ್ನು ನಿರ್ವಹಿಸಿದ್ದೇನೆ. ಬಾಕ್ಸಿಂಗ್ ನಲ್ಲಿ ಸಾಧನೆ ಮಾಡಬೇಕು ಎಂದುಕೊಂಡಿರುವ ಹುಡುಗನ ಪಾತ್ರ. ಗುಳ್ಟು ಸಿನಿಮಾಗಿಂತ ಡಿಫ್ರೆಂಟ್ ಆದ ಪಾತ್ರವನ್ನು ಇಲ್ಲಿ ನಿರ್ವಹಿಸಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಡಿಸೆಂಬರ್ 2ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಮನವಿ ಮಾಡಿದ್ದಾರೆ.

ನಾಯಕ ನಟಿ ಐಶಾನಿ ಶೆಟ್ಟಿ ಮಾತನಾಡಿ ನಿರ್ದೇಶಕರು ಕ್ರೈಂ ಡ್ರಾಮಾ ಸಿನಿಮಾ ಎಂದಾಗ ನಾನು ಸ್ವಲ್ಪ ಯೋಚನೆ ಮಾಡ್ದೆ, ಆದ್ರೆ ಕಥೆ ಕೇಳಿ ತುಂಬಾ ಖುಷಿ ಆಯ್ತು. ಇಲ್ಲಿವರೆಗೂ ನಾನು ಮಾಡಿರುವ ಪಾತ್ರಕ್ಕಿಂತ ಕಂಪ್ಲೀಟ್ ಡಿಫ್ರೆಂಟ್ ಆಗಿರುವ ಪಾತ್ರ ನಿರ್ವಹಿಸಿದ್ದೇನೆ. ಶ್ರೇಯ ಎನ್ನುವ ಪಾತ್ರವನ್ನು ನಿರ್ವಹಿಸಿದ್ದೇನೆ. ಡೋಂಟ್ ಕೇರ್ ಆಟಿಟ್ಯೂಡ್ ಇರುವ ಬೋಲ್ಡ್ ಹುಡುಗಿ ಪಾತ್ರ. ಈ ಚಿತ್ರದ ಭಾಗವಾಗಿರೋದಕ್ಕೆ ತುಂಬಾ ಖುಷಿ ಇದೆ. ಚಿತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಎಲ್ಲರೂ ಈ ಚಿತ್ರಕ್ಕೆ ಸಪೋರ್ಟ್ ಮಾಡಿ ಎಂದು ಹೇಳಿದ್ದಾರೆ.
ಇನ್ನು ಚಿತ್ರ ತಂಡದಲ್ಲಿ ದೊಡ್ಡ ತಾರಾ ಬಳಗವೇ ಇದ್ದು ಗುಳ್ಟು ಖ್ಯಾತಿಯ ನವೀನ್ ಶಂಕರ್ ನಾಯಕನಾಗಿ ನಟಿಸಿದ್ದಾರೆ, ನಾಯಕಿಯಾಗಿ ಸ್ಯಾಂಡಲ್ವುಡ್ ಶಾಕುಂತಲೆ ಐಶಾನಿ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ಇನ್ನುಳಿದಂತೆ ತಾರಾಗಣದಲ್ಲಿ ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಕರಿ ಸುಬ್ಬು, ದಿ || ಮೋಹನ್ ಜುನೇಜಾ, ಕನ್ನಡಿಗ ಚಿತ್ರ ಖ್ಯಾತಿಯ ಜಯಶ್ರೀ ಆರಾಧ್ಯ, ಶಾಂಭವಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಈ ಚಿತ್ರವನ್ನು ಓಂಕಾರ್ ನಿರ್ಮಾಣ ಮಾಡಿದ್ದು ಸಹ ನಿರ್ಮಾಪಕರಾಗಿ ಕಾಂಚನ್ ಹಾಗು ಗೌತಮಿ ರೆಡ್ಡಿ ಸಾಥ್ ನೀಡಿದ್ದಾರೆ. ಕ್ಯಾಮರಾಮ್ಯಾನ್ ಆಗಿ ಕೀರ್ತನ್ ಪೂಜಾರಿ ಕೆಲಸ ಮಾಡಿದ್ದು ಬಕ್ಕೇಶ್ ಹಾಗು ಕಾರ್ತಿಕ್ ಸಂಗೀತ ಸೋಯೋಜಿಸಿದ್ದಾರೆ ಉಜ್ವಲ್ ಚಂದ್ರ ಸಂಕಲನ ಚಿತ್ರಕ್ಕಿದೆ.
Wishing the best geleya @Nwinshankar for #DharaniMandalaMadhyadolage https://t.co/uGtHl4slwJ pic.twitter.com/xdmqYiXfGl
— Dhananjaya (@Dhananjayaka) November 26, 2022