ಗಣಿ ಧನಿ ಜರ್ನಾಧನ್ ರೆಡ್ಡಿ ಪುತ್ರ ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ನೀಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇನ್ನು ಹೆಸರಿಡದ ಈ ಚಿತ್ರ ಏಕಕಾಲದಲ್ಲಿ ಕನ್ನಡ ಹಾಗೂ ತೆಲುಗಿನಲ್ಲಿ ತೆರೆ ಕಾಣುತ್ತಿದೆ.
ಮಾಯಾಬಜಾರ್ ಖ್ಯಾತಿ ರಾಧಾಕೃಷ್ಣ ರೆಡ್ಡಿ ಈ ಚಿತ್ರವನ್ನ ನಿರ್ದೇಶಿಸುತತಿದ್ದು ಟಾಲಿವುಡ್‌ನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲಂಸ್ ಈ ಚಿತ್ರಕ್ಕೆ ಬಂಡವಾಳ ಹೂಡಿದೆ.

ಇನ್ನು ಚಿತ್ರೀಕರಣ ಭರಿದಂದ ಸಾಗಿದ್ದು ಆದಷ್ಟು ಬೇಗ ಚಿತ್ರತಂಡ ಎಲ್ಲವನ್ನು ರಿವೀಲ್ ಮಾಡು ಪ್ಲಾನ್ ಹಾಕಿಕೊಂಡಿದೆ. ಇನ್ನು ಸೂಟಿಂಗ್ ಸಮಯದಲ್ಲಿ ಕರ್ನಾಟಕ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಸರ್ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಕಿರೀಟಿ ಹಾಗೂ ಜೆನಿಲಿಯಾ ಭಾಗದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಕೆಲಕಾಲ ಅಲ್ಲಿಯೇ ಸಮಯ ಕಳೆದ ಶಿವಣ್ಣ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಚಿತ್ರ ತಂಡ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಕೂಡ ಉಪಸ್ಥಿತರಿದ್ದರು.
ಇನ್ನು ಹೆಸರಿಡದ ಈ ಚಿತ್ರದಲ್ಲಿ ಕಿರೀಟಿಗೆ ಜೋಡಿಯಾಗಿ ಕಿಸ್ ಖ್ಯಾತಿಯ ನಟಿ ಶ್ರೀಲೀಲಾ ನಟಿಸುತ್ತಿದ್ದು ರಾಕ್‌ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಸಂಯೋಜಿಸುತ್ತಿದ್ದು ಬಾಹುಬಲಿಯ ಕಣ್ಣು ಎಂದೇ ಖ್ಯಾತಿ ಪಡೆದಿರುವ ಕೆ.ಸೆಂಥಿಲ್ ಕುಮಾರ್ ಛಾಯಾಗ್ರಹಣ ಈ ಚಿತ್ರಕ್ಕಿದು ಪೀಟರ್ ಹೇನ್ಸ್ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.