• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಿವರಾಮ ಕಾರಂತ ಬಡಾವಣೆ ಮನೆಗಳ ನೆಲಸಮ: ಸರಕಾರ, ಬಿಡಿಎ ವಿರುದ್ಧ ಹೆಚ್ ಡಿಕೆ ಕಿಡಿ

Any Mind by Any Mind
October 25, 2021
in ಕರ್ನಾಟಕ
0
ಶಿವರಾಮ ಕಾರಂತ ಬಡಾವಣೆ ಮನೆಗಳ ನೆಲಸಮ: ಸರಕಾರ, ಬಿಡಿಎ ವಿರುದ್ಧ ಹೆಚ್ ಡಿಕೆ ಕಿಡಿ
Share on WhatsAppShare on FacebookShare on Telegram

ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದ ಮನೆಗಳನ್ನು ನೆಲಸಮ ಮಾಡುವುದನ್ನು ತಡೆಯಲು ಹೋದ ಜೆಡಿಎಸ್ ಪಕ್ಷದ ದಾಸರಹಳ್ಳಿ‌ ಕ್ಷೇತ್ರದ ಶಾಸಕ ಮಂಜುನಾಥ್‌ ಅವರನ್ನು ಪೊಲೀಸರು ಬಂಧಿಸಿರುವುದು ಅತ್ಯಂತ ಖಂಡಿನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ADVERTISEMENT

ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ಬಡಾವಣೆಯ ಜನರ ಸಂಕಷ್ಟಕ್ಕೆ ಸಂಬಂಧಿಸಿ ಹೋರಾಟಗಾರರು, ಸ್ಥಳೀಯ ನಿವಾಸಿಗಳನ್ನು ಒಳಗೊಂಡಂತೆ ಒಂದು ಸಭೆ ಕರೆಯಿರಿ, ನಾನೂ ಬರುತ್ತೇನೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಆದರೆ, ಸಭೆಗೆ ಕಾಲಾವಕಾಶವವನ್ನೇ ನೀಡದೇ ಈಗ ಏಕಾಎಕಿ ಮನೆಗಳನ್ನು ಒಡೆಸುತ್ತಿರುವುದು ಸರಿಯಲ್ಲ” ಎಂದರು.

ಜನ ಸಾಲ ಮಾಡಿ ಮನೆಗಳನ್ನು ಕಟ್ಟಿದ್ದಾರೆ. ಈ ಬಡಾವಣೆ ನಿರ್ಮಾಣ ಆದಾಗ ಆರಂಭಿಕ ಹಂತದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ನೋಟಿಫಿಕೇಶ್‌ ಮಾಡಿ, ಆಮೇಲೆ ಕೆಲ ಕಡೆ ಡಿನೋಟಿಫಿಕೇಷನ್‌ ಮಾಡಿ ಎನ್‌ಒಸಿಗಳನ್ನೂ ಕೊಟ್ಟು ಬಿಡಿಎ ಆಯುಕ್ತರು, ಅಧಿಕಾರಿಗಳು ಹಣ ಲೂಟಿ ಹೊಡೆಯುವ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಇದೆಲ್ಲವನ್ನೂ ಅಧಿಕಾರಿಗಳು ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಆರೋಪ ಮಾಡಿದರು.

ನ್ಯಾಯಾಲಯದಲ್ಲಿ ಸರಿಯಾಗಿ ವಾದ ಮಂಡನೆ ಮಾಡದೇ, ಸಮರ್ಪಕ ಮಾಹಿತಿಯನ್ನೂ ನೀಡದೇ ಅಧಿಕಾರಿಗಳು ಮತ್ತು ಸರಕಾರ ಅಮಾಯಕರ ಜೀವನದ ಜತೆ ಚೆಲ್ಲಾಟ ಆಡಿದ್ದಾರೆ. ಬಿಡಿಎಯ ಈಗಿನ ಅಧ್ಯಕ್ಷ ಎಸ್.‌ಆರ್.‌ವಿಶ್ವನಾಥ್‌ ಅವರೇ ಈ ಜನರ ಪರ ಹೋರಾಟ ಮಾಡಿದ್ದರು. ಈಗ ನೋಡಿದರೆ ಅವರೇ ಮನೆಗಳನ್ನು ನೆಲಸಮ ಮಾಡಿಸುತ್ತಿದ್ದಾರೆ. ನಾನು ಹದಿನಾಲ್ಕು ತಿಂಗಳು ಅಧಿಕಾರದಲ್ಲಿದ್ದಾಗ ಈ ಮನೆಗಳನ್ನು ಒಡೆಯಲು ಬಿಟ್ಟಿರಲಿಲ್ಲ, ಈ ಸರಕಾರ ನಿಜಕ್ಕೂ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ಇವರೇ ಒಂದು ಕಡೆ ದುಡ್ಡು ಹೊಡೆಯೋದು. ಇನ್ನೊಂದು ಕಡೆ ಇವರೇ ಕಟ್ಟಡ ಒಡೆಸೋದು. ಜನರನ್ನು ಈಗ ಬೀದಿಗೆ ತಂದು ನಿಲ್ಲಿಸಿದ್ದಾರೆ. ಮುಖ್ಯಮಂತ್ರಿಗೆ ಜವಾಬ್ದಾರಿ ಎನ್ನುವುದು ಇದ್ದಿದ್ದರೆ ಕೂತು ಚರ್ಚೆ ಮಾಡಿ ಕಾನೂನು ರೀತಿಯಲ್ಲಿ ಆ ಜನರಿಗೆ ರಕ್ಷಣೆ ನೀಡಬೇಕಾಗಿತ್ತು ಎಂದು ಕುಮಾರಸ್ವಾಮಿ ಅವರು ಹೇಳಿದರು.

Tags: BJPHD Kumaraswamyshivarama karanth layoutಎಚ್ ಡಿ ಕುಮಾರಸ್ವಾಮಿಬಿಜೆಪಿಬಿಡಿಎಶಿವರಾಮ ಕಾರಂತಶಿವರಾಮ ಕಾರಂತ ಬಡಾವಣೆಸಿದ್ದರಾಮಯ್ಯಹೆಚ್ ಡಿಕೆ
Previous Post

ಆನ್ಲೈನ್ ಬೋಧನೆಯ ಬಗ್ಗೆ 43% ರಷ್ಟು ಶಿಕ್ಷಕರಿಗೆ ಅಸಮಾಧಾನ, 9% ಶಿಕ್ಷಕರಿಗೆ ಅತೃಪ್ತಿ: ಸಮೀಕ್ಷೆ

Next Post

ಅನ್ನಭಾಗ್ಯ ಯೋಜನೆಯಿಂದಾಗಿ ಬಂಜಾರ ಸಮುದಾಯ ತಮ್ಮ ಊರುಗಳಲ್ಲೇ ನೆಲೆ ಕಂಡುಕೊಂಡಿತು: ಸಿದ್ದರಾಮಯ್ಯ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಜೊತೆ ಕೆಲಸ ಮಾಡುವ ಅವಕಾಶ ನನಗೆ ಸಿಗಲಿಲ್ಲ-  ಸಿದ್ದರಾಮಯ್ಯ

ಅನ್ನಭಾಗ್ಯ ಯೋಜನೆಯಿಂದಾಗಿ ಬಂಜಾರ ಸಮುದಾಯ ತಮ್ಮ ಊರುಗಳಲ್ಲೇ ನೆಲೆ ಕಂಡುಕೊಂಡಿತು: ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada