• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

ಪ್ರತಿಧ್ವನಿ by ಪ್ರತಿಧ್ವನಿ
July 12, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

“ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ (KPCC President DK SHivakumar) ಅವರು ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ” ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ (Bamul President DK Suresh) ಅವರು ಸ್ಪಷ್ಟಪಡಿಸಿದರು.

ADVERTISEMENT

ಸದಾಶಿವನಗರ ನಿವಾಸದಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದರು.

ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ನಿರ್ದೇಶನವಿದ್ದರೂ ಸಿಎಂ ಮೂರು ಬಾರಿ ನಾನೇ 5 ವರ್ಷ ಸಿಎಂ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಗಳವಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಕೂಡ ಈಗಾಗಲೇ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದು, ಸಿದ್ದರಾಮಯ್ಯ (Siddaramaiah) ಅವರು ನಾಯಕತ್ವದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ. ಆದರೂ ಮಾಧ್ಯಮಗಳಿಗೆ ಯಾಕೆ ಗೊಂದಲವಿದೆ ಎಂದು ಗೊತ್ತಿಲ್ಲ. ಶಿವಕುಮಾರ್ ಅವರು ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಪಕ್ಷದ ಕಾರ್ಯಕರ್ತನಾಗಿ ಮುನ್ನಡೆಸುತ್ತಿದ್ದಾರೆ. ಪಕ್ಷದ ಸೂಚನೆಯಂತೆ ಅವರು ಕೆಲಸ ಮಾಡುತ್ತಿದ್ದಾರೆ. ಇದರ ಹೊರತಾಗಿ ಹೆಚ್ಚಿನ ವಿಚಾರ ಏನೂ ಇಲ್ಲ. ಸಧ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಪದೇ ಪದೆ ಈ ವಿಚಾರ ಯಾಕೆ ಚರ್ಚೆಯಾಗುತ್ತಿದೆ ಗೊತ್ತಿಲ್ಲ” ಎಂದರು.

ಇದೇ ನನ್ನ ಕೊನೆ ಚುನಾವಣೆ ಎಂದಿದ್ದ ಸಿದ್ದರಾಮಯ್ಯ ಅವರು ಈಗ 2028ಕ್ಕೂ ನನ್ನದೇ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ಹಿರಿಯ ನಾಯಕರು. ರಾಜಕೀಯದಲ್ಲಿ ನಿವೃತ್ತಿ ಇಲ್ಲ. ರಾಜಕೀಯ ಇಚ್ಛಾಶಕ್ತಿ ಇರಬೇಕು. ಮುಖ್ಯಮಂತ್ರಿಗಳಿಗೆ ಇಚ್ಛಾಶಕ್ತಿ ಇದೆ. ಹೀಗಾಗಿ ಅವರು ಕೆಲವು ವಿಚಾರವನ್ನು ನಿಮ್ಮ ಜೊತೆ ಹಂಚಿಕೊಂಡಿರಬಹುದು” ಎಂದು ತಿಳಿಸಿದರು.

ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದಮೇಲೆ ಸಿಎಂ ಪದೇ ಪದೆ ನಾನೇ ಸಿಎಂ ಎಂದು ಹೇಳುವ ಅಗತ್ಯವಿದೆ ಎಂದು ಕೇಳಿದಾಗ, “ಈ ವಿಚಾರವಾಗಿ ಮಾತನಾಡಲು ನಾನು ಬಹಳ ಸಣ್ಣವನು” ಎಂದರು.

ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ

ಡಿ.ಕೆ. ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಶಾಸಕರ ಬೆಂಬಲ ಕೇಳುವ ಸಮಯವಲ್ಲ. ಸಿದ್ದರಾಮಯ್ಯ ಅವರು 2 ವರ್ಷಗಳಿಂದ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರು ಮುಂದುವರಿಯುತ್ತಿರುವಾಗ ಈ ವಿಚಾರ ಚರ್ಚೆಯಾಗುತ್ತಿರುವ ಬಗ್ಗೆ ನಮಗೆ ಗೊತ್ತಿಲ್ಲ. ನೀವು ಈ ವಿಚಾರ ಚರ್ಚೆ ಮಾಡುತ್ತಿರುವವರನ್ನೇ ಕೇಳಿ. ಶಿವಕುಮಾರ್ ಅವರದ್ದು ಬಲಾಬಲ ಪ್ರದರ್ಶನ ಮಾಡುವ ವ್ಯಕ್ತಿತ್ವವಿಲ್ಲ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ. ಕಾಂಗ್ರೆಸ್ ವರಿಷ್ಠರಿಗೆ ಗೌರವ ನೀಡುವ ವ್ಯಕ್ತಿತ್ವ ಹೊಂದಿರುವವರು. ಅವರು ಬೇರೆಯವರಿಗೆ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ” ಎಂದರು.

ಡಿ.ಕೆ. ಶಿವಕುಮಾರ್ ಅವರು ನಂಬುವ ಗುರುಗಳೇ ಈ ಅವಧಿಯಲ್ಲಿ ಅವರು ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ ಎಂದು ಕೇಳಿದಾಗ, “ನನಗೆ ಈ ವಿಚಾರ ಗೊತ್ತಿಲ್ಲ. ಪ್ರತಿಯೊಬ್ಬರಿಗೂ ಒಬ್ಬೊಬ್ಬರು ಸಿಎಂ ಆಗಲಿ ಎಂದು ಆಸೆ ಪಡುತ್ತಾರೆ. ಪ್ರತಿ ಜಿಲ್ಲೆ, ಸಮುದಾಯದವರು ನಮ್ಮವರು ಸಿಎಂ ಆಗಲಿ ಎಂದು ಆಶಯ ವ್ಯಕ್ತಪಡಿಸುವುದು ಸಹಜ. ಇದು ಇಂದು ನಡೆದಿರುವ ವಿಚಾರವಲ್ಲ. ಪ್ರತಿ ಅವಧಿಯಲ್ಲೂ ಇಂತಹ ಬೆಳವಣಿಗೆ ನಡೆದುಕೊಂಡು ಬಂದಿದೆ. ಇಂತಹ ಅಭಿಪ್ರಾಯವನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ” ಎಂದರು.

ಎರಡು ಬಾರಿ ಇಡಿ ವಿಚಾರಣೆ ಎದುರಿಸಿದ್ದೀರಿ ಅವರ ಉದ್ದೇಶವೇನು ಎಂದು ತಿಳಿಯಿತೇ ಎಂದು ಕೇಳಿದಾಗ, “ನನಗೆ ಕಾರಣ ಗೊತ್ತಿಲ್ಲ. ಆದರೆ ನನಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮತ್ತೆ ವಿಚಾರಣೆಗೆ ಕರೆದಾಗ ಬರಬೇಕು ಎಂದು ತಿಳಿಸಿದ್ದಾರೆ. ಜವಾಬ್ದಾರಿಯುತ ಪ್ರಜೆಯಾಗಿ ವಿಚಾರಣೆಗೆ ಸಹಕಾರ ನೀಡಲು ಸಿದ್ಧನಿದ್ದೇನೆ” ಎಂದು ತಿಳಿಸಿದರು.

ತಾವೇ ಹಾಕಿಕೊಂಡ ಲಕ್ಷ್ಮಣ ರೇಖೆ ಹೇಗೆ ದಾಟುತ್ತಾರೆ?

75 ವರ್ಷಕ್ಕೆ ನಿವೃತ್ತಿ ಪಡೆಯಬೇಕು ಎಂದು ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ (RSS Mohan Bhagavath) ಹೇಳಿಕೆ ಬಗ್ಗೆ ಕೇಳಿದಾಗ, “ರಾಜಕಾರಣದಲ್ಲಿ ನಿವೃತ್ತಿ ಇಲ್ಲ ಎಂದು ನಾನು ಹೇಳಿದ್ದೇನೆ. ರಾಜಕೀಯ ಇಚ್ಛಾಶಕ್ತಿ ಜೊತೆಗೆ ಅವರವರು ಹಾಕಿಕೊಂಡಿರುವ ಲಕ್ಷ್ಮಣ ರೇಖೆಗಳನ್ನು ದಾಟುವುದು ಹೇಗೆ ಎಂಬುದು ಮುಖ್ಯ. ಯಾವಾಗಲೂ ಇನ್ನೊಬ್ಬರಿಗೆ ಮಾರ್ಗದರ್ಶಕರಾಗಿ ಮಾದರಿಯಾಗಿರಬೇಕು. ಈ ರೀತಿ ದಿಟ್ಟ ಹೆಜ್ಜೆ ಇಟ್ಟಾಗ ಅವರ ಹೆಸರು ಶಾಶ್ವತವಾಗಿ ಉಳಿಯುತ್ತದೆ” ಎಂದು ತಿಳಿಸಿದರು.

Tags: BJPbr patil cm siddaramaiahCM Siddaramaiahcm siddaramaiah budgetcm siddaramaiah livecm siddaramaiah newscm siddaramaiah speechcm siddaramaiah statuscm siddaramaiah today newscm siddaramaiah videocongressDK Shivakumardk sureshkarnataka cm siddaramaiahKPCCMohan BhagavathNaendra ModiNandiniNarendra ModiRSSsiddaramaiahSiddaramaiah CMsiddaramaiah controversysiddaramaiah cop incidentsiddaramaiah dks unitysiddaramaiah full speechsiddaramaiah live speechsiddaramaiah newssiddaramaiah slapssiddaramaiah slaps videosiddaramaiah speechTumul
Previous Post

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

Next Post

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
Next Post

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada