ರಾಜ್ಯದಲ್ಲಿ ವಕ್ಫ್ ಬೋರ್ಡ್ (Waqf board) ಹೆಸರಲ್ಲಿ ಲ್ಯಾಂಡ್ ಜಿಹಾದ್ ನಡೆಯುತ್ತಿದೆ.1974 ರ ವಕ್ಫ್ ನೋಟಿಫಿಕೇಶನ್ ರದ್ದಾಗಬೇಕು. ರಾಜ್ಯದಲ್ಲಿ ಎಲ್ಲಿ ನೋಡಿದರೂ ವಕ್ಫ್ ಆಗಿ ಬಿಟ್ಟಿದೆ. ಹಿಂದೂ ದೇವಾಲಯಗಳು, ಮಠ ಮಾನ್ಯಗಳು, ರೈತರ ಜಮೀನು ಒಂದೂ ಉಳಿದಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ (Shobha karandlaje) ಕಿಡಿಕಾರಿದ್ದಾರೆ.

ಉಡುಪಿಯಲ್ಲಿ (Udupi) ಸುಲ್ತಾನಪುರ ಅಂತ ಒಂದು ಹಳ್ಳಿಯನ್ನೇ ನಿರ್ಮಾಣ ಮಾಡಿದ್ದಾರೆ. ರಾಜ್ಯದಲ್ಲಿ ಷರಿಯತ್ ಕಾನೂನನ್ನು ಜಾರಿಗೆ ತರೋದಕ್ಕೆ ಸಿಎಂ ಸಿದ್ದರಾಮಯ್ಯ (Cm siddaramaiah) ಹಾಗೂ ಸಚಿವ ಜಮೀರ್ ಹೊರಟಿದ್ದಾರೆ ಎಂದು ಹೇಳಿದ್ದಾರೆ.
ನಾವು ಭಾರತದ ಸಂವಿಧಾನದ ಪ್ರಕಾರ ನಡೆಯುವವರು. ಲೋಕಸಭೆಯಲ್ಲಿ ಸಂವಿಧಾನ ಪ್ರತಿ ಹಿಡಿದುಕೊಂಡು ಪ್ರಮಾಣ ವಚನ ಸ್ವೀಕಾರ ಮಾಡುತ್ತೀರಿ. ಇಲ್ಲಿ ಬಂದು ಷರಿಯತ್ ಕಾನೂನು ತರುತ್ತೀರಿ. ಇದು ನಡೆಯಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.







