ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯ ರಾಜಕಾರಣದ ಭವಿಷ್ಯ ನಿರ್ಧಾರವಾಗಲಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, 13ರಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
![](https://pratidhvani.com/wp-content/uploads/2023/05/Shobha-Karandlaje-dh-1556644869.jpg)
ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಸಂಶಯ ಬರುವ ರೀತಿ ಮಾತನಾಡಿದ್ದಾರೆ. ಭಾರತದ ಸಾರ್ವಭೌಮತ್ವದ ವಿರುದ್ಧ ಸೋನಿಯಾ ಗಾಂಧಿ ಮಾತನಾಡಿದ್ದಾರೆ ಹೀಗಾಗಿ ಇದರ ವಿರುದ್ಧ ದೂರು ನೀಡಿದ್ದೇವೆʼ ಅಂತ ಕೇಂದ್ರ ಸಚವೆ ಶೋಭಾ ಕರಂದ್ಲಾಜೆ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ರು. ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿಕೆಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಿರುಗೇಟು ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಗೆಲ್ಲದಿದ್ದರೆ ಕೇಂದ್ರದ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಅಂತ ಜೆಪಿ ನಡ್ಡಾ ಹೇಳಿಲ್ಲ. ಕೇಂದ್ರದ ಯೋಜನೆಗಳು ಕುಂಠಿತವಾಗುತ್ತೆ ಎಂಬರ್ಥದಲ್ಲಿ ಹೇಳಿದ್ದಾರೆ ಅಂತ ಕೇಂದ್ರ ಸಚಿವೆ ತಿಳಿಸಿದರು