ಬೀದರ್: ಜಿಲ್ಲಾ ಪಂಚಾಯತ್’ನ ಮಾಜಿ ಸದಸ್ಯೆ ಪತಿ ಹಾಗೂ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ.
ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಅಮರಪಲ್ಲಿ ಈರಣ್ಣ ಹಲಗೆ ಪತಿ ಮೇಲೆ ನಗರದ ಪಂಜಾಬಿ ಡಾಬಾ ಬಳಿ ನಾಲ್ಕು ಜನ ಅಪರಿಚಿತರ ತಂಡ ಏಕಾಏಕಿ ಮಾರಣಾಂತಿಕವಾಗಿ ಹಲ್ಲೆಗೆ ಯತ್ನಿಸಿದೆ.

ಗಂಭೀರವಾಗಿ ಗಾಯಗೊಂಡ ಬಿಜೆಪಿ ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ಈರಣ್ಣ ಹಲಗೆ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಬಸವ ಕಲ್ಯಾಣ ನಗರ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಸಂಬಂಧ ಬಸವ ಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






