• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎರಡು ಹೊತ್ತಿನ ಊಟಕ್ಕೂ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಪ್ರತಿಧ್ವನಿ by ಪ್ರತಿಧ್ವನಿ
January 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್, ಸಿನಿಮಾ
0
Share on WhatsAppShare on FacebookShare on Telegram

ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ: ಸಿ.ಎಂ

ADVERTISEMENT

ಸೂಟು ಬೂಟು ಹಾಕಿಕೊಂಡು ಬಂದವರನ್ನು ಕೂರಿಸಿ ಮಾತನಾಡಿಸಿ, ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷ್ಯಿಸುವುದು ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಬಿಡಿ: ಸಿ.ಎಂ ಕರೆ

ಬೆಂಗಳೂರು ಜ 3: ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಎಸ್ ಅಧಿಕಾರಿಗಳಿಗೆ ಕರೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದರು.

ಎರಡು ಹೊತ್ತಿನ ಊಟಕ್ಕೂ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ ಎಂದು ಸೂಚಿಸಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಭೆಯಲ್ಲಿ ಮಾಡಿರುವ ಭಾಷಣವನ್ನು ನೀವೆಲ್ಲಾ ಓದಬೇಕು. ಐತಿಹಾಸಿಕ ಕಾರಣಗಳಿಂದಾಗಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಇದನ್ನು ಹೋಗಲಾಡಿಸಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಈ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀವಿ. ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿ ಆಹಾರ, ಶಿಕ್ಷಣ, ಮಾಹಿತಿ ಹಕ್ಕುಗಳನ್ನು ಮಾಡುವ ಮೂಲಕ ಸಂವಿಧಾನದ ನಿರ್ದೇಶಕ ತತ್ವಗಳನ್ನು ಜನರ ಹಕ್ಕುಳನ್ನಾಗಿ ಮಾಡಿದರು. ಇವೆಲ್ಲವೂ ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ಉದ್ದೇಶವನ್ನೇ ಹೊಂದಿವೆ. ಆದ್ದರಿಂದ ಮಧ್ಯವರ್ತಿಗಳೇ ಇಲ್ಲದ ನಮ್ಮ ಗ್ಯಾರಂಟಿಗಳನ್ನು ಮನೆ ಮನೆ ತಲುಪಿಸಿ ಎಂದರು.

ಅಂಬೇಡ್ಕರ್ ಅವರಿಂದ ಬುದ್ದ, ಬಸವ, ಗಾಂಧಿ ಎಲ್ಲರೂ ಸಮಾಜದ ಸಮಾನತೆಗಾಗಿ, ತಾರತಮ್ಯದ ಸಮಾಜದ ಬದಲಾವಣೆಗಾಗಿ ಶ್ರಮಿಸಿದರು. ಆದರೂ ಇನ್ನೂ ಅಸಮಾನತೆ ಹೋಗಿಲ್ಲ ಎಂದರೆ ಎಲ್ಲರಿಗೂ ಸಮಾನ ಅವಕಾಶ ಸಿಗದೇ ಇರುವುದೇ ಮುಖ್ಯ ಕಾರಣ. ಆದ್ದರಿಂದ ಸಮಾಜದಲ್ಲಿ ಪಟ್ಟಭದ್ರರು ಇನ್ನೂ ಹೆಚ್ಚಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸೂಟು ಬೂಟು ಹಾಕಿಕೊಂಡು ಬರುವವರನ್ನು ಕುರ್ಚಿಯಲ್ಲಿ ಕೂರಿಸಿ ಮಾತನಾಡಿಸುವುದನ್ನು, ಮಾಸಲು ಬಟ್ಟೆಯಲ್ಲಿ ಬರುವ ಬಡವರನ್ನು ನಿರ್ಲಕ್ಷ್ಯದಿಂದ ಕಾಣುವುದು ನಮ್ಮ ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಕಿತ್ತೊಗೆದು ಪ್ರತಿಯೊಬ್ಬರಿಗೂ ಸಮಾಜದಲ್ಲಿ ಅವಕಾಶಗಳು ಸಿಗುವಂತೆ ನೋಡಿಕೊಳ್ಳಿ ಎಂದು ಕರೆ ನೀಡಿದರು.

ಎಲ್ಲಿಯವರೆಗೂ ಜಾತಿ, ವರ್ಗ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಅಸಮಾನತೆ ಇರುತ್ತದೆ.

ಕೆಎಎಸ್ ಅಧಿಕಾರಿಗಳ ಸಂಘ ಮುಂದಿಟ್ಟಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.

ಕೆಎಎಸ್ ಅಧಿಕಾರಿಗಳ ಸಂಖ್ಯೆ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಆದರೆ ಸಂಖ್ಯೆ ಮುಖ್ಯವಲ್ಲ. ನಿಮ್ಮ ಗುಣಾತ್ಮಕ ಕರ್ತವ್ಯ , ಸೇವೆ ಮುಖ್ಯ ಎಂದರು.

KAS ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ದವಿದೆ. ಮುಂದಿನ ಹತ್ತು ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ.

ಕೆಎಎಸ್ ಅಧಿಕಾರಿಗಳ ಬಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಶಿವಸ್ವಾಮಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸತ್ಯವತಿ ಅವರು ಉಪಸ್ಥಿತರಿದ್ದರು.

Tags: BJPCongress PartyDr AmbedkarGovindarajuKAS OfficersShalini RajanishShivaswamysiddaramaiahVidhanasoudaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಿವರಾತ್ರಿಗೆ ‘ರಾಕ್ಷಸ’ನಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದರ್ಶನ

Next Post

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ:ಸಚಿವ ಕೆ.ಜೆ.ಜಾರ್ಜ್

Related Posts

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ
ಸಿನಿಮಾ

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ

by ಪ್ರತಿಧ್ವನಿ
March 4, 2026
0

ನಟಿಯರ ವೀಡಿಯೊ ಹಾಗೂ ಫೋಟೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ.ಅಂತಹವರ ವಿರುದ್ಧ ʼಕಾಂತಾರʼ ಸಿನಿಮಾದ ನಟಿ ಸಪ್ತಮಿ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Read moreDetails
₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

March 4, 2026
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
Next Post

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ:ಸಚಿವ ಕೆ.ಜೆ.ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada