• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

‘ಅಥಿ ಐ ಲವ್ ಯು’ 11 ನಿಮಿಷದ ಸಿಂಗಲ್ ಶಾಟ್ ನಲ್ಲಿ ಭಾಗಿಯಾದ ಶ್ರಾವ್ಯ-ಲೋಕೇಂದ್ರ..!

ಫಾತಿಮಾ by ಫಾತಿಮಾ
March 6, 2023
in ಸಿನಿಮಾ
0
‘ಅಥಿ ಐ ಲವ್ ಯು’ 11 ನಿಮಿಷದ ಸಿಂಗಲ್ ಶಾಟ್ ನಲ್ಲಿ ಭಾಗಿಯಾದ ಶ್ರಾವ್ಯ-ಲೋಕೇಂದ್ರ..!
Share on WhatsAppShare on FacebookShare on Telegram

ಕನ್ನಡದಲ್ಲಿ(kannada) ಒಂದು ಮನೆಯಲ್ಲಿ ನಡೆಯವ ಕಥೆಗಳು ಸಾಕಷ್ಟು ಸಿನಿಮಾಗಳು ಬಂದಿವೆ ಅದರೆ ಆಥಿ ಐ ಲವ್‌ ಯು (Athy I love you) ಸಿನಿಮಾ ತರೆ ಮೇಲೆ ಬರಲು ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ ರೆಡ್‌ ಅಂಡ್‌ ವೈಟ್‌ ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರ ನಿರ್ಮಾಣದಲ್ಲಿ (Produced by Seven Raj) ಮೂಡಿಬರುತ್ತಿರುವ ಎರಡನೇ ಚಿತ್ರ ಅಥಿ ಐ ಲವ್ ಯು. ಸದ್ಯ ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಅದು ಬೆಂಗಳೂರಿನ ಮನೆಯಲ್ಲಿ ನಡೆದ ಚಿತ್ರೀಕರಣ. ಬರೋಬ್ಬರಿ ಹನ್ನೊಂದು ನಿಮಿಷದ ದೊಡ್ಡ ದೃಶ್ಯವದು. ಅದೂ ಸಿಂಗಲ್‌ ಶಾಟ್‌ನಲ್ಲಿ ಕಂಪೋಸ್‌ (Composed in a single shot) ಮಾಡಲಾಗಿತ್ತು. ಮಲಗಿದ್ದ ಗಂಡ ಹೆಂಡತಿ ಎದ್ದನಂತರದ ದೀರ್ಘವಾದ ಈ ದೃಶ್ಯಕ್ಕಾಗಿ ಸಾಕಷ್ಟು ತಯಾರಿಯನ್ನೂ ಮಾಡಿಕೊಳ್ಳಲಾಗಿತ್ತು. ಮನೆಯಲ್ಲೇ ವಿವಿಧ ಕೋನಗಳಲ್ಲಿ ಲೈಟಿಂಗ್‌ ವ್ಯವಸ್ಥೆ ರೂಪಿಸಿ, ಕ್ಯಾಮೆರಾ ಚಲನೆಗೆ ಪ್ಲಾನ್‌ ಮಾಡಲಾಗಿತ್ತು.

ADVERTISEMENT

ಅಂದುಕೊಂಡಂತೇ ಈ ದೃಶ್ಯ ಮೂಡಿಬಂದಿದ್ದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದೆ. ಈ ರೀತಿಯ ದೀರ್ಘಾವಧಿಯ ದೃಶ್ಯಗಳು ಚಿತ್ರದುದ್ದಕ್ಕೂ ಮೂಡಿಬರಲಿದೆಯಂತೆ. ಒಂದು ನಿಮಿಷದ ದೃಶ್ಯವನ್ನು ಕಂಪೋಸ್‌ ಮಾಡುವುದು ಕಷ್ಟದ ಕೆಲಸ. ಇಂಥಾದ್ದರಲ್ಲಿ ಹತ್ತು ನಿಮಿಷಕ್ಕೂ ಅಧಿಕ ಸಮಯದ ದೃಶ್ಯವನ್ನು ಕಟ್ಟುವುದು ನಿಜಕ್ಕೂ ಸವಾಲಿನ ಕೆಲಸ. ಅದನ್ನು ಸ್ವತಃ ನಾಯಕನಾಗಿ ನಟಿಸಿ, ನಿರ್ದೇಶನವನ್ನೂ ಮಾಡಿರುವ ಲೋಕೇಂದ್ರ ಸೂರ್ಯ (Lokendra Surya) ಯಶಸ್ವಿಯಾಗಿ ನಿಭಾಯಿಸಿದ್ದಾರೆ. ನಾಯಕಿ ಶ್ರಾವ್ಯಾ ರಾವ್‌ ಕೂಡಾ ಈ ಚಿತ್ರಕ್ಕಾಗಿ ವಿಶೇಷ ತಯಾರಿ ಮಾಡಿಕೊಂಡು ಕ್ಯಾಮೆರಾ ಮುಂದೆ ನಿಂತಿದ್ದಾರೆ.


ʻʻಲೆಂತಿಶಾಟ್ಗಳು ಚಿತ್ರದುದ್ದಕ್ಕೂ ಸಹಜವಾಗಿಯೇ ಕಾಣಸಿಗುತ್ತವೆ, ಕತ್ತರಿಸಿ ಜೋಡಿಸಿದರೂ ಸಿಗದ ಅನುಭವವನ್ನು ಶಾಟ್ ಕಟ್ ಮಾಡದೇಯೇ ಪರದೆಯ ಮೇಲೆ ತರಬೇಕಾದರೆ, ಕಲಾವಿದರು ತಮ್ಮ ಸಾಮರ್ಥ್ಯವನ್ನು ಸಾಭೀತು ಪಡಿಸಬೇಕಾಗುತ್ತದೆ. ಅಂತಹ ಪ್ರಯತ್ನದಲ್ಲಿ ಶ್ರಾವ್ಯ ಅವರು ನನಗೆ ಉತ್ತಮವಾದ ಸಾಥ್ ನೀಡಿದ್ದಾರೆ. ಭಾವನಾತ್ಮಕ ದೃಶ್ಯಗಳನ್ನು ಅಲ್ಲಲ್ಲಿ ಸಣ್ಣ ಶಾಟ್‌ಗಳಾಗಿ ವಿಭಾಗಿಸಿದರೆ, ಭಾವನೆಗಳನ್ನು ಹಿಡಿದಿಡುವುದು ಕಷ್ಟ. ಆದಕಾರಣ ಕೆಲವು ದೃಶ್ಯಗಳನ್ನು ಒಂದೊಂದೇ ಶಾಟ್‌ಗಳಲ್ಲಿ ಚಿತ್ರಿಸುತಿದ್ದೇವೆ. ಅದು ಪ್ರೇಕ್ಷಕರಿಗೆ ಮತ್ತಷ್ಟು ಹಿತವೆನಿಸುತ್ತದೆʼʼ ಎನ್ನುವುದು ನಿರ್ದೇಶಕ ಲೋಕೇಂದ್ರ ಸೂರ್ಯ ಅವರ ಮಾತು.


ʻʻಸಾಕಷ್ಟು ಸಿನಿಮಾಗಳಲ್ಲಿ ನಾನು ಅಭಿನಯಿಸಿದ್ದೇನೆ. ಎಲ್ಲವೂ ನನಗೆ ಇಷ್ಟವಾದವುಗಳೇ, ಆದರೆ, ಅಥಿ ಐ ಲವ್ ಯು ಚಿತ್ರದಲ್ಲಿ ನಾನು ಬೇರೊಂದು ಬಗೆಯಲ್ಲಿ ಅನುಭವ ಪಡೆದುಕೊಳ್ಳುತಿದ್ದೇನೆ. ಈ ಚಿತ್ರದ ಚಿತ್ರೀಕರಣ ನನಗೊಂದು ವಿಷೇಶವಾದ ಅನುಭವ ನೀಡುತ್ತಿದೆ. ನಿರ್ದೇಶಕ ಲೋಕೇಂದ್ರ ಸೂರ್ಯ ಅವರ ಜೊತೆ ಅಭಿನಯಿಸುವುದರ ಜೊತೆಗೆ, ಅವರ ನಿರ್ದೇಶನದ ರೀತಿಯೂ ಹೊಸತನದಿಂದ ಕೂಡಿದೆ. ಅಥಿ ಐ ಲವ್ ಯು ನನ್ನ ಚಿತ್ರ ಗುಚ್ಚದಲ್ಲಿ ಒಂದೊಳ್ಳೆ ಚಿತ್ರವಾಗುತ್ತದೆ.“ ಎಂದು ನಟಿ ಶ್ರಾವ್ಯ ರಾವ್ ಹೇಳಿದರು.
ನಾನು ಈ ಬಾರಿ ಚಿತ್ರದ ನಿರ್ಮಾಣದಲ್ಲಿ ತುಂಭಾ ಸಂತಸವನ್ನು ಹೊಂದಿದ್ದೇನೆ, ಒಂದೊಳ್ಳೆ ಚಿತ್ರದ ನಿರ್ಮಾಣ ನನ್ನ ಬ್ಯಾನರ್ ನಲ್ಲಿ ನಡೆಯುತ್ತಿರುವುದು ನನಗೆ ಮತ್ತಷ್ಟು ಸಂತಸವನ್ನು ತಂದುಕೊಟ್ಟಿದೆ.

ಚಿತ್ರೀಕರಣದ ವೇಳೆಯಲ್ಲಿ ಕೆಲವು ದೃಷ್ಯಗಳು ನನಗೆ ತುಂಭಾ ಮಜಾ ಎನಿಸಿದೆ. ನಾನು ಅದೆಷ್ಟು ಅನುಭವಿಸಿದ್ದೇನೆ ಅನ್ನೋದನ್ನು ಪರದೆಯ ಮೇಲೆ ಚಿತ್ರ ವೀಕ್ಷಣೆ ಮಾಡಿದರೆ ಗೊತ್ತಾಗುತ್ತದೆ. ಎಲ್ಲಾ ಅಂದುಕೊಂಡತೆ ಚಿತ್ರದ ಫಸ್ಟ್ ಕಾಪಿ ರೆಡಿಯಾದ ಕೂಡಲೇ ಬಿಡುಗಡೆಗೆ ತಡ ಮಾಡುವುದಿಲ್ಲ. ಮೇ ಮೊದಲ ವಾರದಲ್ಲೇ ಬಿಡುಗಡೆ ಮಾಡುತ್ತೇವೆ. ಆದಷ್ಟು ಬೇಗ ಈ ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಹಾಕಬೇಕು ಎನ್ನುವ ತವಕ ನನ್ನದಾಗಿದೆʼʼ ಎಂದು ನಿರ್ಮಾಪಕ ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರು ತಮ್ಮ ಸಂತೋಷವನ್ನು ಹೇಳಿಕೊಂಡರು. ಇನ್ನು ಕುಗ್ರಾಮ ಚಿತ್ರದ ನಟಿ ಋತು ಚೈತ್ರಾ ಅವರೇ ವಸ್ತ್ರ ವಿನ್ಯಾಸ ಮಾಡಿದ್ದು, ಜೋಡಿಗಳಿಗೆ ಮತ್ತಷ್ಟು ಅಂದವನ್ನು ಹೆಚ್ಚಿಸಿದ್ದಾರೆ. ಇದೇ ತಿಂಗಳಲ್ಲಿ ಚಿತ್ರದ ಕುಂಬಳ ಕಾಯಿ ಹೊಡೆಯುವ ಯೋಚನೆ ಚಿತ್ರ ತಂಡಕ್ಕಿದೆ.

Tags: Composed in a single shotkannada new filmkannada new updetekannada news karanataka newsLokendra SuryaProduced by Seven RajShravya-Lokendra participated in the 11-minute single shot of Athi I Love You
Previous Post

‘ಬಿಜೆಪಿ ಸರ್ಕಾರವು ಕಾಂಗ್ರೆಸ್​, ಜೆಡಿಎಸ್​ನವರ ಮೇಲೆ ಭ್ರಷ್ಟಾಚಾರದ ಕೇಸ್​ ಹಾಕುವಂತೆ ಲೋಕಾಯುಕ್ತಕ್ಕೆ ಒತ್ತಡ ಹೇರಿದೆ’ : ಡಿಕೆಶಿ ಆರೋಪ

Next Post

ಮಾಡಾಳ್ ವಿರೂಪಾಕ್ಷಪ್ಪ ಹಗರಣವನ್ನು ದಿಕ್ಕು ತಪ್ಪಿಸಲು ಕಾಫಿ ತಿಂಡಿ ಹಿಂದೆ ಬಿದ್ದ ಬಿಜೆಪಿ: ಸಿದ್ದರಾಮಯ್ಯ

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಮಾಡಾಳ್ ವಿರೂಪಾಕ್ಷಪ್ಪ ಹಗರಣವನ್ನು ದಿಕ್ಕು ತಪ್ಪಿಸಲು ಕಾಫಿ ತಿಂಡಿ ಹಿಂದೆ ಬಿದ್ದ ಬಿಜೆಪಿ: ಸಿದ್ದರಾಮಯ್ಯ

ಮಾಡಾಳ್ ವಿರೂಪಾಕ್ಷಪ್ಪ ಹಗರಣವನ್ನು ದಿಕ್ಕು ತಪ್ಪಿಸಲು ಕಾಫಿ ತಿಂಡಿ ಹಿಂದೆ ಬಿದ್ದ ಬಿಜೆಪಿ: ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada