ಶಿವಮೊಗ್ಗದ ಲಗಾನ್ ಕಲ್ಯಾಣ ಮಂಟಪದಲ್ಲಿ ಇಂದು ಕಾರ್ಮಿಕ ಇಲಾಖೆ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರಿಗೆ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಕಾರ್ಮಿಕರ ಕಲ್ಯಾಣ ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಮಾನ್ಯ ಕಾರ್ಮಿಕ ಸಚಿವರಾದ
ಶ್ರೀ ಸಂತೋಷ್ ಲಾಡ್ (Santhosh Lad) ರವರು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರ(BY Ragavendra), ಶಾಸಕರಾದ ಚನ್ನಬಸಪ್ಪ(Channabasappa), ಶಾರದಾ ಪೂರ್ಯ ನಾಯಕ್(Sharada Poorya Nayak), ವಿಧಾನ ಪರಿಷತ್ ಸದಸ್ಯ ಅರುಣ್(Arun), ಕಾರ್ಮಿಕ ಆಯುಕ್ತರಾದ ಶ್ರೀ ಗೋಪಾಲಕೃಷ್ಣ(Gopalakrishna), ಮಂಡಳಿಯ ಸಿಇಒ ಶ್ರೀಮತಿ ಭಾರತಿ(Bharathi), ಜಂಟಿ ಕಾರ್ಮಿಕ ಆಯುಕ್ತರಾದ ಶ್ರೀ ರವಿಕುಮಾರ್, ಉಪ ಕಾರ್ಮಿಕ ಆಯುಕ್ತರಾದ ಶ್ರೀ ಜಾನ್ಸನ್ , ಉಪ ಕಾರ್ಮಿಕ ಆಯುಕ್ತರಾದ ಶ್ರೀ ಗುರುಪ್ರಸಾದ್ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು,

ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣದ ಸಂಘದ ಪದಾಧಿಕಾರಿಗಳು ಹಾಗೂ ಅಸಂಘಟಿತ ಕಾರ್ಮಿಕ ಸಂಘದ ಪದಾಧಿಕಾರಿಗಳು, ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ, ನಾಗರಾಜ್, ಸಾರಿಗೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.









