• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಪ್ರೈಡ್ ಇಂಡಿಯಾ ಅವಾರ್ಡ್ ಇವೆಂಟ್‌ನಲ್ಲಿ ಶ್ರೀಯಾ ಶರಣ್ ಝಲಕ್

ಪ್ರತಿಧ್ವನಿ by ಪ್ರತಿಧ್ವನಿ
August 20, 2023
in ಸಿನಿಮಾ
0
ಶ್ರೀಯಾ ಶರಣ್‌

ಪ್ರೈಡ್‌ ಇಂಡಿಯಾ ಅವಾರ್ಡ್‌ ಕಾರ್ಯಕ್ರಮದಲ್ಲಿ ನಟಿ ಶ್ರೀಯಾ ಶರಣ್‌

Share on WhatsAppShare on FacebookShare on Telegram

ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಪ್ರಶಸ್ತಿ ಕೊಡಮಾಡಿ ಪ್ರೋತ್ಸಾಹಿಸುವ `ಪ್ರೈಡ್ ಇಂಡಿಯಾ ಅವಾರ್ಡ್’ ಕಾರ್ಯಕ್ರಮದಲ್ಲಿ ನಟಿ ಶ್ರೀಯಾ ಶರಣ್‌ ಕಾಣಿಸಿಕೊಂಡು ಕಾರ್ಯಕ್ರಮ ಸಂಪೂರ್ಣಗೊಳ್ಳಲು ಸಹಕರಿಸಿದ್ದಾರೆ.

ADVERTISEMENT

ಇತ್ತೀಚೆಗೆ ಬೆಂಗಳೂರಿನ ಯಶವಂತಪುರ ತಾಜ್‌ನಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ಅಚ್ಚುಕಟ್ಟಾಗಿ ನೆರವೇರಿದೆ. ಉದ್ಯಮ ರಂಗದ ದಿಗ್ಗಜರು, ಸಾಧಕರು ನೆರೆದಿದ್ದ ಈ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಖ್ಯಾತ ನಟಿ ಶ್ರೀಯಾ ವಿಶೇಷ ಅತಿಥಿಯಾಗಿ ಆಗಮಿಸಿದ್ದರು.

ಉದ್ಯಮ ಜಗತ್ತೆಂಬುದು ಸಾಗರವಿದ್ದಂತೆ. ಅದರಲ್ಲಿನ ನಾನಾ ವಿಭಾಗಗಳಲ್ಲಿ ಗೇಮ್ ಚೇಂಜರ್ ಅನ್ನಿಸಿಕೊಂಡು, ಹೊಸತನಗಳ ಮೂಲಕ ಸಾಧನೆ ತೋರಿದ ತೊರೆಗಳೆಲ್ಲ ಯಶವಂತಪುರ ತಾಜ್ ಪ್ರಾಂಗಣದಲ್ಲಿ ಸಂಗಮಿಸಿದಂತಿತ್ತು. ಈ ಸ್ಫೂರ್ತಿದಾಯಕ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಪಾಲ್ಗೊಂಡಿದ್ದ ಶ್ರೀಯಾ ಶರಣ್, ಇದೊಂದು ಅದ್ಭುತ ಕಾರ್ಯಕ್ರಮ ಎಂಬಂಥಾ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಎಲ್ಲ ಸವಾಲುಗಳನ್ನು ಮೀರಿಕೊಂಡು ಉದ್ಯಮ ರಂಗದಲ್ಲಿ ಸಾಧನೆಗೈದವರನ್ನು ಸನ್ಮಾನಿಸುವ ಕಾರ್ಯಕ್ರಮವದು. ಇದರಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ಕಬ್ಜಾ ಖ್ಯಾತಿಯ ಶ್ರೀಯಾ ಪ್ರಶಸ್ತಿಗಳನ್ನು ಸಾಧಕರಿಗೆ ಕೊಟ್ಟು ಸಂತಸಪಟ್ಟಿದ್ದಾರೆ.

ಇಂಡಿಯಾ ಪ್ರೈಡ್ ಅವಾರ್ಡ್ ಇವೆಂಟ್ ಬೆಂಗಳೂರಿನಲ್ಲಿ ನಡೆಯುತ್ತಿರೋದೇ ಖುಷಿ ಎಂಬುದಾಗಿ ಮಾತು ಶುರು ಮಾಡಿದ ಶ್ರೀಯಾ ಶರಣ್, ಈ ಪ್ರಶಸ್ತಿಗಳನ್ನು ತಾನೇ ಕೊಟ್ಟಿದ್ದನ್ನು ಕಂಡು ತಮ್ಮ ಪೋಶಕರೂ ಹೆಮ್ಮೆ ಪಡುತ್ತಾರೆಂದಿದ್ದಾರೆ. ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ಕೊಡುವ ಈ ಕಾರ್ಯಕ್ರಮ ಅರ್ಥವತ್ತಾಗಿದೆ. ಸಣ್ಣದು ದೊಡ್ಡದೆಂಬುದರಾಚೆಗೆ ಇಂಥಾ ಪ್ರಶಸ್ತಿಗಳು ಘನತೆಯ ಕಾರಣದಿಂದ ಮುಖ್ಯವಾಗುತ್ತವೆ. ಮುಂದೊಂದು ದಿನ ಪ್ರೈಡ್ ಇಂಡಿಯಾ ಅವಾರ್ಡ್ ಕಾರ್ಯಕ್ರಮ ಗ್ರೇಟ್ ಶೋ ಅನ್ನಿಸಿಕೊಳ್ಳಲಿದೆ ಅಂತ ಭವಿಷ್ಯ ನುಡಿದಿದ್ದಾರೆ.

ಶ್ರೀಯಾ ಶರಣ್‌
ಪ್ರೈಡ್‌ ಇಂಡಿಯಾ ಅವಾರ್ಡ್‌ ಕಾರ್ಯಕ್ರಮದಲ್ಲಿ ನಟಿ ಶ್ರೀಯಾ ಶರಣ್‌ ಭಾಗವಹಿಸಿದರು

ಪ್ರೈಡ್ ಇಂಡಿಯಾ ಅವಾರ್ಡ್ ಎಂಬ ಪರಿಕಲ್ಪನೆ ವಿನಯ್ ಕುಮಾರ್ ನಾರಾಯಣಸ್ವಾಮಿ ಅವರ ಕನಸಿನ ಕೂಸು. ಉದ್ಯಮ ವಲಯದಲ್ಲಿ ಹೊಸಾ ಸಾಹಸಗಳನ್ನು ಮಾಡಿ ಗೆದ್ದವರು, ನಾನಾ ವಿಭಾಗದಲ್ಲಿದ್ದಾರೆ. ಅಂಥವರನ್ನೆಲ್ಲ ಗುರುತಿಸಿ, ಪ್ರೋತ್ಸಾಹಿಸುತ್ತಾ, ಭಾರತೀಯ ಉದ್ಯಮ ರಂಗ ಹೊಸಾ ಸಾಧ್ಯತೆಗಳಿಗೆ ಒಡ್ಡಿಕೊಳ್ಳಲು ಪ್ರೇರೇಪಣೆ ನೀಡುವುದು ಈ ಇವೆಂಟಿನ ಅಸಲಿ ಆಶಯ.

ಇದೀಗ ಬೆಂಗಳೂರಿನಲ್ಲಿ ಜರುಗಿರುವ ಈ ಕಾರ್ಯಕ್ರಮದಲ್ಲಿ ಉದ್ಯಮ ರಂಗದ ಮುನ್ನೂರಕ್ಕೂ ಹೆಚ್ಚು ಮಂದಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಭಾರತದ ಆರ್ಥಿಕ ಪಥವನ್ನು ಪ್ರಜ್ವಲಿಸುವಂತೆ ಮಾಡುವಲ್ಲಿ ತಮ್ಮದೇ ಸೇವೆ ಸಲ್ಲಿಸುತ್ತಿರುವ ಅನೇಕರನ್ನು ಈ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗುತ್ತದೆ. ಆ ಆಯ್ಕೆ ಪ್ರಕ್ರಿಯೆ ಕೂಡಾ ಅತ್ಯಂತ ಅಚ್ಚುಕಟ್ಟಾಗಿ ನಡೆಯುತ್ತದೆ.

ಯಶವಂತಪುರ ತಾಜ್ ನಲ್ಲಿ ನಡೆದಿರುವ ಪ್ರೈಡ್ ಇಂಡಿಯಾ ಅವಾರ್ಡ್ ವಿಶೇಷ ಆವೃತ್ತಿಯಲ್ಲಿ ನಟಿ ಶ್ರೀಯಾ ಶರಣ್‌ ಭಾಗವಹಿಸುವ ಮೂಲಕ ಕಾರ್ಯಕ್ರಮದ ಮೆರಗು ಹೆಚ್ಚಿಸಿದ್ದಾರೆ.

ಡಾ. ಸಿದ್ದೇಶ್ವರ್ ಮನೋಜ್, ಡಾ. ಮೀರ್ ಅನ್ವರ್, ಮೊಹಿಯುದ್ದೀನ್, ಸುಧಾಂಶು ಶ್ರೀವಾತ್ಸವ್, ಡಾ. ಭಾಸ್ಕರನ್ ರಾಜು ಅವರಂಥಾ ತೀರ್ಪುಗಾರರ ವಿಶೇಷ ಸಮಿತಿ ವಿಶೇಷ ಆವೃತ್ತಿಯಲ್ಲಿ ಭಾಗವಹಿಸಿತ್ತು.

ಈ ಸುದ್ದಿ ಓದಿದ್ದೀರಾ? ರಾಧನಾ ರಾಮ್ ಇನ್ಮುಂದೆ ಆರಾಧನಾ

ಯಾವುದೇ ಉದ್ಯಮದಲ್ಲಿನ ಹೊಸತನ, ಪ್ರಯೋಗಶೀಲತೆ, ಸಾಹಸ ಪ್ರವೃತ್ತಿಯನ್ನು ಪರಿಗಣಿಸುತ್ತಲೇ, ಗಹನವಾದ ಚರ್ಚೆ, ಹಲವಾರು ಮಾನದಂಡಗಳ ಆಧಾರದಲ್ಲಿ ಈ ಸಮಿತಿ ಪ್ರೈಡ್ ಇಂಡಿಯಾ ಅವಾರ್ಡ್ ಗೆ ಅರ್ಹರನ್ನು ಆಯ್ಕೆ ಮಾಡಿದೆ.

ಇದೇ ಸಂದರ್ಭದಲ್ಲಿ ಈ ಅವಾರ್ಡ್ ಈವೆಂಟಿನ ಸ್ಥಾಪಕರಾದ ವಿನಯ್ ಕುಮಾರ್ ನಾರಾಯಣಸ್ವಾಮಿ ಮನದುಂಬಿ ಮಾತಾಡಿದ್ದಾರೆ. ಭಾರತೀಯ ಉದ್ಯಮ ರಂಗದಲ್ಲಿ ನಡೆಯುತ್ತಿರುವ ನಾವೀನ್ಯತೆ ಬೆರೆತ ಪ್ರಯತ್ನಗಳಾಗುತ್ತಿರುವುದು ಖುಷಿ ಕೊಡುತ್ತಿದೆ. ಪ್ರೈಡ್ ಇಂಡಿಯಾ ಅವಾರ್ಡ್ ಸಂಸ್ಥೆ ಸದಾ ಕಾಲವೂ ಉದ್ಯಮ ರಂಗದಲ್ಲಿನ ವೈಶಿಷ್ಟ್ಯ ಮತ್ತು ಅಮೋಘ ಸಾಧನೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಧ್ಯೇಯ ಹೊಂದಿದೆ. ಈ ಕಾರ್ಯಕ್ರಮದಿಂದ ಅದಕ್ಕೆ ಮತ್ತಷ್ಟು ಅರ್ಥ ಸಿಕ್ಕಂತಾಗಿದೆ ಎಂದಿದ್ದಾರೆ. ಈ ಇವೆಂಟ್ ಉದ್ಯಮ ರಂಗದ ಎಲ್ಲ ಸಾಧಕರಿಗೂ ಸ್ಫೂರ್ತಿಯಾಗಿ, ಅದಾಗಲೇ ಮಹತ್ವದ್ದನ್ನು ಸಾಧಿಸಿದವರ ಸಮಾಗಮವಾಗಿ ಮುಖ್ಯವೆನಿಸುತ್ತದೆ. ಈ ಬಾರಿಯ ಸದರಿ ಅವಾರ್ಡ್ ಇವೆಂಟಿನಲ್ಲಿ ಭಾರತೀಯ ಚಿತ್ರರಂಗದ ಬಹು ಬೇಡಿಕೆಯ ತಾರೆ ಶ್ರೀಯಾ ಶರಣ್ ಪ್ರಧಾನ ಆಕರ್ಷಣೆಯಾಗಿದ್ದರು. ಅವರ ಇರುವಿಕೆಯಿಂದ ಈ ಈವೆಂಟ್ ಕಳೆಗಟ್ಟಿಕೊಂಡು ನೆರವೇರಿದೆ.

Tags: Actress Sfreeya SharanPride India AwardShreeya Sharanಪ್ರೈಡ್‌ ಇಂಡಿಯಾ ಅವಾರ್ಡ್‌ಬೆಂಗಳೂರುಶ್ರೀಯಾ ಶರಣ್‌
Previous Post

ಕಾವೇರಿ | ರಾಜ್ಯ ಸರ್ಕಾರ ನಿಲುವು ಖಂಡಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

Next Post

ಉತ್ತರ ಪ್ರದೇಶ | ಯುವತಿ ಜೊತೆ ಓಡಿಹೋದ ಮಗನ ತಂದೆ ತಾಯಿ ಹತ್ಯೆ

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
Next Post
ಉತ್ತರ ಪ್ರದೇಶ

ಉತ್ತರ ಪ್ರದೇಶ | ಯುವತಿ ಜೊತೆ ಓಡಿಹೋದ ಮಗನ ತಂದೆ ತಾಯಿ ಹತ್ಯೆ

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada