ರಾಜ್ಯದಲ್ಲಿ ಬಿಸಿಯೂಟ ಯೋಜನೆಗೆ ಸಿದ್ಧಗಂಗಾಶ್ರೀಗಳ ಹೆಸರು ಇಡಬೇಕು ಎಂದು ಬಿಜೆಪಿ ಮುಖಂಡ ವಿಜಯೇಂದ್ರ ಆಗ್ರಹಿಸಿದ್ದಾರೆ.
ತುಮಕೂರಿನಲ್ಲಿ ಶುಕ್ರವಾರ ನಡೆದ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ೧೧೫ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಾತ್ರದಲ್ಲೇ ದೇಶದಲ್ಲೇ ಬಿಸಿಯೂಟ ಯೋಜನೆಗೆ ಸ್ಫೂರ್ತಿಯಾದ ಸಿದ್ದಗಂಗಾ ಸ್ವಾಮೀಜಿ ಹೆಸರು ಇಡಬೇಕು ಎಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದರು.
ಸಿದ್ದಗಂಗಾ ಶ್ರೀಗಳು ಸಾವಿರಾರು ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಭೋಜನ ವ್ಯವಸ್ಥೆ ಮಾಡಿ ಶಿಕ್ಷಣವನ್ನೂ ನೀಡುವ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ಅಂತಹ ಹಿರಿಯರ ಹೆಸರು ಬಿಸಿಯೂಟ ಯೋಜನೆಗೆ ಇಡುವುದು ಸೂಕ್ತ ಎಂದು ಅವರು ಹೇಳಿದರು.