ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah ) ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ (Karnataka Budget 2025-26) ಬಜೆಟ್ ಮಂಡಿಸಿದ್ದಾರೆ.

ಇದು ಅವರ ದಾಖಲೆಯ 16ನೇ ಬಜೆಟ್ ಆಗಿದೆ. ಸಿದ್ದರಾಮಯ್ಯ ನೇತೃತ್ವದ ಈಗಿನ ಕಾಂಗ್ರೆಸ್ ಸರ್ಕಾರದ ಎರಡನೇ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಹಿಂದಿನ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳ ಜಾರಿ ವಿಚಾರದಲ್ಲಿ ಸಾಕಷ್ಟು ಕುತೂಹಲ ಇತ್ತು. 3.71 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡನೆ ಮಾಡಿದ್ದರು. ಈ ಬಾರಿ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಗಿಂತಲೂ ಹೆಚ್ಚಾಗಿದೆ.