ಮೈಸೂರು : ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಟಿ. ನರಸೀಪುರ ತಹಶೀಲ್ದಾರ್ಗೆ ಬಿಜೆಪಿ ಹಿರಿಯ ಮುಖಂಡ ತೋಟದಪ್ಪ ಬಸವರಾಜು ಇಂದು ದೂರನ್ನು ಸಲ್ಲಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಇವರಿಬ್ಬರು ವರುಣ ಕ್ಷೇತ್ರದಲ್ಲಿ ಹಣದ ಹೊಳೆಯನ್ನೇ ಹರಿಸಿದ್ದಾರೆ. ನಾ ಮುಂದು ತಾ ಮುಂದು ಎಂಬಂತೆ ಹಣ ಹಂಚುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ತೋಟದಪ್ಪ ಬಸವರಾಜು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಸಾಕಷ್ಟು ವರ್ಚಸ್ಸು ಇರುವ ಈ ನಾಯಕರು 2 ಸಾವಿರ ರೂಪಾಯಿ ನೀಡಿ ಮತ ಹಾಕಿಸಿಕೊಂಡಿದ್ದಾರೆ. ಎರಡು ಸಾವಿರ ರೂಪಾಯಿ ಕೊಟ್ಟು ಮತ ಹಾಕಿಸಿಕೊಳ್ಳುವ ಇವರು ಯಾವ ದಿಕ್ಕಿನಲ್ಲಿ ರಾಜ್ಯ ನಾಯಕರು ಎನಿಸಿಕೊಳ್ಳೋಕೆ ಸಾಧ್ಯ ಎಂದು ತೋಟದಪ್ಪ ಬಸವರಾಜು ಪ್ರಶ್ನಿಸಿದ್ದಾರೆ.