ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ದಿಸುತ್ತಾರೆ ಎಂಬ ಕುತೂಹಲ ಎಲ್ಲರಲ್ಲಿ ಮೂಡಿದೆ.
ಒಮ್ಮೆ ಅವರ ಹೆಸರು ವರುಣಾ, ಬಾದಾಮಿ, ಚಾಮರಾಜಪೇಟೆ, ಕೋಲಾರ, ದಕ್ಷಿಣ ಕನ್ನಡದಿಂದ ಸ್ಪರ್ದಿಸುತ್ತಾರೆ ಎಂಬ ಮಾತುಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ ಮತ್ತು ತಮ್ಮ ಸ್ಪರ್ದೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.
ಕೋಲಾರದಿಂದಲೇ ಸ್ಪರ್ದಿಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಮುಖಂಡರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ 2023ರ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಸ್ಪರ್ದೆ ಇಲ್ಲಿಂದಲ್ಲೇ ಎಂದು ಹೇಳಿದ್ದಾರೆ.
