• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
May 7, 2023
in ರಾಜಕೀಯ
0
ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಹಾಗೂ ಇಂದು ಬೆಂಗಳೂರಿನಲ್ಲಿ ಭರ್ಜರಿ ರೋಡ್​ ಶೋ ನಡೆಸುತ್ತಿರುವ ಪ್ರಧಾನಿ ಮೋದಿ ವಿಪಕ್ಷ ನಾಯಕ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿರುವ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನೆಗಳ ಮೇಲೆ ಪ್ರಶ್ನೆಗಳ ಬಾಣವನ್ನೇ ಎಸೆದಿದ್ದಾರೆ. ಇದಕ್ಕೆಲ್ಲಾ ಯಾರು ಹೊಣೆ ಎಂಬ ಶೀರ್ಷಿಕೆಯ ಅಡಿಯಲ್ಲಿ ವಿಪಕ್ಷ ನಾಯಕ ಈ ಪ್ರಶ್ನೆಗಳನ್ನು ಕೇಳಿದ್ದಾರೆ.

ADVERTISEMENT


ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೇ ಪತ್ರ ಬರೆಯುವಷ್ಟು ಭ್ರಷ್ಟಾಚಾರ ಇಲ್ಲಿ ತಾರಕಕ್ಕೇರಿದೆ.ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಾನಗಳ ನಗರ, ಸಿಲಿಕಾನ್ ಸಿಟಿ, ಐಟಿ-ಬಿಟಿ ರಾಜಧಾನಿ, ಸ್ಟಾರ್ಟ್ಅಪ್ ರಾಜಧಾನಿ ಎಂದೆಲ್ಲ ಖ್ಯಾತಿ ಗಳಿಸಿತ್ತು.
ಬಿಜೆಪಿ ಸರ್ಕಾರದ ಕಾಲದಲ್ಲಿ ಗುಂಡಿಬಿದ್ದ ರಸ್ತೆಗಳು, ನೆರೆನೀರಿನಲ್ಲಿ ಮುಳುಗುವ ಮನೆಗಳು, ಅಪರಾಧಿಗಳ ಜಗತ್ತಿನ ರಾಜಧಾನಿ ಎಂಬ ಕುಖ್ಯಾತಿ ಗಳಿಸಿದೆ.

ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಂಬರ್ ಒನ್ ತಾಣವಾಗಿತ್ತು.ಬಿಜೆಪಿ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಗರಗಳ ಪಟ್ಟಿಯಲ್ಲಿ ಹದಿನೇಳನೇ ಸ್ಥಾನಕ್ಕೆ ಕುಸಿದಿದೆ.

ಅಪರಾಧ ಸಂಖ್ಯೆಗಳ ಹೆಚ್ಚಳ, ಕುಸಿದುಬಿದ್ದಿರುವ ಮೂಲಸೌಕರ್ಯ ವ್ಯವಸ್ಥೆ ಮತ್ತು ಗುಂಡಿಬಿದ್ದ ರಸ್ತೆಗಳಿಂದಾಗಿ ಜಾಗತಿಕ ವಾಸಯೋಗ್ಯ ಸೂಚ್ಯಂಕದಲ್ಲಿ ಬೆಂಗಳೂರು ಕನಿಷ್ಠ ಶ್ರೇಣಿಗೆ ತಲುಪಿದೆ.ಕಳೆದ ಮೂರು ವರ್ಷಗಳಲ್ಲಿ ಕೇವಲ ಗುಂಡಿಬಿದ್ದ ರಸ್ತೆಗಳಿಂದಾಗಿ 31 ಮಂದಿಪ್ರಾಣ ಕಳೆದುಕೊಂಡಿದ್ದಾರೆ.ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ಕೇವಲ ರಸ್ತೆ ಗುಂಡಿಮುಚ್ಚಲು ರೂ.7,121 ಖರ್ಚು ಮಾಡಿದರೂ ಇನ್ನೂ ನೂರಾರು ಹಳೆಯ ಗುಂಡಿಗಳು ಉಳಿದಿವೆ, ಹೊಸ ಗುಂಡಿಗಳು ತಯರಾಗುತ್ತಿವೆ.

ಶೇಕಡಾ 48ರಷ್ಟು ವಾಹನದಟ್ಟಣೆಯ ಪ್ರಮಾಣದಿಂದಾಗಿ ಬೆಂಗಳೂರು ನಗರ ದೇಶದಲ್ಲಿ ಎರಡನೇ ಅತ್ಯಂತ ಹೆಚ್ಚು ವಾಹನ ದಟ್ಟಣೆಯ ನಗರ ಎಂಬ ಕುಖ್ಯಾತಿಗೆ ಒಳಪಟ್ಟಿದೆ. ಇದರಿಂದಾಗಿ ನಗರವಾಸಿಗಳು ಮನೆಗಿಂತ ಹೆಚ್ಚಿನ ಸಮಯ ರಸ್ತೆಯಲ್ಲಿ ಕಳೆಯುವಂತಾಗಿದೆ.ಎನ್.ಸಿ.ಆರ್.ಬಿ ವರದಿ ಪ್ರಕಾರ ದೇಶದ ಮೆಟ್ರೋಪಾಲಿಟನ್ ನಗರಗಳಲ್ಲಿ ನಡೆಯುವ ಅಪರಾಧಗಳ ಪೈಕಿ 72% ಕಳ್ಳತನಗಳು ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಕಾರಣ ಬೆಂಗಳೂರು ನಗರ ಈಗ ಅಪರಾಧಗಳ ತಾಣವಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯದ ಪ್ರಮಾಣ 2021ರಲ್ಲಿ ಶೇಕಡಾ 18ರಷ್ಟು ಹೆಚ್ಚಾಗಿದೆ.ಎನ್.ಡಿ.ಪಿ.ಎಸ್ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ 1493% ರಷ್ಟು ಹೆಚ್ಚಾಗಿವೆ. 2021ರಲ್ಲಿ ಇಮ್ಮೊರಲ್ ಟ್ರಾಪಿಕಿಂಗ್ ಶೇಕಡಾ 61ರಷ್ಟು ಹೆಚ್ಚಾಗಿದೆ.

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಲು ರೂಪಿಸಲಾಗಿರುವ ಮೇಕೆದಾಟು ಯೋಜನೆಗೆ ಅನುಮತಿ ನೀಡದೆ ಇರುವ ಕಾರಣದಿಂದಾಗಿ ನಗರದಲ್ಲಿ ಕುಡಿಯುವ ನೀರಿನ ಕೊರತೆ ಹೆಚ್ಚಾಗುತ್ತಿದೆ. ನಗರದ ಜನ ಕುಡಿಯುವ ನೀರಿಗಾಗಿ ಖಾಸಗಿ ಬೋರ್ ವೆಲ್ ಮತ್ತು ಟ್ಯಾಂಕರ್ ನೀರನ್ನು ಬಳಸುತ್ತಿದ್ದಾರೆ. ಇದಕ್ಕೆಲ್ಲ ಯಾರು ಹೊಣೆ ಎಂದು ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪ್ರಶ್ನೆ ಮಾಡಿದ್ದಾರೆ.

Tags: BJPCorruptionOpposition Leader SiddaramaiahPrime Minister Narendra Modiroad show
Previous Post

ಪ್ರಿಯಾಂಕ್​ ಖರ್ಗೆ ಬೆಂಬಲಿಗನ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

Next Post

ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಅನ್ನೋದು ಕನಸು: ವಿ.ಸೋಮಣ್ಣ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

February 13, 2026
ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

February 13, 2026
Next Post
ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಅನ್ನೋದು ಕನಸು: ವಿ.ಸೋಮಣ್ಣ

ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಅನ್ನೋದು ಕನಸು: ವಿ.ಸೋಮಣ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada