• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ಟಿಂಗ್‌ ವಿಡಿಯೋಗೆ ಸ್ಟೇ ತಂದಿದ್ಯಾಕೆ..? : ಸಿದ್ದರಾಮಯ್ಯ ಹೇಳಿದ್ದೇನು..?

ಈ ವಿಷಯದಲ್ಲಿ ನಾನು ಸಂಪೂರ್ಣ ನಿರಪರಾಧಿ ಎನ್ನುವುದು ನನ್ನ ಆತ್ಮಸಾಕ್ಷಿಗೆ ತಿಳಿದಿದೆ : ಸಿದ್ದರಾಮಯ್ಯ..

ಪ್ರತಿಧ್ವನಿ by ಪ್ರತಿಧ್ವನಿ
October 14, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
I have no connection whatsoever to the sting operation video: Former CM Siddaramaiah clarifies
Share on WhatsAppShare on FacebookShare on Telegram

ಬೆಂಗಳೂರು : ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ್ದು ಎನ್ನಲಾಗಿರುವ ಸ್ಟಿಂಗ್‌ ಆಪರೇಷನ್‌ ವಿಡಿಯೋ ವಿಚಾರ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಆಡಳಿತ, ವಿಪಕ್ಷಗಳ ನಾಯಕರೂ ಸಹ ಇದರ ಬಗ್ಗೆ ತಮ್ಮ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಆದರೆ ಈ ನಡುವೆಯೇ ಮೌನ ಮುರಿದಿರುವ ಸಿದ್ದರಾಮಯ್ಯ, ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಇದು ಸ್ಪಷ್ಟವಾಗಿ ರಾಜಕೀಯ ದುರುದ್ದೇಶದಿಂದ ನನ್ನ ಚಾರಿತ್ರ್ಯಹನನ ಮಾಡುವ ಪ್ರಯತ್ನದಂತೆ ಕಾಣುತ್ತಿದೆ ಎಂದು ಷಡ್ಯಂತ್ರವನ್ನು ಖಂಡಿಸಿದ್ದಾರೆ.

ADVERTISEMENT
Farmers Protest : ಪ್ರಹ್ಲಾದ ಜೋಶಿ ವಿರುದ್ಧ ರೈತ ಆಕ್ರೋಶದ ಮಾತು..! #pralhadjoshi #centralgovernment

ಈ ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲದೆ ಇದ್ದರೂ ಇದನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ನನ್ನ ವಿರುದ್ದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ಹೆಸರಿನ ಉಲ್ಲೇಖ ಇರುವ ಈ ಸ್ಟಿಂಗ್ ಆಪರೇಷನ್ ವಿಡಿಯೋ ಅನ್ನು ಯಾವುದೇ ಪತ್ರಿಕೆ, ಚಾನೆಲ್ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ಇಲ್ಲವೇ ಪ್ರಸಾರ ಮಾಡದಂತೆ ತಡೆನೀಡಬೇಕು ಎಂದು ಕೋರಿ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ವಿಷಯದಲ್ಲಿ ನಾನು ಸಂಪೂರ್ಣ ನಿರಪರಾಧಿ ಎನ್ನುವುದು ನನ್ನ ಆತ್ಮಸಾಕ್ಷಿಗೆ ತಿಳಿದಿದೆ. ತೆರೆದ ಪುಸ್ತಕದಂತಿರುವ ನನ್ನ ಐದು ದಶಕಗಳ ರಾಜಕೀಯ ಜೀವನದ ಅರಿವು ಇರುವ ರಾಜ್ಯದ ಜನತೆಗೂ ಇದು ಗೊತ್ತಿದೆ ಎನ್ನುವ ವಿಶ್ವಾಸ ನನಗಿದೆ. ಆದರೆ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುಳ್ಳನ್ನು ಸತ್ಯವಾಗಿ ಬಿಂಬಿಸುವುದು ಸುಲಭದ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ನಾನು ನ್ಯಾಯಾಲಯದ ಮೆಟ್ಟಿಲು ಏರಿದ್ದೇನೆಯೇ ಹೊರತು ಉಳಿದಂತೆ ಯಾವ ಭಯವೂ ನನಗಿಲ್ಲ. ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎನ್ನುವ ವಿಶ್ವಾಸವೂ ನನಗಿದೆ ಎಂದು ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ : ‘ಚಿಕ್ಕಮ್ಮ’ ಎಂದು ಓಡಿಬಂದ ಮಹಿಳೆ ಮಾಡಿದ್ದೇನು? ಮಮತಾ ಬ್ಯಾನರ್ಜಿ ನಿವಾಸದ ಬಳಿ ಗಲಾಟೆ

ನಾನು ಸಂಪೂರ್ಣವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು. ಇಲ್ಲಿಯ ವರೆಗಿನ ನನ್ನ ರಾಜಕೀಯ ಜೀವನದಲ್ಲಿ ನಾನೆಂದೂ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸಿದವನಲ್ಲ. ಆದರೆ ಕೆಲವು ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ನ್ಯಾಯಾಲಯದ ಮೂಲಕ ಪ್ರಕಟಣೆ-ಪ್ರಸಾರಕ್ಕೆ ತಡೆಯಾಜ್ಞೆ ತರಬೇಕಾದ ಪ್ರಸಂಗ ಬಂದಿದೆ. ಈ ಬಗ್ಗೆ ನನಗೆ ವಿಷಾದವಿದೆ ಎಂದು ಮಾಧ್ಯಮಗಳ ನಡವಳಿಕೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ನಾನು ಈಗಾಗಲೇ ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಆ ತನಿಖೆಯಿಂದ ಸತ್ಯ ಹೊರಬರಲಿದೆ ಎಂಬ ವಿಶ್ವಾಸವೂ ನನಗಿದೆ. ಅಲ್ಲಿಯ ವರೆಗೆ ಮಾಧ್ಯಮಗಳು ಮಾತ್ರವಲ್ಲ ಸಾರ್ವಜನಿಕರು ಕೂಡಾ ಅನಗತ್ಯವಾಗಿ ಇಂತಹ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡದೆ ಸತ್ಯದ ಪರವಾಗಿ ನಿಲ್ಲಬೇಕೆಂದು ಎಂದು ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಈ ಮೂಲಕ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ಸ್ಟಿಂಗ್‌ ಆಪರೇಷನ್‌ ವಿಚಾರಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಎಲ್ಲಿಯೂ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ.

Tags: congress karnatakaCourt stayDK ShivakumarEx CM Of KarnatakaKarnataka PoliticsPratidhvanisiddaramaiahSting OpertionViral videos
Previous Post

ಬಿಎಸ್‌ಎನ್‌ಎಲ್ ಗ್ರಾಹಕರಿಗೆ ಸಿಹಿಸುದ್ದಿ: ನೆಟ್‌ವರ್ಕ್ ಸುಧಾರಣೆಗೆ ಮಹತ್ವದ ಹೆಜ್ಜೆ |BSNL

Next Post

ಕಿಡಿಗೇಡಿಗಳ ಕಾಟಕ್ಕೆ ಊರನ್ನೇ ಬಿಟ್ಟ ಇನ್ಸ್ಟಾಗ್ರಾಮ್ ಇನ್ಫ್ಲೂಯೆನ್ಸರ್ : ಕಾರಣ ಕೇಳಿದ್ರೆ ನೀವು ನಕ್ಕು ನಕ್ಕು ಸುಸ್ತಾಗ್ತೀರಿ..!

Related Posts

ಅಭಿಮಾನಿಗಳ ಅತಿರೇಕಕ್ಕೆ ಸ್ವತಃ ದರ್ಶನ್ ಬಳಗದಿಂದಲೇ ಕಡಿವಾಣ; ಡಿ ಕಂಪನಿ ಖಡಕ್ ಸೂಚನೆ!
ಕರ್ನಾಟಕ

ಅಭಿಮಾನಿಗಳ ಅತಿರೇಕಕ್ಕೆ ಸ್ವತಃ ದರ್ಶನ್ ಬಳಗದಿಂದಲೇ ಕಡಿವಾಣ; ಡಿ ಕಂಪನಿ ಖಡಕ್ ಸೂಚನೆ!

by Shivakumar
November 3, 2026
0

ನಟ ದರ್ಶನ್ ಅವರ ಹೆಸರಿನಲ್ಲಿ ಸಾರ್ವಜನಿಕ ಸಮಾರಂಭಗಳು, ದೇವಾಲಯಗಳು, ವಿವಾಹ ಮಂಟಪಗಳು ಹಾಗೂ ಇತರ ನಟರ ಕಾರ್ಯಕ್ರಮಗಳಲ್ಲಿ ಕೆಲ ಅಭಿಮಾನಿಗಳು ಮಾಡುತ್ತಿರುವ ಅತಿರೇಕದ ವರ್ತನೆಗೆ ಕಡಿವಾಣ ಹಾಕಲು...

Read moreDetails
ಥಾರ್, ಸ್ಕಾರ್ಪಿಯೋ, XUV700 ವಿನ್ಯಾಸದ ಹಿಂದಿರುವ ಮಹಿಳೆ ಯಾರು ಗೊತ್ತೇ? 

ಥಾರ್, ಸ್ಕಾರ್ಪಿಯೋ, XUV700 ವಿನ್ಯಾಸದ ಹಿಂದಿರುವ ಮಹಿಳೆ ಯಾರು ಗೊತ್ತೇ? 

November 3, 2026
ಹೂಡಿಕೆದಾರರೇ ಗಮನಿಸಿ; ದೀಪಾವಳಿ ದಿನ ಷೇರು ಖರೀದಿ-ಮಾರಾಟಕ್ಕೆ ಇಲ್ಲಿದೆ ಸಮಯ

ಹೂಡಿಕೆದಾರರೇ ಗಮನಿಸಿ; ದೀಪಾವಳಿ ದಿನ ಷೇರು ಖರೀದಿ-ಮಾರಾಟಕ್ಕೆ ಇಲ್ಲಿದೆ ಸಮಯ

November 3, 2026
Praja Seva Andolana' (People's Service Movement) organized with the objective of providing solutions to people's problems: Minister Santosh S. Lad

ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್

November 3, 2026
Sites to be allotted this year to 5 lakh poor people in the state who do not own a home: CM D.K. Shivakumar announces

ರಾಜ್ಯದಲ್ಲಿ ಸ್ವಂತ ಸೂರು ಇಲ್ಲದ 5 ಲಕ್ಷ ಬಡವರಿಗೆ ಈ ವರ್ಷವೇ ಸೈಟ್ ಹಂಚಿಕೆ : ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

November 3, 2026
Next Post
ಕಿಡಿಗೇಡಿಗಳ ಕಾಟಕ್ಕೆ ಊರನ್ನೇ ಬಿಟ್ಟ ಇನ್ಸ್ಟಾಗ್ರಾಮ್ ಇನ್ಫ್ಲೂಯೆನ್ಸರ್ : ಕಾರಣ ಕೇಳಿದ್ರೆ ನೀವು ನಕ್ಕು ನಕ್ಕು ಸುಸ್ತಾಗ್ತೀರಿ..!

ಕಿಡಿಗೇಡಿಗಳ ಕಾಟಕ್ಕೆ ಊರನ್ನೇ ಬಿಟ್ಟ ಇನ್ಸ್ಟಾಗ್ರಾಮ್ ಇನ್ಫ್ಲೂಯೆನ್ಸರ್ : ಕಾರಣ ಕೇಳಿದ್ರೆ ನೀವು ನಕ್ಕು ನಕ್ಕು ಸುಸ್ತಾಗ್ತೀರಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada