• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗದ ಮುಖಂಡನ ಸಾಧನೆ- ಸಿದ್ದರಾಮಯ್ಯ

by
March 17, 2021
in Uncategorized
0
ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗದ ಮುಖಂಡನ ಸಾಧನೆ- ಸಿದ್ದರಾಮಯ್ಯ
Share on WhatsAppShare on FacebookShare on Telegram

ʼನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಅವರ ಬಲದಿಂದ ಅಧಿಕಾರ ಅನುಭವಿಸುತ್ತಿರುವ ಯಡಿಯೂರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ನಾಯಕರಿಲ್ಲ ಎಂದು ಹೇಳುತ್ತಿರುವುದು ತಮಾಷೆಯಾಗಿದೆ. ಸ್ವಂತಬಲದಲ್ಲಿ ಚುನಾವಣೆ ಗೆದ್ದು ಪೂರ್ಣಾವಧಿ ಸರ್ಕಾರ ನಡೆಸಿದ್ದು ಕಾಂಗ್ರೆಸ್ ಪಕ್ಷ. ಅವರೇನಾದರೂ ಒಂದೈದು ವರ್ಷ ಪೂರ್ತಿ ಮುಖ್ಯಮಂತ್ರಿಯಾಗಿದ್ದಾರಾ?, ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ದ ಕಿಡಿಕಾರಿದ್ದಾರೆ.

ADVERTISEMENT

ಬಿಜೆಪಿವರು ಒಂದು ಕಡೆ ವಿಶ್ವಮಾನವರಾಗಿ ಅಂತನೂ ಹೇಳ್ತಾರೆ, ಇನ್ನೊಂದು ಕಡೆ ಕುರಿ, ಕೊಳಿ, ಗೋಮಾಂಸ ತಿನ್ನುವವರ ವಿರುದ್ಧ ದ್ವೇಷವನ್ನೂ ಕಾರುತ್ತಾರೆ. ವಿಶ್ವಮಾನವನಾಗುವುದು ಎಂದರೆ ಪ್ರತಿ ವ್ಯಕ್ತಿಯ ಆಹಾರ, ಸಂಸ್ಕೃತಿ, ಆಚರಣೆಗಳನ್ನು ಗೌರವಿಸಿ, ಅವರಿದ್ದಂತೆ ಅವರನ್ನು ಒಪ್ಪಿಕೊಳ್ಳುವುದುʼ ಎಂದು ಹೇಳಿದ್ದಾರೆ.

ʼಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ.ʼ ಎಂದು ಸಿದ್ದರಾಮಯ್ಯ ಟಾಂಗ್‌ ನೀಡಿದ್ದಾರೆ.

ರೈತ ಹೋರಾಟ, ಕೃಷಿ ಮಸೂದೆ, ಕೇಂದ್ರ ಸರ್ಕಾರದ ಧೋರಣೆ ಕುರಿತು ಮಾತನಾಡಿದ ಸಿದ್ದರಾಮಯ್ಯ, ʼಸುಪ್ರೀಂ ಕೋರ್ಟ್ ಕೇಂದ್ರದ ನೂತನ ಕೃಷಿ ಕಾಯ್ದೆಗಳಿಗೆ ತಡೆ ನೀಡಿದೆಯೆಂದರೆ ಆ ಮಸೂದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದರ್ಥ. ಅದೇ ನ್ಯಾಯಾಲಯ ರೈತರಿಗೆ ಪ್ರತಿಭಟನೆ ಮುಂದುವರೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದೆ ಎಂದರೆ ಅವರ ಬೇಡಿಕೆಗಳು ನ್ಯಾಯಬದ್ಧವಾಗಿವೆ ಎಂದರ್ಥʼ ಎಂದು ಪ್ರತಿಭಟನಾ ನಿರತ ರೈತರ ಬೇಡಿಕೆಗಳಿಗೆ ಬೆಂಬಲ ನೀಡಿದ್ದಾರೆ.

ʼಕಳೆದ 48 ದಿನಗಳಲ್ಲಿ ದೆಹಲಿಯಲ್ಲಿ ರೈತರು ಮಳೆ, ಚಳಿ, ಹಸಿವು ಯಾವುದನ್ನೂ ಲೆಕ್ಕಿಸದೆ ಬೀದಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಾ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹಠಮಾರಿ ಧೋರಣೆಯೇ ರೈತರ ಎಲ್ಲ ಕಷ್ಟ-ನಷ್ಟಗಳಿಗೆ ನೇರ ಕಾರಣʼ ಎಂದು ಅವರು ಹೇಳಿದ್ದಾರೆ.

ಬಳಿಕ ಎ ಎಚ್ ವಿಶ್ವನಾಥ್ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ʼ ಹೆಚ್. ವಿಶ್ವನಾಥ್ ಅವರು ತಮಗೆ ಲೋಕಸಭೆಗೆ ಟಿಕೆಟ್ ಕೊಡಿಸಿದ್ದು, 2008ರಲ್ಲಿ ವಿಧಾನಸಭೆಗೆ ಟಿಕೆಟ್ ಕೊಡಿಸಿದ್ದು ಯಾರು ಎಂಬುದನ್ನು ನೆನಪು ಮಾಡಿಕೊಂಡು ಹೇಳಲಿ, ಆ ಮೇಲೆ ನನ್ನ ವಿರುದ್ಧ ಮಾತನಾಡಲಿ. ಕೃತಜ್ಞತೆ ಇಲ್ಲದೆ ಇರುವ ಕಾರಣಕ್ಕೆ ಯಡಿಯೂರಪ್ಪ ಅವರೂ ಇವರನ್ನು ಮಂತ್ರಿ ಮಾಡಿಲ್ಲ ಎಂದು ಹೇಳಿದ್ದಾರೆ.

ʼಸಿದ್ದರಾಮಯ್ಯ ಕೃತಜ್ಞತೆ ಇಲ್ಲದ ನಾಯಕʼ ಎಂದು ಎ ಎಚ್‌ ವಿಶ್ವನಾಥ್‌ ಹೇಳಿದ್ದರು.

Previous Post

ಸಂಪುಟ ವಿಸ್ತರಣೆ ಬೆನ್ನಲ್ಲೇ ಭಿನ್ನಮತ ಸ್ಪೋಟ; CM ವಿರುದ್ದ ಶಾಸಕರು ಗರಂ

Next Post

ಮುಂದುವರೆದ ಸಾ ರಾ ಮಹೇಶ್‌ ಮತ್ತು ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ

Related Posts

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ
Uncategorized

ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?

by ಪ್ರತಿಧ್ವನಿ
April 30, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮತದಾನದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ಹಾಗೂ ಎಕ್ಸಿಟ್...

Read moreDetails
ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

April 29, 2026
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

April 17, 2026
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
Next Post
ಮುಂದುವರೆದ ಸಾ ರಾ ಮಹೇಶ್‌ ಮತ್ತು ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ

ಮುಂದುವರೆದ ಸಾ ರಾ ಮಹೇಶ್‌ ಮತ್ತು ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada