ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ದೇಗುಲ ನೆಲಸಮದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ ಎಂದು ಅವರು ಹೇಳಿದ್ದಾರೆ.
ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು. ನ್ಯಾಯಾಲಯದ ಆದೇಶವಿದ್ದರೂ ಅದನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವ ಮುನ್ನ ಜಿಲ್ಲಾಡಳಿತ ಪರಿಣಾಮದ ಬಗ್ಗೆ ಯೋಚನೆ ಮಾಡಬೇಕಾಗಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆನಪಾಗಲಿಲ್ಲವೇ? ಎಂದು ಪ್ರಶ್ನಿಸಿರುವ ಅವರು ದೇವಸ್ಥಾನ ಕೆಡವಿ ಹಾಕಿದ ಘಟನೆ ಬಗ್ಗೆ ಮುಖ್ಯಮಂತ್ರಿಗಳು ನಿಷ್ಪಕ್ಷಪಾತ ತನಿಖೆ ನಡೆಸಿ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಹಾಗು ಹೊಸ ನಿವೇಶನ ಮಂಜೂರು ಮಾಡಿ ಸರ್ವರನ್ನೂ ವಿಶ್ವಾಸಕ್ಕೆ ಪಡೆದು ನೂತನ ದೇವಸ್ಥಾನವನ್ನು ರಾಜ್ಯ ಸರ್ಕಾರವೇ ನಿರ್ಮಿಸಿಕೊಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.