ಬೆಂಗಳೂರು: ಮೇ.13: ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿದ ಬೆನ್ನಲ್ಲೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಯಾವುದೇ ಚುನಾವಣೆಯಲ್ಲಿ ಕೇವಲ ರಾಜಕೀಯ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಮಾತ್ರವಲ್ಲ ಲಕ್ಷಾಂತರ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲದ ಅಭಿಮಾನಿಗಳು, ರಾತ್ರಿ-ಹಗಲು ಶ್ರಮಪಟ್ಟಿರುತ್ತಾರೆ.

ಅವರೆಲ್ಲರಿಗೂ ತುಂಬು ಹೃದಯದಿಂದ ಕೃತಜ್ಞತೆಗಳು ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಾರಿ ಕಾಂಗ್ರೆಸ್ ಸರ್ಕಾರ ಎಂದು ಟ್ವೀಟ್ ಮಾಡಿದ್ದಾರೆ.


