• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, August 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಯಡಿಯೂರಪ್ಪನ ಕೈಕಾಲು ಹಿಡಿದು ಚುನಾವಣಾ ಪ್ರಚಾರಕ್ಕೆ ಕರೆತಂದ ಬೊಮ್ಮಾಯಿ: ಸಿದ್ದರಾಮಯ್ಯ ಟೀಕೆ

Any Mind by Any Mind
October 16, 2021
in ಕರ್ನಾಟಕ, ರಾಜಕೀಯ
0
ಯಡಿಯೂರಪ್ಪನ ಕೈಕಾಲು ಹಿಡಿದು ಚುನಾವಣಾ ಪ್ರಚಾರಕ್ಕೆ ಕರೆತಂದ ಬೊಮ್ಮಾಯಿ: ಸಿದ್ದರಾಮಯ್ಯ ಟೀಕೆ
Share on WhatsAppShare on FacebookShare on Telegram

ಉದಾಸಿ ಮತ್ತು ಶಿವರಾಜ್ ಸಜ್ಜನರ್ ಇಬ್ಬರೂ ಸೇರಿ ಹಾವೇರಿಯ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ನುಂಗಿ ನೀರುಕುಡಿದರು. ಖಾಲಿ ಸಕ್ಕರೆ ಚೀಲಗಳನ್ನು ಬಿಡದೆ ಮಾರಾಟ ಮಾಡಿದ್ದಾರೆ. ಈಗ ಕಾರ್ಖಾನೆ ಖಾಸಗಿಯವರ ಪಾಲಾಗಿದೆ. ಇಂಥವರು ಈಗ ಬಿಜೆಪಿ ಅಭ್ಯರ್ಥಿಯಾಗಿ ನಿಮ್ಮ ಬಳಿ ಮತ ಕೇಳುತ್ತಾರೆ, ಮತ ನೀಡುತ್ತೀರೋ, ಬಿಡುತ್ತೀರೋ ಕ್ಷೇತ್ರದ ಜನರೇ ಯೋಚನೆ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೈ ಬಾಯಿ ಶುದ್ಧವಾಗಿರುವ ಶ್ರೀನಿವಾಸ್ ಮಾನೆಯಂತಹ ಶಾಸಕರು ಕ್ಷೇತ್ರಕ್ಕೆ ಬೇಕೋ? ಭ್ರಷ್ಟ ಶಿವರಾಜ್ ಸಜ್ಜನರ್ ಬೇಕೋ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ADVERTISEMENT

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಯಾವೊಂದು ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಿರಲಿಲ್ಲ, ನಾವು ಹೆಚ್ಚು ಸ್ಥಾನ ಗೆದ್ದಿದ್ದರೂ ಕೋಮುವಾದಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಜೆಡಿಎಸ್ ಗೆ ಬೆಂಬಲ ನೀಡಿದೆವು. ಯಡಿಯೂರಪ್ಪ ಆಪರೇಷನ್ ಕಮಲ ಮಾಡಿ ಕಾಂಗ್ರೆಸ್- ಜೆಡಿಎಸ್ ನ ಹದಿನೇಳು ಶಾಸಕರನ್ನು ಖರೀದಿ ಮಾಡಿ, ಸರ್ಕಾರ ಮಾಡಿದ್ರೂ ಹೆಚ್ಚು ದಿನ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರಲಿಲ್ಲ. ಈಗ ಬಸವರಾಜ ಬೊಮ್ಮಾಯಿಯವರು ಕೈಕಾಲು ಹಿಡಿದು ಚುನಾವಣಾ ಪ್ರಚಾರಕ್ಕೆ ಬರುವಂತೆ ಗೋಗರೆದಿದ್ದಾರೆ. ಹಾಗಾಗಿ ಈ ಕಡೆ ಬರಬಹುದು ಎಂದು ಟೀಕಿಸಿದ್ದಾರೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾವು ನೀಡುತ್ತಿದ್ದ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಕಡಿತ ಮಾಡಿದರು. ಬಡವರ ಹೊಟ್ಟೆ ಮೇಲೆ ಹೊಡೆಯುವಂತಾ ನೀಚ ಬುದ್ದಿ ಯಾಕೆ ಮಾಡಬೇಕು? ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಹಾಲು ಕೊಡ್ತಿದ್ವಿ, ಈಗ ಅದು ಇದೆಯಾ? ಸಾಲಮನ್ನಾ, ಇಂದಿರಾ ಕ್ಯಾಂಟೀನ್, ಭಾಗ್ಯಜ್ಯೋತಿ, ಉಚಿತ ಮನೆಗಳು, ಶೂಭಾಗ್ಯ, ಶಾದಿಭಾಗ್ಯ, ಕೃಷಿಭಾಗ್ಯ ಇವುಗಳಲ್ಲಿ ಯಾವ ಯೋಜನೆ ಈಗಿದೆ? ಎಲ್ಲವನ್ನೂ ನಿಲ್ಲಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ಹದಿನೈದು ಲಕ್ಷ ಮನೆ ನೀಡಿದ್ದೆ. ಹಾವೇರಿಯ ಬಡ ಜನರಿಗೆ ಬಿಜೆಪಿ ಸರ್ಕಾರ ಒಂದೇ ಒಂದು ಮನೆಯನ್ನು ಕಟ್ಟಿಸಿ ಕೊಟ್ಟಿದೆಯಾ? ಕುರಿ, ಹಸು, ಎತ್ತುಗಳು ಸತ್ತಾಗ ಪರಿಹಾರ ನೀಡುವ ಅನುಗ್ರಹ ಯೋಜನೆ ಈಗಿಲ್ಲ, ಇದರಿಂದ ಹಿಂದುಳಿದ ವರ್ಗಗಳ ಜನ ಎಷ್ಟು ನಷ್ಟ ಅನುಭವಿಸಿದ್ದಾರೆಂದು ಸರ್ಕಾರಕ್ಕೆ ಗೊತ್ತೇ? ಇಷ್ಟೆಲ್ಲಾ ಮಾಡಿದ್ರೂ ಬಿಜೆಪಿಗೆ ಮತ ನೀಡಬೇಕಾ? ಇದೂ ಸಾಕಾಗಿಲ್ಲ ಅಂತ ಕೊಳವೆ ಬಾವಿಗೆ ಮೀಟರ್ ಹಾಕಿ ರೈತರ ಬದುಕು ಕಸಿಯಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಹಸಿವಿನಿಂದ ನರಳುತ್ತಿರುವ ದೇಶಗಳ ಪಟ್ಟಿಯಲ್ಲಿ ಭಾರತ 101 ಸ್ಥಾನಕ್ಕೆ ಕುಸಿದಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ನಮಗಿಂತ ಉತ್ತಮ ಸ್ಥಾನದಲ್ಲಿ ಇದ್ದಾವೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಹಸಿವಿನ ಸೂಚ್ಯಂಕದಲ್ಲಿ ಭಾರತ 55ನೇ ಸ್ಥಾನದಲ್ಲಿ ಇತ್ತು. ಇದೇನಾ ಮೋದಿಯ ಅಚ್ಚೇದಿನ್? ಎಂದು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.

ರಸಗೊಬ್ಬರ, ಸಿಮೆಂಟ್, ಕಬ್ಬಿಣ, ಸಿಲಿಂಡರ್, ಪೆಟ್ರೋಲ್, ಡೀಸೆಲ್, ಆಸ್ಪತ್ರೆ ಬಿಲ್, ಅಡುಗೆ ಎಣ್ಣೆ ಬೆಲೆ ಏನಾಗಿದೆ? ಬಡವರು ಕೊಳ್ಳಲು ಸಾಧ್ಯವೇ? ಈ ಉಪ ಚುನಾವಣೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಇದು ನಿಜವೇ ಆದರೂ ಇಷ್ಟೆಲ್ಲಾ ಅನ್ಯಾಯ ಮಾಡಿರುವ ಬಿಜೆಪಿಗೆ ಬುದ್ದಿ ಕಲಿಸಬೇಕಲ್ಲವೇ? ಅದಕ್ಕಾಗಿಯಾದರೂ ನಮ್ಮ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರಿಗೆ ಮತ ನೀಡಿ ಗೆಲ್ಲಿಸಿ ಎಂದು ಕೈಮುಗಿದು ಮನವಿ ಮಾಡುತ್ತೇನೆ ಎಂದು ವಿನಂತಿಸಿದ್ದಾರೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 46 ರೂಪಾಯಿ ಇದ್ದ ಡೀಸೆಲ್ ಬೆಲೆ ಇಂದು 100 ರೂಪಾಯಿ ಆಗಿದೆ, ಪೆಟ್ರೋಲ್ ಬೆಲೆ 72 ರೂಪಾಯಿ ಇಂದ 110 ರೂಪಾಯಿ ಆಗಿದೆ, ಅಡುಗೆ ಎಣ್ಣೆ 80 ರೂಪಾಯಿ ಇತ್ತು, 200 ರೂಪಾಯಿ ಆಗಿದೆ. ಇವ್ರೆಲ್ಲಾ ಇನ್ನೂ ಅಧಿಕಾರದಲ್ಲಿ ಇರಬೇಕಾ? ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ ಹತ್ತು ಕೆ.ಜಿ ಅಕ್ಕಿ ಕೊಡ್ತೀವಿ. ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡ್ತೀವಿ. ಹಾಗಾಗಿ ಕಾಂಗ್ರೆಸ್ ಗೆ ಮತ ನೀಡಬೇಕು ಎಂದು ಮನವಿ ಮಾಡುತ್ತೇನೆ.

ಗೌರಾಪುರ ಗುಡ್ಡದ 21 ಎಕರೆಯನ್ನು ಸರ್ಕಾರ ಅಗ್ಗದ ಬೆಲೆಗೆ ಶಿವರಾಜ್ ಸಜ್ಜನರ್ ಗೆ ಕೊಟ್ಟಿದೆ. ಗುಡ್ಡ ನುಂಗಲು ಹೊರಟಿರುವವರು ಸಜ್ಜನರೋ? ದುರ್ಜನರೋ? ಇಂಥವರಿಗೆ ಮತ ನೀಡುತ್ತೀರಾ ಎಂದು ಇನ್ನೊಮ್ಮೆ ಯೋಚಿಸಿ ಎಂದು ಹೇಳಿದ್ದಾರೆ.

Tags: Basavaraj BommaiBJPBy-electionCongress PartyCovid 19Electionhanagalಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮೋಹನ್ ಭಾಗವತ್ ಮಾತಿನಲ್ಲಿ ದೇಶ ಒಡೆಯುವ ಉದ್ದೇಶವಿದೆ, ರಾಮನ ಹೆಸರಲ್ಲಿ ಹಣ ದುರುಪಯೋಗವಾಗಿದೆ: HDK

Next Post

ಐಟಿ ರೇಡ್ ರಾಜಕೀಯ ಪ್ರೇರಿತ; ಡಿಸೈನ್ ಬಾಕ್ಸ್ ಸಂಸ್ಥೆ ಎಂಡಿ ನರೇಶ್ ಅರೋರಾ

Related Posts

ಸಾಕ್ಷ್ಯ ಬೆದರಿಕೆ ಪ್ರಕರಣದ ಆರೋಪಿನ ಭೇಟಿಯಾದ್ರಾ ವಿಜಯಲಕ್ಷ್ಮಿ ದರ್ಶನ್‌..?
Top Story

ಸಾಕ್ಷ್ಯ ಬೆದರಿಕೆ ಪ್ರಕರಣದ ಆರೋಪಿನ ಭೇಟಿಯಾದ್ರಾ ವಿಜಯಲಕ್ಷ್ಮಿ ದರ್ಶನ್‌..?

by ಪ್ರತಿಧ್ವನಿ
August 23, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಕೆಲವರನ್ನು ಬಂಧಿಸಲಾಗಿದ್ದು, ಇನ್ನೂ ಕೆಲ ಆರೋಪಿಗಳು...

Read moreDetails
ಸ್ವಚ್ಛ ಬೆಂಗಳೂರು: ಬೆಸ್ಕಾಂನಿಂದ ವಾರಾಂತ್ಯದ ವಿಶೇಷ ಅಭಿಯಾನ

ಸ್ವಚ್ಛ ಬೆಂಗಳೂರು: ಬೆಸ್ಕಾಂನಿಂದ ವಾರಾಂತ್ಯದ ವಿಶೇಷ ಅಭಿಯಾನ

August 23, 2026
ರಾಜ್ಯದಲ್ಲಿ ಏಕಾಏಕಿ ಹೆಚ್ಚಿದ H1N1 ಪ್ರಕರಣಗಳು: ಆರೋಗ್ಯ ಇಲಾಖೆ ಕಟ್ಟೆಚ್ಚರ

ರಾಜ್ಯದಲ್ಲಿ ಏಕಾಏಕಿ ಹೆಚ್ಚಿದ H1N1 ಪ್ರಕರಣಗಳು: ಆರೋಗ್ಯ ಇಲಾಖೆ ಕಟ್ಟೆಚ್ಚರ

August 23, 2026
ಹೊಸಕೋಟೆ 4 ಗಂಟೆ ಬಿರಿಯಾನಿಗೆ ಬ್ರೇಕ್‌: ಕಾರಣವೇನು..?

ಹೊಸಕೋಟೆ 4 ಗಂಟೆ ಬಿರಿಯಾನಿಗೆ ಬ್ರೇಕ್‌: ಕಾರಣವೇನು..?

August 23, 2026
ರಾಜ್ಯದಲ್ಲಿ ಬರದ ಛಾಯೆ: ಮಳೆಗಾಗಿ ಕೊಡಗಿನಲ್ಲಿ ಕೃಷಿ ಸಚಿವರಿಂದ ವಿಶೇಷ ಪೂಜೆ

ರಾಜ್ಯದಲ್ಲಿ ಬರದ ಛಾಯೆ: ಮಳೆಗಾಗಿ ಕೊಡಗಿನಲ್ಲಿ ಕೃಷಿ ಸಚಿವರಿಂದ ವಿಶೇಷ ಪೂಜೆ

August 23, 2026
Next Post
ಐಟಿ ರೇಡ್ ರಾಜಕೀಯ ಪ್ರೇರಿತ; ಡಿಸೈನ್ ಬಾಕ್ಸ್ ಸಂಸ್ಥೆ ಎಂಡಿ ನರೇಶ್ ಅರೋರಾ

ಐಟಿ ರೇಡ್ ರಾಜಕೀಯ ಪ್ರೇರಿತ; ಡಿಸೈನ್ ಬಾಕ್ಸ್ ಸಂಸ್ಥೆ ಎಂಡಿ ನರೇಶ್ ಅರೋರಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada