
ಗದಗ ಮೆಡಿಕಲ್ ಕಾಲೇಜಿಗೆ ಕೆ.ಹೆಚ್. ಪಾಟೀಲ್ ಅವರ ಹೆಸರಿಡಲು ಸರ್ಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಸಚಿವರು, ಶಾಸಕರು ಮತ್ತು ಮುಖಂಡರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.

ಇದೇ ಮಾರ್ಚ್ 16ರಂದು ಗದಗದಲ್ಲಿ ಮಾಜಿ ಸಚಿವ ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶ ನೀಡಿ, ಕೆ.ಎಚ್. ಪಾಟೀಲರು ನಾಡು-ನುಡಿಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಗದಗ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯಕ್ಕೆ ಕೆ.ಎಚ್. ಪಾಟೀಲರ ಹೆಸರಿಡಲಾಗುವುದು ಎಂದು ಭರವಸೆ ನೀಡಿದ್ದರು.

ಮಾರ್ಚ್ 27 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ಅವರ ಹೆಸರಿಡಲು ಸಚಿವ ಸಂಪುಟ ನಿರ್ಧರಿಸಿದ್ದು, ಸಚಿವ ಎಚ್.ಕೆ. ಪಾಟೀಲ ಅಭಿಮಾನಿ ಬಳಗದಲ್ಲಿ ಸಂತಸ ಹೆಚ್ಚಿದೆ.









