• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಪ್ರತಿಧ್ವನಿ by ಪ್ರತಿಧ್ವನಿ
May 26, 2026
in ರಾಜಕೀಯ
0
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!
Share on WhatsAppShare on FacebookShare on Telegram

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ಭಾರೀ ಸದ್ದು ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದೆಹಲಿಯತ್ತ ಪ್ರತ್ಯೇಕವಾಗಿ ಪ್ರಯಾಣ ಬೆಳೆಸಿರುವುದು ರಾಜಕೀಯ ವಲಯದಲ್ಲಿ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಇಬ್ಬರೂ ಬೇರೆ ಬೇರೆ ವಿಮಾನಗಳಲ್ಲಿ ತೆರಳಿರುವ ಬೆಳವಣಿಗೆಯೇ ಕಾಂಗ್ರೆಸ್ ಒಳರಾಜಕೀಯದ ಬಗ್ಗೆ ಹೊಸ ಕುತೂಹಲ ಹುಟ್ಟಿಸಿದೆ.

ADVERTISEMENT
Upendra EXCLUSIVE INTERVIEW:ರಾಜಕಾರಣಿಗಳು ವ್ಯಾಪಾರಸ್ಥರು! Prajaakeeya | Upendra | #pratidhvani #politics

ಕಾಂಗ್ರೆಸ್ ಹೈಕಮಾಂಡ್ ನಾಯಕತ್ವದ ಜೊತೆ ನಡೆಯಲಿರುವ ಸಭೆಗಳು ಇದೀಗ ರಾಜ್ಯ ರಾಜಕೀಯದ ಕೇಂದ್ರಬಿಂದುವಾಗಿವೆ. “ಸಿಎಂ ಸ್ಥಾನ ಬದಲಾವಣೆ ಆಗುತ್ತಾ?”, “ಡಿಕೆ ಶಿವಕುಮಾರ್‌ಗೆ ಗ್ರೀನ್ ಸಿಗ್ನಲ್ ಸಿಗುತ್ತಾ?”, “ಸಿದ್ದರಾಮಯ್ಯ ಹೈಕಮಾಂಡ್ ಮಾತಿಗೆ ಸ್ಥಾನ ಬಿಡ್ತಾರಾ?” ಎಂಬ ಪ್ರಶ್ನೆಗಳು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿವೆ.

Zameer Ahmed: ಅಂಬೇಡ್ಕರ್ ಬಗ್ಗೆ ಅದ್ಭುತ ಭಾಷಣ ಮಾಡಿದ‌ಸಚಿವ ಜಮೀರ್..! #ambedkar #speech

ಕಾಂಗ್ರೆಸ್ ಸರ್ಕಾರ ರಚನೆಯಾದ ಆರಂಭದಿಂದಲೇ “ಮೂರು ವರ್ಷ ಸಿದ್ದರಾಮಯ್ಯ, ಎರಡು ವರ್ಷ ಡಿಕೆ ಶಿವಕುಮಾರ್” ಎಂಬ ಪವರ್ ಶೇರಿಂಗ್ ಒಪ್ಪಂದದ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಲೇ ಬಂದಿದೆ. ಅಧಿಕೃತವಾಗಿ ಇದನ್ನು ಯಾರೂ ಒಪ್ಪಿಕೊಂಡಿಲ್ಲವಾದರೂ, ಇದೀಗ ಮತ್ತೆ ಅದೇ ಫಾರ್ಮುಲಾ ಮುನ್ನೆಲೆಗೆ ಬಂದಿದೆ.ಡಿಕೆ ಶಿವಕುಮಾರ್ ದೆಹಲಿ ಭೇಟಿಗೆ ವಿಶೇಷ ಮಹತ್ವ ಸಿಕ್ಕಿದ್ದು, ಹೈಕಮಾಂಡ್ ಜೊತೆ ನಾಯಕತ್ವ ಬದಲಾವಣೆ ಕುರಿತು ನಿರ್ಣಾಯಕ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಒಳವಲಯದಲ್ಲಿ “ಡಿಕೆಶಿಗೆ ಈ ಬಾರಿ ಗುಡ್ ನ್ಯೂಸ್ ಸಿಗಬಹುದೇ?” ಎಂಬ ಕುತೂಹಲವೂ ಜೋರಾಗಿದೆ.

DK Shivakumar: ಡಿಕೆಶಿ ವಿರುದ್ಧ ಲಾಯರ್‌ ಜಗದೀಶ್‌  ಆಕ್ರೋಶ.! #lawyerjagadish #dkshivakumar #dineshgundurao

ಇದರ ನಡುವೆ ಸಚಿವ ಕೆ ಎನಗ ರಾಜಣ್ಣ ನೀಡಿರುವ ಹೇಳಿಕೆ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. “ಪರಮೇಶ್ವರ್ ಮುಖ್ಯಮಂತ್ರಿ ಆಗಲಿ” ಎಂಬ ರಾಜಣ್ಣ ಮಾತು ಕಾಂಗ್ರೆಸ್ ಒಳರಾಜಕೀಯದಲ್ಲಿ ಹೊಸ ತಿರುವು ನೀಡಿದೆ. ಗೃಹ ಸಚಿವ ಜಿ ಪರಮೇಶ್ವರ ಹೆಸರು ಸಿಎಂ ರೇಸ್‌ನಲ್ಲಿ ಕೇಳಿಬಂದಿರುವುದು ರಾಜಕೀಯ ಲೆಕ್ಕಾಚಾರಗಳನ್ನು ಮತ್ತಷ್ಟು ಗೊಂದಲಗೊಳಿಸಿದೆ.

ಕಾಂಗ್ರೆಸ್ ವಲಯದಲ್ಲಿ ಮತ್ತೊಂದು ಚರ್ಚೆ ಏನೆಂದರೆ, ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರ ಶಕ್ತಿ ಪ್ರದರ್ಶನದ ಮೂಲಕ ಹೈಕಮಾಂಡ್‌ಗೆ ಪರೋಕ್ಷ ಸಂದೇಶ ರವಾನಿಸಿದ್ದಾರೆ ಎಂಬುದು. ಸರ್ಕಾರ ರಚನೆ ವೇಳೆ ನೀಡಿದ್ದ ಭರವಸೆ ಈಡೇರಬೇಕು ಎಂಬ ಒತ್ತಡವನ್ನು ಡಿಕೆಶಿ ಬಣ ಮುಂದಿರಿಸುತ್ತಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತಮ್ಮ ರಾಜಕೀಯ ಬಲವನ್ನು ಹೈಕಮಾಂಡ್ ಮುಂದೆ ಪ್ರದರ್ಶಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಸಚಿವರಾದ ಜಿ ಪರಮೇಶ್ವರ, ಸತೀಶ್ ಜಾರಕಿಹೋಳಿ ಹಾಗೂ ಹೆಚ್ ಸಿ ಮಹದೇವಪ್ಪ ಸೇರಿದಂತೆ ಹಲವು ಹಿರಿಯ ನಾಯಕರು ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ ಎಂಬ ಚರ್ಚೆಯೂ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ.

ಒಂದು ಕಡೆ ಸರ್ಕಾರದ ಸ್ಥಿರತೆ, ಮತ್ತೊಂದೆಡೆ ಒಳಬಣಗಳ ಸಮತೋಲನ — ಈ ಎರಡನ್ನೂ ಕಾಯ್ದುಕೊಳ್ಳುವುದು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿದೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯ ನಾಯಕತ್ವದಲ್ಲಿ ಬದಲಾವಣೆ ತರಬೇಕಾ ಅಥವಾ ಈಗಿನ ಸ್ಥಿತಿಯನ್ನೇ ಮುಂದುವರಿಸಬೇಕಾ ಎಂಬ ಗೊಂದಲದಲ್ಲಿದೆ ಎನ್ನಲಾಗುತ್ತಿದೆ.ಇದೀಗ ಎಲ್ಲರ ಕಣ್ಣು ದೆಹಲಿಯ ಸಭೆಗಳತ್ತ ನೆಟ್ಟಿದ್ದು, ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದು ರಾಜ್ಯ ರಾಜಕೀಯದ ಮುಂದಿನ ದಿಕ್ಕನ್ನು ನಿರ್ಧರಿಸಲಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #congress#CongressLeadership#DelhiMeeting#dkshivakumar#karnatakacongress#KarnatakaPolitics#PoliticalCrisis#PoliticalDrama#PowerPolitics#siddaramaiah#SiddaramaiahFactioncongresshighcommandDelhiPoliticsDKSpratidavani
Previous Post

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

Next Post

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

Related Posts

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ
Top Story

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

by ನಾ ದಿವಾಕರ
August 29, 2026
0

ಭಾರತೀಯ ಪ್ರಜಾತಂತ್ರ ಎಲ್ಲಿಂದ ಎಲ್ಲಿಗೆ ಬಂದು ತಲುಪಿದೆ ? ವಸಾಹತು ಆಳ್ವಿಕೆಯಲ್ಲಿ , 1947ರ ಹೊಸ್ತಿಲಲ್ಲೂ ಸಹ ಶೇಕಡಾ 13ರಷ್ಟು ಭಾರತೀಯರು ಮಾತ್ರ ಮತದಾನದ ಹಕ್ಕು ಹೊಂದಿದ್ದರು....

Read moreDetails
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
Next Post
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada